Not responding to farmers in distress is an unforgivable crime: B.Y. Vijayendra

ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ: ಬಿ.ವೈ. ವಿಜಯೇಂದ್ರ

ದಾವಣಗೆರೆ: ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ನಡಹಳ್ಳಿ, ರಾಜ್ಯದ ಹಿರಿಯ ನಾಯಕ ಸಿ.ಟಿ.ರವಿ, ಮುಖಂಡರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿ ಜಿಲ್ಲೆಯ ನಾಯಕರು ಒಟ್ಟಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ರಾಜ್ಯದಲ್ಲಿರುವ ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ; ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಟೀಕಿಸಿದರು.

ಮೆಕ್ಕೆ ಜೋಳದ ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಲಕ್ಷ್ಮೇಶ್ವರದಲ್ಲಿ ಹೋರಾಟ ನಡೆಯುತ್ತಿದೆ. ನವಲಗುಂದದಲ್ಲಿ ರೈತ ಮುಖಂಡ ಶಂಕ್ರಣ್ಣ ಅಂಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಾಗಲಕೋಟೆ, ಶಿವಮೊಗ್ಗ ಸೇರಿ ಅನೇಕ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಬೆಂಬಲ ಬೆಲೆ ಘೋಷಿಸಿದರು ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ತುಂಗಭದ್ರಾ ಅಣೆಕಟ್ಟಿಗೆ 32 ಕ್ರಸ್ಟ್ ಗೇಟ್ ಅಳವಡಿಸದೇ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಸುತ್ತಲಿನ ರೈತರು ಎರಡನೇ ಬೆಳೆ ಬೆಳೆಯಲು ಆಗುತ್ತಿಲ್ಲ; ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಅನ್ಯಾಯ ಮಾಡಿದೆ. ಅವರಿಗೆ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ರಾಜ್ಯದ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೇ ಇಡೀ ಸಚಿವಸಂಪುಟವು ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತು ಚರ್ಚಿಸಲು ಸಭೆ ಕರೆದರೆ ಕೃಷಿ ಸಚಿವರು ದೆಹಲಿಯಲ್ಲಿದ್ದರು ಎಂದು ಟೀಕಿಸಿದರು.

ಸಿಎಂ ಯಾರೆಂಬುದು ಸಂಬಂಧವಿಲ್ಲ; ಪರಿಹಾರ ಕೊಡಿ

ಮುಖ್ಯಮಂತ್ರಿ ಯಾರೆಂಬುದು ನಮಗೆ ಸಂಬಂಧವಿಲ್ಲ; ರೈತರ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದೇ 27, 28ರಂದು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ಡಿ.1 ಮತ್ತು 2ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಬಿಜೆಪಿ ರೈತ ಮೋರ್ಚಾ ಹೋರಾಟ ಮಾಡಲಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಕಬ್ಬು ಬೆಳೆಗಾರರು, ಮೆಕ್ಕ ಜೋಳ ಬೆಳೆಗಾರರ ಸಮಸ್ಯೆಗೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು. ಸರಕಾರವನ್ನು ಎಚ್ಚರಿಸುವ ದೃಷ್ಟಿಯಿಂದ ಇಲ್ಲಿ ಹೋರಾಟಕ್ಕೆ ಚಾಲನೆ ಕೊಡಲಾಗುತ್ತಿದೆ ಎಂದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!