ವಿದ್ಯುತ್ ಮಗ್ಗಗಳ ಮೀಸಲು ಕಾಯ್ದೆ ರೂಪಿಸಲು ಆಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ನೇಕಾರರ ಪ್ರತಿಭಟನೆ

Weavers' protest in Doddaballapur demanding power loom reservation act

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ನೇಕಾರರು ತಯಾರು ಮಾಡುವ ಬಟ್ಟೆಗಳನ್ನು ಸೂರತ್ ಹಾಗೂ ರೇಪಿಯರ್ ಮಗ್ಗಗಳಲ್ಲಿ ನೇಯ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಪರಿಣಾಮ ದೊಡ್ಡಬಳ್ಳಾಪುರದ ನೇಕಾರಿಕೆ ಸಂಕಷ್ಟಕ್ಕೀಡಾಗಿದ್ದು, ಈ ದಿಸೆಯಲ್ಲಿ ವಿದ್ಯುತ್ ಮಗ್ಗಗಳ ಮೀಸಲು ಕಾಯ್ದೆ ರೂಪಿಸಬೇಕಿದೆ. ಹೊರ ರಾಜ್ಯಗಳಿಂದ ಬರುವ ಸೀರೆ ಮಾರಾಟ ತಡೆಯಬೇಕಿದ್ದು, ನೇಯ್ಗೆ ಉದ್ಯಮ ಭಿಕ್ಕಟ್ಟಿಗೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ, ನೇಕಾರರ ಹಿತರಕ್ಷಣಾ ಸಮಿತಿ, ದೊಡ್ಡಬಳ್ಳಾಪುರ ಟೆಕ್ಸ್ಟೈಲ್ಸ್ ವೀವರ್ಸ್ ಅಸೋಸಿಯೇಶನ್, ನೇಕಾರರ ಹೋರಾಟ ಸಮಿತಿ, ವಿವಿಧ ನೇಕಾರ ಸಂಘಟನೆಗಳ ನೇತೃತ್ವದಲ್ಲಿ ನೇಕಾರರಿಂದ ಬೃಹತ್ ಪ್ರತಿಭಟನಾ (Weavers’ protest) ನಡೆಸಲಾಯಿತು.

ನಗರದ ಕರೇನಹಳ್ಳಿ ಬಯಲು ಬಸವಣ್ಣ ದೇವಸ್ಥಾನದ ಬಳಿಯಿಂದ ಮರವಣಿಗೆ ತಾಲ್ಲೂಕು ಕಛೇರಿ ಮುಂಭಾಗದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ನೂರಾರು ನೇಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೇಪಿಯರ್ ಮತ್ತು ಸೂರತ್ನಿಂದ ತರುವ ಏರ್ಜೆಟ್ ಸೀರೆಗಳನ್ನು ಇಲ್ಲಿಗೆ ತಂದು ಮಾರುವುದನ್ನು ಈ ಕೂಡಲೇ ನಿಲ್ಲಿಸಬೇಕು. ರೇಪಿಯರ್ ಮಗ್ಗಗಳಲ್ಲಿ ಇಲ್ಲಿನ ಸೀರೆಗಳನ್ನು ನೇಯದಂತೆ ಸರ್ಕಾರ ಕಾನೂನು ಜಾರಿಗೆ ತರಬೇಕಿದೆ ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ದೊಡ್ಡಬಳ್ಳಾಪುರದಲ್ಲಿ 25ಸಾವಿರ ಮಗ್ಗಗಳಿದ್ದು, ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು, ವಿವಿಧ ಹಂತಗಳ ನೇಕಾರರು ಹಾಗೂ ಕುಟುಂಬ ಸೇರಿ ಒಂದು ಲಕ್ಷ ಮಂದಿ ಅವಲಂಬಿಸಿದ್ದಾರೆ. ಈ ಮದ್ಯೆ ನಮ್ಮ ನೇಕಾರಿಕೆಯಲ್ಲಿ ನಾವು ಉತ್ಪಾದನೆ ಮಾಡುವ ಸೀರೆಗಳನ್ನು ಸೂರತ್ ನಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು, ದೊಡ್ಡಬಳ್ಳಾಪುರಕ್ಕೆ ತಂದು ನಾವು ಮಾರುತ್ತಿರುವ ಬೆಲೆಗಿಂತ ಅರ್ಧ ಬೆಲೆಗೆ ಮಾರಾಟ ಮಾಡಿ ದೊಡ್ಡಬಳ್ಳಾಪುರ ನೇಕಾರಿಕೆ ಉದ್ಯಮವನ್ನು ಹಾಳು ಮಾಡುತ್ತಿದ್ದು, ಸರ್ಕಾರ ಈ ಬಗ್ಗೆ ಕಾಯ್ದೆ ರೂಪಿಸಿ, ನೇಕಾರರ ಹಿತ ಕಾಪಾಡಬೇಕಿದೆ ಎಂದರು.

ಮುಕ್ತ ವ್ಯಾಪರ ಒಪ್ಪಂದ, ಜಾಗತೀಕರಣದ ಪ್ರಭಾವದಿಂದಾಗಿ, ನೇಕಾರರು ಮಾರಾಟ ಮಾಡುವ ಸೀರೆಗಳಿಗೆ ಮಾರುಕಟ್ಟೆ ಇಲ್ಲದಂತಾಗಿ ನೇಕಾರರು ಸಂಕಷ್ಟದಲ್ಲಿದ್ದಾರೆ. ಹಿಂದೆ ನೇಕಾರರ ಹೋರಾಟದ ಫಲವಾಗಿ, ಉಚಿತ ವಿದ್ಯುತ್ ಮೊದಲಾದ ಸೌಲಭ್ಯಗಳು ಸರ್ಕಾರದಿಂದ ದೊರೆತಿತ್ತು. ಈಗ ಸರ್ಕಾರ ಕಚ್ಚಾ ವಸ್ತುಗಳ ಬೆಲೆ ಕಡಿಮೆ ಮಾಡುವುದರೊಂದಿಗೆ, ನೇಕಾರರು ಉತ್ಪಾದಿಸಿದ ಬಟ್ಟೆಗಳನ್ನು ಖರೀದಿಸುವ ವ್ಯವಸ್ಥೆ ಮಾಡಬೇಕಿದೆ. ಈ ಕುರಿತು ಡಿ.1ರಂದು ಸಂವಾದ ಏರ್ಪಡಿಸಲಾಗಿದೆ ಎಂದರು.

ನೇಕಾರರು ಭಾವನಾತ್ಮಕವಾಗಿರದೇ ವಾಸ್ತವ ಸಂಗತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಇದು ಸರ್ಕಾರದ ಕಾಯ್ದೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ನಿರಂತರ ಹೋರಾಟ ಹಾಗೂ ಒತ್ತಾಯದ ಮೂಲಕ ಬಗೆಹರಿಸಿಕೊಳ್ಳಬೇಕಿದೆ ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ನೇಯ್ಗೆ ಉದ್ಯಮದ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಪರಿಹಾರ ಸೂಚಿಸಬೇಕಿದ್ದು, ಅಧಿಕಾರಿಗಳು ಹಾಗೂ ಸರ್ಕಾರ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರದ ಸೀರೆಗಳನ್ನು ಮಿಲ್ಗಳಲ್ಲಿ ತಯಾರು ಮಾಡಲಾಗುತ್ತಿರುವುದು ನೇಕಾರರಿಗೆ ಸಂಕಷ್ಟವಾಗಿದೆ. ಇದಕ್ಕೆ ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ಉತ್ಪನ್ನಗಳನ್ನು ತಯಾರಿಸಬಾರದು ಎಂದು 2006ರ ಕಾಯ್ದೆಯಲ್ಲಿ ಇರುವ ಅಂಶಗಳ ಆಧಾರದ ಮೇಲೆ ಈ ಅಧಿವೇಷನದಲ್ಲಿ ಸರ್ಕಾರದ ಗಮನಕ್ಕೆ ತಂದು ಕಾಯ್ದೆ ರೂಪಿಸಲು ಮನವಿ ಮಾಡಲಾಗುವುದು ಎಂದು ನೇಕಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ವೇಳೆ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕರ್ನಾಟಕ ರಾಜ್ಯ ಕೈ ಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್, ಜಿಲ್ಲಾ ಉಪನಿರ್ದೇಶಕ ಸುರೇಶ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!