ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

National Lok Adalat on December 13

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ (National Lok Adalat) ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಂಗಳೂರು ಗ್ರಾಮಾಂತರ, ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ಧಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು.

ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್ ಲೈನ್/ ಪಿಡಿಯೋ ಕಾನ್ಸರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಜೊತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 13.12.2025 ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತನ್ನು ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ, ಆನ್ ಲೈನ್/ವಿಡಿಯೋ ಕಾನ್ವರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಲೋಕ್ ಆದಾಲತ್ ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]