Government responds to farmers' distress: Additional Rs. 1033.60 crore subsidy released to farmers in a single day

ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ: ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಸಬ್ಸಿಡಿ ಬಿಡುಗಡೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ತಿಳಿಸಿದರು.

ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.

ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಎಸ್ಡಿಆರ್ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ.

ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.

ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.

ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.

ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು PDNA (Recovery & Reconstruction) ಅಡಿಯಲ್ಲಿ ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ.

ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!