Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಆರೋಗ್ಯದ ಕಡೆ ಗಮನ ನೀಡಿ

Astrology: ಶನಿವಾರ, ನವೆಂಬರ್ 29, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಅತಿಯಾದ ಹಠ ಒಳ್ಳೆ ಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ. ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರ ಲಿವೆ.ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ. (ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರ ಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ನವಮಿ
ನಕ್ಷತ್ರ: ಪೂರ್ವಾಭಾದ್ರ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!