Computer education from first grade: Madhu Bangarappa

ಗುಡ್ಮಾರ್ನಿಂಗ್ ನ್ಯೂಸ್: ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನುಂದೆ 1ನೇ ತರಗತಿಯಿಂದಲೇ ಕಂಪ್ಯೂಟ‌ರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದರು.

900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ದತೆ ನಡೆಸಿದ್ದು, ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ನನ್ನ ಕರ್ತವ್ಯವಾಗಿದೆ ಎಂದರು.

ಬಳಿಕ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶದಲ್ಲಿ ಕಳೆದ ತಮ್ಮ ವಿಶಿಷ್ಠ ಅನುಭವಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಯುವ ವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ತಿಳಿಸಿದರು. ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಕಾರ್ಯಕ್ರಮದಿಂದಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಖಗೋಳ ಶಾಸ್ತ್ರದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ನೆರವಾಗಿದೆ. ಜೊತೆಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಸಾಧನೆ ಮತ್ತು ಅನುಭವಗಳು ನಾಡಿನ ಯುವ ವಿಜ್ಞಾನಿಗಳಿಗೆ ಸ್ಫೂರ್ತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಸೇರಿದಂತೆ ಹಲವು ಗಣ್ಯರು ಹಾಗೂ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!