PM Modi road show in Udupi..

ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ..

ಉಡುಪಿ: ಕಡಲತಡಿಯ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಇಂದು ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ ಮತ್ತು ಒಂದು ಲಕ್ಷ ಭಕ್ತರ ಸಾಮೂಹಿಕ ಭಗವದ್ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಿದ್ದಾರೆ.

ಪ್ರಧಾನಿ ಅವರ ಸ್ವಾಗತಕ್ಕೆ ನಗರದಲ್ಲಿ ಅದ್ದೂರಿಯ ಸಿದ್ಧತೆ ಮಾಡಲಾಗಿತ್ತು.

ಮೋದಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ರೋಡ್‌ಶೋ ಆರಂಭಿಸಿದರು. ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ.

ಬಳಿಕ ಶ್ರೀಕೃಷ್ಣನ ದರ್ಶನ ಪಡೆದು ಬಳಿಕ ದೇಗುಲದ ಆಚರಣೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಗೀತಾಪಾರಾಯಣದ ಕಾಠ್ಯಕ್ರಮದ ಜತೆಯಲ್ಲಿಯೇ ಗರ್ಭಗುಡಿಯ ಮುಂಭಾಗದಲ್ಲಿರುವ ತೀರ್ಥ ಮಂಟಪಕ್ಕೆ ಮತ್ತು ಕನಕನ ಕಿಂಡಿಗೆ ಚಿನ್ನದ ಹೊದಿಕೆ (ಕನಕ ಕವಚ)ಯನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ನಿರೀಕ್ಷೆ ಇದೆ.

ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕನಕನ ಕಿಂಡಿಗೆ ಚಿನ್ನದ ಹೊದಿಕೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಗೀತಾ ಪಠಣವು ಬೆಳಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ.

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಲಕ್ಷ ಕಂಠ ಗೀತಾ ಪಾರಾಯಣವು ನವೆಂಬರ್ 8 ರಂದು ಪ್ರಾರಂಭವಾಗಿದ್ದು ಡಿಸೆಂಬರ್ 7 ರವರೆಗೆ ನಡೆಯಲಿದೆ.

ಶಾಲೆಗಳಿಗೆ ರಜೆ

ಸಂಚಾರ ವ್ಯವಸ್ಥೆಯನ್ನು ಸುಗಮ ಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ಉಡುಪಿಯಲ್ಲಿ ಹೈಸ್ಕೂಲ್ ವರೆಗಿನ ಶಾಲೆಗಳಿಗೆ ರಜೆ ಸಾರಲಾಗಿದೆ. ಜನಸಂದಣಿಯನ್ನು ನಿಯಂತ್ರಿಸಲು ಜಿಲ್ಲೆಯ ಹಲವು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಮಠದ ಆವರಣಕ್ಕೆ ಸಾರ್ವಜನಿಕ ಪ್ರವೇಶವನ್ನು ಮಧ್ಯಾಹ್ನ 3 ಗಂಟೆಯವರೆಗೆ ಸೀಮಿತಗೊಳಿಸಲಾಗಿದೆ. ನಗರದ ಮುಖ್ಯ ಮಾರ್ಗದಲ್ಲಿ ಅಂಗಡಿ ಮುಂಗಗಟ್ಟುಗಳನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚಲು ಸೂಚಿಸಲಾಗಿದೆ.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!