ರೈತರಿಗೆ ಬೇಕಿರುವುದು ನೀರು, ಗ್ಯಾರಂಟಿಗಳಲ್ಲ; ನಿಖಿಲ್ ಕುಮಾರಸ್ವಾಮಿ

What farmers need is water, not guarantees; Nikhil Kumaraswamy

ರಾಯಚೂರು, (ಸಿಂಧನೂರು): ರೈತರಿಗೆ ಬೇಕಿರೋದು ನಿಮ್ಮ ಗ್ಯಾರಂಟಿಗಳಲ್ಲ, ಅವರಿಗೆ ನೀರು ಕೊಡಿ ಅವರೇ ನಿಮ್ಮ ಗ್ಯಾರಂಟಿಗಳಿಗೆ ಹಣ ಕೊಡ್ತಾರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಂಧನೂರಿನ ಎಪಿಎಂಸಿ ಆವರಣದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ 4 ಜಿಲ್ಲೆಯ ರೈತರ ಬದುಕು ಬೀದಿಗೆ ಬಂದಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಇದು ದಪ್ಪ ಚರ್ಮದ ಸರ್ಕಾರ.

ರೈತರಿಗೆ ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 8 ರಿಂದ 10 ದಿನಗಳ ಕಾಲ ಗಡುವು ನೀಡುತಿದ್ದೇವೆ. ಒಂದು ವೇಳೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೇ ತುಂಗಭದ್ರಾ ಆಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು.

ತುಂಗಭದ್ರಾ ನದಿ ರೈತರ ತಾಯಿ

ತುಂಗಭದ್ರಾ ನದಿ ಈ ಭಾಗದ ಜೀವನಾಡಿ. ರೈತರು ಭೂಮಿ ತಾಯಿಯನ್ನ ಮಾತ್ರ ನಂಬಿ ಬದುಕುತ್ತಿದ್ದಾನೆ. ಈ ಸರ್ಕಾರ ರೈತನ ಬದುಕು ಕಸಿದುಕೊಳ್ಳಲು ಮುಂದಾಗಿದೆ. ಡ್ಯಾಂನಲ್ಲಿ 70 ಟಿಎಂಸಿ ನೀರಿದೆ. ಕುಮಾರಣ್ಣ ಸಿಎಂ ಆಗಿದ್ದ ವೇಳೆ 70 ಟಿಎಂಸಿಗೂ ಕಡಿಮೆ ನೀರು ಇತ್ತು. ಆಗ ರೈತರ ಎರಡು ಬೆಳೆಗೆ ನೀರು ಕೊಟ್ಟರು ಎಂದು ಹೇಳಿದರು.

ಶಾಸಕರ ಖರೀದಿಗೆ 50 ಕೋಟಿ

ಆಂಧ್ರ- ತೆಲಂಗಾಣ ಭಾಗಕ್ಕೆ ಶೇ.33ರಷ್ಟು ನೀರು ಹೋಗುತ್ತೆ. ಆದರೂ ಅಲ್ಲಿನ ರೈತರಿಗೆ ನೀರು ಕೊಡಬಹುದು. ಆದ್ರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ. ತುಂಗಾಭದ್ರಾ ಕ್ರಸ್ಟ್‌ ಗೇಟ್ ರಿಪೇರಿಗೆ 11ಕೋಟಿ ರೂ.ಕೊಡಲು ಈ ಸರ್ಕಾರಕ್ಕೆ ಶಕ್ತಿ ಇಲ್ಲ. 50 ಕೋಟಿ ರೂ. ಶಾಸಕರಿಗೆ ಕೊಟ್ಟು ಖರೀದಿಗೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಗುಡುಗಿದರು.

ಸರ್ಕಾರ ತನ್ನ ತಪ್ಪನ್ನು ಮುಚ್ಚಿಟ್ಟುಕೊಳ್ಳುವ ಮೂಲಕ ಎರಡನೇ ಬೆಳೆಗೆ ನೀರಿಲ್ಲ ಎಂದು ರೈತರ ದಾರಿ ತಪ್ಪಿಸುವ ಕೆಲಸ ಮಾಡಿದೆ. ಜಲಸಂಪನ್ಮೂಲ ಸಚಿವರು,ಉಸ್ತುವಾರಿ ಮಂತ್ರಿಗಳು , ಅಧಿಕಾರಿಗಳು ಸ್ಥಳಕ್ಕೆ ಬಂದು ರೈತರಿಗೆ ನ್ಯಾಯ ಕೊಡುವವರೆಗೆ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಜನತಾದಳ ಪಕ್ಷ ರೈತರ ಪಕ್ಷ. ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಕೊನೆಯ ಉಸಿರು ಇರುವವರೆಗೆ ರೈತರಿಗಾಗಿ ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹನುಮಂತಪ್ಪ ಆಲ್ಕೋಡ ಅವರು, ಸುರೇಶ್ ಬಾಬು, ಶರಣಗೌಡ ಕಂದಕೂರು, ನೇಮಿರಾಜ್ ನಾಯ್ಕ್ , ಕರೆಮ್ಮ ಜೆ. ನಾಯ್ಕ್, ಜೆ.ಕೆ. ಕೃಷ್ಣ ರೆಡ್ಡಿ, ರಾಜಾ ವೆಂಕಟಪ್ಪ ನಾಯಕ್ ಅವರು, ಸಿ.ವಿ. ಚಂದ್ರಶೇಖರ್, ಮಹಾಂತೇಶ್ ಪಾಟೀಲ್, ಸಿದ್ದು ಬಂಡಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ರೈತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!