ಕುಮಾರಣ್ಣನ ಮನವಿಗೆ ಕೇಂದ್ರದ ಸ್ಪಂದನೆ; ಕರ್ನಾಟಕದ 9 ಜಿಲ್ಲೆಗಳಲ್ಲಿ NICDP ಯೋಜನೆಗೆ ಒಲವು

Center responds to Kumaranna's request; NICDP project for 9 districts of Karnataka preferred

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

2025 ನವೆಂಬರ್ 13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ.

ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ಸಚಿವ ಗೋಯೆಲ್ ಅವರು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು.

ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರ ಜತೆ ಕುಮಾರಸ್ವಾಮಿ ಅವರು ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ

ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ

ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಉತ್ತಮವಾಗಿತ್ತು. ಅವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಾಕಾರಕ್ಕೆ ಈ ಯೋಜನೆ ಪೂರಕವಾಗಿದೆ. ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]