BPL cards of the poor have been cancelled: R. Ashoka

ಬಡವರ ಬಿಪಿಎಲ್‌ ಕಾರ್ಡುಗಳನ್ನು ರದ್ದು ಮಾಡಲಾಗಿದೆ: ಆರ್‌.ಅಶೋಕ ಆಕ್ರೋಶ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ.

ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು.

ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ ಕೇವಲ ಬೆಂಗಳೂರು ಸಂಬಂಧಿತ ಮಸೂದೆಗಳನ್ನು ತರುತ್ತಿದ್ದಾರೆ. ಹೀಗಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಅಗತ್ಯವಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ. 8 ದಿನದ ಬದಲು 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ.

ಕಳೆದ ಸಲ ಕೊನೆಯ ಎರಡು-ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಒಂದಷ್ಟು ಭರವಸೆಗಳನ್ನು ನೀಡಿದ್ದರು. ಅದನ್ನು ಇಂದಿಗೂ ಈಡೇರಿಸಿಲ್ಲ ಎಂದರು.

ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿಯ 12 ಕೋಟಿ ರೂ. ಬಿಲ್‌ ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಒಟ್ಟು 32 ಗೇಟ್‌ಗಳನ್ನು ಅಳವಡಿಸಬೇಕಿದೆ.

ಎರಡನೇ ಬೆಳೆಗೆ ರೈತರಿಗೆ ನೀರು ದೊರೆಯುತ್ತಿಲ್ಲ. ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಈಗಿನ ಸನ್ನಿವೇಶ ನೋಡಿದರೆ ಮುಂದಿನ ವರ್ಷಕ್ಕೂ ನೀರು ಸಿಗುವುದಿಲ್ಲ ಎನ್ನಿಸಿದೆ.

ಈ ಸರ್ಕಾರ ಉತ್ತರ ಕರ್ನಾಟಕದ ರೈತರಿಗೆ ಮೋಸ ಮಾಡಿದೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿಲ್ಲ. ಮೆಕ್ಕೆಜೋಳದ ಖರೀದಿ ಕೇಂದ್ರ ಆರಂಭಿಸಿಲ್ಲ. ಈ ಎಲ್ಲ ವಿಷಯಗಳನ್ನು ಮೊದಲಿಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆ ಎರಡೂ ಸದನದಲ್ಲಿ ಚರ್ಚಿಸಲಾಗುವುದು ಎಂದರು.

ಬಡವರ ಬಿಪಿಎಲ್‌ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ತಪ್ಪಿಸಬಹುದು ಎಂದು ಸರ್ಕಾರ ಅಂದುಕೊಂಡಿದೆ. ಬಿಜೆಪಿ ಇದ್ದಾಗ ಬಗರ್‌ಹುಕುಂ ಸಾಗುವಳಿಗೆ ಮಂಜೂರಾತಿ ನೀಡಲಾಗಿತ್ತು. ಕಾಂಗ್ರೆಸ್‌ ಬಂದ ನಂತರ ಈ ಕೆಲಸ ಆಗಿಲ್ಲ.

ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಜೈಲುಗಳಲ್ಲಿ ಮದ್ಯ ತಯಾರಿ ಕೇಂದ್ರ ಆರಂಭವಾಗಿದೆ. ಭಯೋತ್ಪಾದಕ ಕೈದಿಗಳ ಕೈಗೆ ಮೊಬೈಲ್‌ ಬಂದಿದೆ. ಆದರೆ ಗೃಹಸಚಿವರು ಈ ವೀಡಿಯೋ ಸೋರಿಕೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಇಷ್ಟು ದಿನ ಕಳ್ಳರು ದರೋಡೆ ಮಾಡುತ್ತಿದ್ದರೆ, ಈಗ ಪೊಲೀಸರೇ ದರೋಡೆಗೆ ಇಳಿದಿದ್ದಾರೆ. ಹಗಲಿನಲ್ಲೇ ರಾಜಧಾನಿಯಲ್ಲಿ 7 ಕೋಟಿ ರೂ. ದರೋಡೆಯಾಗಿದೆ ಎಂದರು.

ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ನೇಮಕ, ಬೆಂಗಳೂರಿನಲ್ಲಿ ಗುಂಡಿ ರಸ್ತೆಗಳಿಂದಾಗಿ ಜನರ ಮರಣ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪೊಲೀಸ್‌ ಠಾಣೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದರು.

ಸಿಎಂ ಯಾರೆಂದು ಗೊತ್ತಿಲ್ಲ

ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!