Ceasefire between CM-DCM.. How many months is the validity..?

ಸಿಎಂ-ಡಿಸಿಎಂ ನಡುವೆ ಕದನ ವಿರಾಮ.. ವ್ಯಾಲಿಡಿಟಿ ಎಷ್ಟು ತಿಂಗಳು ..?! ಗೆದ್ದವರು ಯಾರು..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಕಳೆದೊಂದು ವಾರದಿಂದ ಮುಖ್ಯಮಂತ್ರಿ (Cm) ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ (DCM) ಡಿ.ಕೆ. ಶಿವಕುಮಾರ್ (D.K. Shivakumar) ನಡುವೆ ಪವರ್ ಶೇರಿಂಗ್ ವಿಚಾರವಾಗಿ ರಾಷ್ಟ್ರ ಮಟ್ಟದಲ್ಲಿ ಮಾಧ್ಯಮಗಳು ನಡೆಸಿದ್ದ ದೊಡ್ಡಮಟ್ಟದ ಚರ್ಚೆ, ವರದಿ ಠುಸ್ ಪಟಾಕಿ ಎಂಬಂತಾಗಿದೆ.

ಹೌದು ಹೈಕಮಾಂಡ್ ಸೂಚನೆಯಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಹಾರ ಮಾಡುವ ಮೂಲಕ ಚರ್ಚೆ ನಡೆಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ

ಇತ್ತೀಚೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ, ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

ಬೀಸೋ ದೊಣ್ಣೆಯಿಂದ ಹೈಕಮಾಂಡ್ ಪಾರು

ಇಂದು ಸಿಎಂ ಮತ್ತು ಡಿಸಿಎಂ ನಡೆಸಿದ ಸುದ್ದಿಗೋಷ್ಠಿಯ ಸೂಕ್ಷ್ಮವಾಗಿ ಗಮನಿಸಿದಾಗ ಕಾಂಗ್ರೆಸ್ ಹೈಕಮಾಂಡ್ ಬೀಸುವ ದೊಣ್ಣೆಯಿಂದ ಪಾರಾದಂತಿದೆ. ಪ್ರಭಾವಿ ನಾಯಕರ ನಡುವೆ ಉಂಟಾಗಿದ್ದ ಹಗ್ಗಜಗ್ಗಾಟ ಒಂದು ಹಂತಕ್ಕೆ ತಣ್ಣಗಾಗಿದೆ.

ವಿಧಾನಸಭೆ, ಲೋಕಸಭೆ ಅಧಿವೇಶನ ಇರುವ ಕಾರಣ ತರಾತುರಿಯಲ್ಲಿ ನಡೆಯುವ ಸಾಧ್ಯತೆ ಇಲ್ಲ. ಉಳಿದದ್ದು ಜನವರಿ ಬಳಿಕವೆ ಎನ್ನಬಹುದು.

ಮಣಿದರೇ ಸಿದ್ದರಾಮಯ್ಯ..?

ಜನತಾದಳ ಬಿಟ್ಟು ಕಾಂಗ್ರೆಸ್ ಸೇರಿದ ಬಳಿಕ ಸುಮಾರು 20 ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮತ್ತೋರ್ವ ನಾಯಕನ ಪಕ್ಕದಲ್ಲಿ ಕೂರಿಸಿ ಸುದ್ದಿಗೋಷ್ಠಿ ನಡೆಸಿ, ನಮ್ಮಿಬ್ಬರ ನಡುವೆ ಎಲ್ಲಾ ಚೆನ್ನಾಗಿದೆ ಎಂದು ಹೇಳದವರು, ಇಂದು ಡಿ.ಕೆ. ಶಿವಕುಮಾರ್ ಅವರನ್ನು ಕೂರಿಸಿಕೊಂಡು ಹೇಳುವಂತಹ ಅನಿರ್ವಾರ್ಯತೆ ಉಂಟಾಗಿರುವುದು ಅವರ ಅಭಿಮಾನಿಗಳಿಗೆ ಆಶ್ಚರ್ಯವನ್ನು ತಂದಿದೆ.

ಏಕೆಂದರೆ ಸಿದ್ದರಾಮಯ್ಯ ಅವರದ್ದು ಯಾರೊಂದಿಗೂ ರಾಜಿಯಾಗುವ ವ್ಯಕ್ತಿತ್ವದವರಲ್ಲ. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಅವರಂತವರನ್ನೆ ದಿಟ್ಟವಾಗಿ ಎದುರಿಸಿದ ಗಟ್ಟಿ ವ್ಯಕ್ತಿತ್ವದ ವ್ಯಕ್ತಿಯೇ ಹೊರತು, ಸಿದ್ದರಾಮಯ್ಯ ಈ ರೀತಿ ಒನ್ ಟು ಒನ್ ಚರ್ಚೆ ನಡೆಸಿದ ಉದಾಹರಣೆ ಇಲ್ಲ.

ಡಿಸಿಎಂ ಡಿ.ಕೆ. ಶಿವಕುಮಾರ್ ಮುಖದಲ್ಲಿ ಗೆಲುವಿನ ನಗು

ಸಿದ್ದರಾಮಯ್ಯ ಅವರ ಜೊತೆ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಬುಡ ಅಲ್ಲಾಡಿಸಿರುವ ಸಾರ್ಥಕತೆ ಎದ್ದು ಕಾಣುತ್ತಿತ್ತು. ಏಕೆಂದರೆ ಮೊದಲನೇ ಅಪಸ್ವರದಲ್ಲಿ ಯಶಸ್ಸು ದೊರೆತಿರುವ ಸಂಭ್ರಮ ಕಂಡುಬಂದಿದೆ.

ಏಕೆಂದರೆ ಸಿದ್ದರಾಮಯ್ಯ ಕೆಳಗಿಳಿದ ಬಳಿಕ ಮೂರನೇ ನಾಯಕ ಎಂಟ್ರಿ ಸಾಧ್ಯತೆಯನ್ನು ಡಿ.ಕೆ. ಶಿವಕುಮಾರ್ ಇಲ್ಲವಾಗಿಸಿದ್ದು, ಕರ್ನಾಟಕ ರಾಜ್ಯ ರಾಜಕಾರಣದ ಚುಕ್ಕಾಣಿ ಹಿಡಿಯಲು ನಾ ಬಂದಿದ್ದೇನೆ ಎಂಬಂತೆ ಅವರ ಬಾಡಿಲಾಂಗ್‌ವೇಜ್ ಇದ್ದಿದ್ದು ಗಮನ ಸೆಳೆದಿದೆ.

ಗೆದ್ದವರು ಯಾರು..?

ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಉದ್ಭವ ಆಗುವ ಪ್ರಶ್ನೆ ಗೆದ್ದವರು ಯಾರು ಎಂಬ ಪ್ರಶ್ನೆ..? ಪ್ರಸ್ತುತ ಸನ್ನಿವೇಶದಲ್ಲಿ ಇಬ್ಬರು ಗೆದ್ದಿಲ್ಲ, ಇಬ್ಬರೂ ಸೋತಿಲ್ಲ, ಯಥಾ ಸ್ಥಿತಿ ಮುಂದುವರಿಕೆ ಎನ್ನಬಹುದಾದರೂ, ಕದನ ವಿರಾಮ ಎನ್ನಬಹುದು.

ಸಿಎಂ ಸಿದ್ದರಾಮಯ್ಯ ದೃಷ್ಟಿಕೋನದಲ್ಲಿ ನೋಡಬಹುದಾದರೆ, ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡಬೇಕು ಎಂದು ಹೇಳಲಾಗುತ್ತಿದ್ದ ವಾತಾವರಣವನ್ನು, ಅಷ್ಟು ಸುಲಭವಾಗಿ ಸಾಧ್ಯವಿಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇನ್ನೂ ಡಿ.ಕೆ. ಶಿವಕುಮಾರ್ ದೃಷ್ಟಿಯಿಂದ ನೋಡುವುದಾದರೆ, ಮುಂದಿನ ಮುಖ್ಯಮಂತ್ರಿ ನಾನೇ, ಇನ್ನೂ ದಲಿತ ನಾಯಕ ಮುಂತಾದ ಯಾವುದೇ ಮೂರನೇ ವ್ಯಕ್ತಿಯ ನುಸುಳಲು ಸಾಧ್ಯವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ.

20 ವರ್ಷಗಳ ರಾಜ್ಯ ರಾಜಕೀಯ ಗಮನಿಸುವುದಾದರೆ ಒಬ್ಬ ಪ್ರಭಾವಿ ರಾಜಕಾರಣಿಯಾಗಿ ಡಿ.ಕೆ. ಶಿವಕುಮಾರ್ ಸಿಎಂ ರೇಸಿಗ್ ಬಂದಿದ್ದಾರೆ. ಏನೆಂದರೆ ಈ ಮುಂಚೆ ಯಾವುದೇ ಉಪಮುಖ್ಯಮಂತ್ರಿ ಬಿಟ್ಟು ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿರಲಿಲ್ಲ. ಇದೇ ಮೊದಲ ಬಾರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಶ್ವಾಸಕ್ಕೆ ಪಡೆದರೆ ಮಾತ್ರ ಅಧಿಕಾರ ನಡೆಸಲು ಸಾಧ್ಯ ಎಂಬ ಸಂದೇಶ ರವಾನೆಯಾಗಿದೆ.

ಡಿ.ಕೆ. ಶಿವಕುಮಾರ್ ಅವರು ಈಗಲೇ ಮುಖ್ಯಮಂತ್ರಿ ಆಗದೇ ಇದ್ದರೂ.. ಮುಂದಿನ ದಿನಗಳಲ್ಲಿ ಮತ್ತೆ ಇದೇ ಪ್ರಶ್ನೆ ಉದ್ಭವವಾಗಲಿದೆ. ಆಗ ಹೈಕಮಾಂಡ್ ನಿರ್ಧಾರಕ್ಕೆ ಬರಲೇಬೇಕಾಗುತ್ತದೆ. ಇಲ್ಲವಾದರೆ ವಿಪರೀತವಾದ ಸನ್ನಿವೇಶ ಉದ್ಭವ ಆಗುತ್ತದೆ ಎಂಬುದು ಹಾಗೂ ಸಿದ್ದರಾಮಯ್ಯ ಅವರಿಗೆ ಪರ್ಯಾಯ ಡಿ.ಕೆ. ಶಿವಕುಮಾರ್ ಮಾತ್ರ ಎಂಬ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಈಗ ಸಿಎಂ ಮತ್ತು ಡಿಸಿಎಂ ನಡುವಿನ ಈ ಕದನ ವಿರಾಮದ ವ್ಯಾಲಿಡಿಟಿ ಎಷ್ಟು ತಿಂಗಳು ಎಂಬ ಪ್ರಶ್ನೆ ಎಲ್ಲರ ಮುಂದಿದೆ.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!