Sanjeevini monthly bazzar in Arudi

ಆರೂಢಿಯಲ್ಲಿ ಸಂಜೀವಿನಿ ಮಾಸಿಕ ಸಂತೆ; ಭರ್ಜರಿ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ: ಸಂಜೀವಿನಿ ಮಾಸಿಕ ಸಂತೆಯ (Sanjeevini monthly bazzar) ಪ್ರದರ್ಶನ ಮತ್ತು ಮಾರಾಟದಿಂದ ಲಾಭದಾಯಕ ಆದಾಯವಿದ್ದು, ಗ್ರಾಮೀಣ ಸ್ವ-ಸಹಾಯ ಸಂಘಗಳ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು
ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಢಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲೇಶ್ (Mallesh) ಹೇಳಿದರು.

ಆರೂಢಿಯಲ್ಲಿ ಸಂಜೀವಿನಿ ಮಾಸಿಕ ಸಂತೆ; ಭರ್ಜರಿ ಪ್ರತಿಕ್ರಿಯೆ

ಇಂದು ಆರೂಢಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಸಂತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಸ್ವ-ಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು – ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ‘ಮಾಸಿಕ ಸಂತೆ’ಕಾರ್ಯಕ್ರಮ ಅನುಷ್ಠಾನಗೊಳಿಸಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವ-ಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ.

ಸಂಜೀವಿನಿ ಮಾಸಿಕ ಸಂತೆಯನ್ನು
ಆರೂಢಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಾರಾಜಮ್ಮ ಚಾಲನೆ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ 30 ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಭಾಗವಹಿಸಿದರು.

ಆರೂಢಿಯಲ್ಲಿ ಸಂಜೀವಿನಿ ಮಾಸಿಕ ಸಂತೆ; ಭರ್ಜರಿ ಪ್ರತಿಕ್ರಿಯೆ

ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು.

ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು, ಹಣ್ಣು- ಹಂಪಲು, ಹೂ, ತರಕಾರಿ, ಟೆರಾಕೂಟಾ ವಿಡಿವಿಕೆ ಉತ್ಪನ್ನಗಳು, ಜ್ಯೂಟ್ ಬ್ಯಾಗ್, ಕಡಲೆ ಫೂರಿ, ಕಬ್ಬಿನ ಜ್ಯೂಸ್, ಸೋಡಾ, ಬಜ್ಜಿ ಬೋಂಡಾ, ಗೊಂಬೆಗಳು, ಜೇನುತುಪ್ಪ, ಲಭ್ಯವಿದ್ದವು.

ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆಯೋಜಿಸಲಾಗಿತ್ತು.

ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ.

ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಚೈತ್ರಾ, ವಲಯ ಮೇಲ್ವಿಚಾರಕರಾದ ಶ್ರೀನಿವಾಸ್, ಶ್ವೇತ, ಒಕ್ಕೂಟದ ಅಧ್ಯಕ್ಷೆ ವಿಜಯಾಬಿಕೆ ಸೇರಿದಂತೆ ಒಕ್ಕೂಟದ ಎಲ್ಲಾ ಸಿಬ್ಬಂದಿಗಳು ಸ್ವ-ಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಇದ್ದರು.

ರಾಜಕೀಯ

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ.. ಬಾಯಿ ಬಿಡದ ಬಿಜೆಪಿ ನಾಯಕರು: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ.. ಬಾಯಿ ಬಿಡದ ಬಿಜೆಪಿ ನಾಯಕರು: ಡಿಸಿಎಂ ಡಿ.ಕೆ.

"ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯನ್ನ 60 ರೂಪಾಯಿ ಏರಿಕೆ ಮಾಡಿದೆ. ಇದರ ಬಗ್ಗೆ ಒಬ್ಬನೇ ಒಬ್ಬ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ

[ccc_my_favorite_select_button post_id="120046"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!