We have falsified Modi's criticisms on the guarantee: D.K. Shivakumar

ಗ್ಯಾರಂಟಿ ಕುರಿತ ಮೋದಿಯವರ ಟೀಕೆಗಳನ್ನು ಸುಳ್ಳು ಮಾಡಿದ್ದೇವೆ; ಅವರು ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಪೋಷಕರು, ಎರಡನೇ ತಾಯಿಯಾಗಿ ಜವಾಬ್ದಾರಿ ಹೊತ್ತು ಮಕ್ಕಳನ್ನು ಸಲಹಿ ದೇಶದ ಭವಿಷ್ಯ ರೂಪಿಸುವವರು. ಅಕ್ಷರಭ್ಯಾಸ ಮಾಡಿಸುವ ಸರಸ್ವತಿಯ ಸನ್ನಿಧಿ ಅಂಗನವಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅಂಗನವಾಡಿ ಕಾರ್ಯಕರ್ತೆಯರ ಕೆಲಸವನ್ನು ಬಣ್ಣಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಸ್ಥಾಪನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು. ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಸ್ವಂತ ಮಕ್ಕಳಿಗೂ ಸಮಯ ನೀಡದೆ, ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತ್ಯಾಗಮೂರ್ತಿಗಳು ನೀವು” ಎಂದರು.

ಹೆಣ್ಣು ಕುಟುಂಬ ಹಾಗೂ ಸಮಾಜದ ಶಕ್ತಿ

“ಜನನ ನೀಡುವವಳು ತಾಯಿ, ಜೋಪಾನ ಮಾಡುವವಳು ಅಕ್ಕ, ಅಕ್ಷರ ಕಲಿಸಿದಾಕೆ ಶಿಕ್ಷಕಿ, ಜೊತೆಯಾಗಿ ನಿಲ್ಲುವವಳು ಹೆಂಡತಿ, ಮುಪ್ಪಿನಲ್ಲಿ ಆರೈಕೆ ಮಾಡುವವಳು ಮಗಳು, ಸತ್ತಾಗ ಜಾಗ ಕೊಡುವವಳು ಭೂಮಿ ತಾಯಿ. ಮನೆಯನ್ನು ಬೆಳಗುವವಳು ಹೆಣ್ಣು. ನೀವೆ ಕುಟುಂಬ ಹಾಗೂ ಸಮಾಜದ ಶಕ್ತಿ” ಎಂದು ಶ್ಲಾಘಿಸಿದರು.

“ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಗ್ರಾಮದ ಮಹಿಳೆಯರ ಆರೋಗ್ಯ ಕಾಪಾಡುವ ಕೆಲಸವನ್ನೂ ಮಾಡುತ್ತಿದ್ದಾರೆ. ನಿಮ್ಮ ತ್ಯಾಗ, ಪರಿಶ್ರಮವನ್ನು ಮರೆಯಲು ಸಾಧ್ಯವಿಲ್ಲ. ಇಂದಿರಾಗಾಂಧಿ ಅವರು ಐವತ್ತು ವರ್ಷಗಳ ಹಿಂದೆ ತಂದಂತಹ ಕನಸಿನ ಯೋಜನೆಯ ಯಶಸ್ಸಿಗೆ ದುಡಿಯುತ್ತಿರುವ ಅಂಗನವಾಡಿ ತಾಯಂದಿರಿಗೆ ಎಷ್ಟೇ ಕೃತಜ್ಞತೆ ಸಲ್ಲಿಸಿದರು ಕಡಿಮೆಯೇ” ಎಂದು ಹೇಳಿದರು.

ಸ್ತ್ರೀ ಶಕ್ತಿ ಸಂಘಗಳಿಂದ ಆರ್ಥಿಕ ಸಬಲತೆ

ಮನಮೋಹನ್‌ ಸಿಂಗ್‌ ಅವರ ಕಾಲದಲ್ಲಿ ಆಶಾ ಯೋಜನೆ, ಎಸ್‌.ಎಂ.ಕೃಷ್ಣ ಅವರ ಕಾಲದಲ್ಲಿ ಸ್ತ್ರೀ ಶಕ್ತಿ ಸಂಘ ಯೋಜನೆ ತರಲಾಯಿತು. ನಾನು ಸಹಕಾರ ಸಚಿವನಾಗಿದ್ದಾಗ ಬೀದರ್‌ ಗೆ ತೆರಳಿದ್ದ ವೇಳೆ ಮಹಿಳಾ ಸಂಘಟನೆ ಕೆಲಸಗಳನ್ನು ಗಮನಿಸಿ ಇದಕ್ಕೆ ಒಂದು ಸ್ವರೂಪ ನೀಡಬೇಕು ಎಂದು ಎಸ್.ಎಂ.ಕೃಷ್ಣ ಅವರ ಬಳಿ ಚರ್ಚೆ ನಡೆಸಿದೆ. ತದ ನಂತರ ಕ್ಯಾಬಿನೆಟ್‌ ಮುಂದೆ ಚರ್ಚಿಸಿ ಸಚಿವರಾಗಿದ್ದ ಮೋಟಮ್ಮ ಅವರಿಗೆ ಇದರ ಜವಾಬ್ದಾರಿ ನೀಡಲಾಯಿತು” ಎಂದರು.

“ಇಂದು ಸ್ತ್ರೀ ಶಕ್ತಿ ಸಂಘಗಳು ಸಮಾಜದ ಶಕ್ತಿಗಳಾಗಿ ಬೆಳೆದಿವೆ. ಇದರಿಂದ ಆರ್ಥಿಕವಾದ ಶಕ್ತಿ ಲಭಿಸಿದೆ. ತಮ್ಮ ಕುಟುಂಬಗಳನ್ನು ಸಲಹುತ್ತಿದ್ದಾರೆ. ಇಂತಹ ಶಕ್ತಿಯನ್ನು ಕಾಂಗ್ರೆಸ್‌ ಮಹಿಳೆಯರಿಗೆ ನೀಡಿದೆ. ಇಂತಹ ಯಶಸ್ವಿ ಕಾರ್ಯಕ್ರಮ ಇಡೀ ದೇಶದಲ್ಲಿ ಯಾರು ಮಾಡಿಲ್ಲ” ಎಂದರು.

“ವರದಕ್ಷಿಣೆ ನಿಷೇಧ, ಬಾಲ್ಯವಿವಾಹ ತಡೆ ಕಾಯ್ದೆ, ಈಗ ಅಕ್ಕ ಪಡೆ ಯೋಜನೆ ನೀಡಿದ್ದೇವೆ. ಮಹಿಳಾ ಪರವಾಗಿ ಆಲೋಚಿಸದ ವಿಪಕ್ಷಗಳನ್ನು ನಾನು ಟೀಕೆ ಮಾಡುವುದಿಲ್ಲ. ನಂಬಿಕೆಗಿಂತ ದೊಡ್ಡ ದೇವರಿಲ್ಲ ಎಂದು ಸರ್ವಜ್ಞ ತನ್ನ ತ್ರಿಪದಿಯಲ್ಲಿ ಹೇಳುತ್ತಾನೆ. ಅದೇ ರೀತಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ವೇಳೆಯಲ್ಲಿ ನಮ್ಮ ತಾಯಂದಿರ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟುಕೊಂಡು ಅನೇಕ ಮಹಿಳಾಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ” ಎಂದರು.

“ದೇವರು ವರ, ಶಾಪ ನೀಡುವುದಿಲ್ಲ. ಬದಲಾಗಿ ಅವಕಾಶ ನೀಡುತ್ತಾನೆ. ತಮಗೆ ಸಿಕ್ಕ ಅವಕಾಶದಲ್ಲಿ ಸಾಕಷ್ಟು ಜನಪರ ಕೆಲಸ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಾರಂಭಿಸಿರುವ ಅಕ್ಕ ಪಡೆ ಹಾಗೂ ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘ ಇತಿಹಾಸದಲ್ಲಿ ಮಾದರಿಯಾಗಿ ಉಳಿಯಲಿದೆ” ಎಂದರು.

ಮೋದಿಯವರ ಟೀಕೆಗಳನ್ನು ಸುಳ್ಳು ಮಾಡಿದ್ದೇವೆ; ಅವರು ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ

“ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರು ಟೀಕೆ ಮಾಡಿದರು. ಇಂದು 1.26 ಕೋಟಿ ಮಹಿಳೆಯರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಈಗ ಬಿಜೆಪಿಯವರು ಬೇರೆ, ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರ ಬಲವನ್ನು ಹೆಚ್ಚಿಸಿದೆ. ಹೆಣ್ಣು ಕುಟುಂಬದ ಕಣ್ಣು ಎನ್ನುವ ಮಾತಿನ ಮೇಲೆ ನಂಬಿಕೆಯಿಟ್ಟು ಕೆಲಸ ಮಾಡುತ್ತಿದ್ದೇವೆ” ಎಂದರು.

“ರಾಜ್ಯದಲ್ಲಿ ಮತ್ತೊಮ್ಮೆ ನಿಮ್ಮ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಿ ಕೊಡಬೇಕು. ಎಲ್ಲಾ ತಾಯಂದಿರ ಆಶೀರ್ವಾದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೇಲಿರಲಿ. ಪ್ರತಿಯೊಬ್ಬರ ಮನೆಯ ದೀಪ ಬೆಳಗುವ ಕಾರ್ಯಕ್ರಮ ಕಾಂಗ್ರೆಸ್‌ ಸರ್ಕಾರ ಮಾಡಿದೆ, ಮಾಡಲಿದೆ” ಎಂದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!