CM, DCM joint press conference after breakfast meeting: Complete information here

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ, ಡಿಸಿಎಂ ಜಂಟಿ ಸುದ್ದಿಗೋಷ್ಠಿ: ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM D.K. Shivakumar) ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸ್ಪಷ್ಟಪಡಿಸಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದರು.

ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028 ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022 ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ

ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಗುಂಪಿಲ್ಲ, ಇಡೀ ಕಾಂಗ್ರೆಸ್ ಒಂದೇ ಗುಂಪು

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, “ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ” ಎಂದು ಹೇಳಿದರು.

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ಉಪಾಹಾರ ಸಭೆ ನಡೆಸಿದ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಕಷ್ಟದ ಸಮಯದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಹತ್ತರ ಪಾತ್ರ ನಿರ್ವಹಿಸಲಿದೆ. 2028ರ ಚುನಾವಣೆ ನಂತರ 2029ರ ಲೋಕಸಭೆ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ 2028 ಕ್ಕೆ ಹಾಗೂ 2029ರಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು, ಮುಂದೆಯೂ ಅದೇ ರೀತಿ ಕೆಲಸ ಮಾಡಲು ಅಚಲ ನಿರ್ಧಾರ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ಇಂದು ನಾನು ಹಾಗೂ ಸಿಎಂ ಅವರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಭೋಜನಕೂಟಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರ ಪರಿಶ್ರಮ, ಜನರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತಿನಂತೆ ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡುತ್ತಿದ್ದಾರೆ. ಜನರ ನಿರೀಕ್ಷೆ, ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರದ ಚರ್ಚೆ

ಡಿ. 8 ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದಕ್ಕೆ ನಮ್ಮದೇ ಆದ ಸ್ವರೂಪ ನೀಡುತ್ತೇವೆ. ಅವರು ಸದನದಲ್ಲಿ ಏನೇ ಪ್ರಶ್ನೆ ಕೇಳಿದರೂ ಅದಕ್ಕೆ ಉತ್ತರಿಸಲು ನಾವು ಸಮರ್ಥರಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಗುಂಪಿಲ್ಲ, ಇಡೀ ಕಾಂಗ್ರೆಸ್ ಒಂದೇ ಗುಂಪು

“ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ಕೃಷ್ಣ ಅವರ ಕಾಲದಲ್ಲೂ ಗುಂಪುಗಾರಿಕೆ ಮಾಡಿಲ್ಲ. ಇವತ್ತಿಗೂ ಅವಕಾಶ ಕೊಟ್ಟಿಲ್ಲ. ನನಗೆ ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೊದಲ ಆರು ತಿಂಗಳು ನನ್ನನ್ನು ಮಂತ್ರಿ ಮಾಡದೇ ಇದ್ದಾಗಲೂ ನಾನು ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಒಟ್ಟಾಗಿ ಕೆಲಸ ಮಾಡುವ ನನ್ನ ನಿರ್ಧಾರ ಅಚಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು, ಪ್ರತಿಯೊಬ್ಬ ಶಾಸಕರಿಗೆ ಶಕ್ತಿ ತುಂಬಿ, ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದು ನಮ್ಮಿಬ್ಬರ ಕರ್ತವ್ಯ. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಅನೇಕ ಕಾರ್ಯಕ್ರಮ ರೂಪಿಸಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ನೀಡಿರುವ ಸಂದೇಶಕ್ಕೆ ನನ್ನ ಸಹಮತವಿದೆ” ಎಂದರು.

ಮೆಕ್ಕೆಜೋಳ, ಕಬ್ಬು, ನೀರಾವರಿ ಯೋಜನೆ ಬಗ್ಗೆ ಸಂಸದರ ಜೊತೆ ಚರ್ಚಿಸಲು ದೆಹಲಿಗೆ ಹೋಗಬೇಕು

ದೆಹಲಿಗೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ, “ಪಕ್ಷದ ವರಿಷ್ಠರು ನಮ್ಮನ್ನು ಕರೆದರೆ, ನಾವು ಖಂಡಿತವಾಗಿಯೂ ಹೋಗುತ್ತೇವೆ. ಅದರ ಹೊರತಾಗಿ ಮೆಕ್ಕೆಜೋಳ, ಕಬ್ಬು ದರ ನಿಗದಿ ಹಾಗೂ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಸಂಸದರು ಧ್ವನಿ ಎತ್ತಬೇಕಿದೆ. ಈ ವಿಚಾರವಾಗಿ ಸಂಸದರ ಜೊತೆ ನಾವು ಚರ್ಚೆ ಮಾಡಬೇಕಿದೆ. ಮೆಕ್ಕೆಜೋಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಸಹಕಾರ ನೀಡುತ್ತಿಲ್ಲ. ಈ ವಿಚಾರಗಳಲ್ಲಿ ಕೇಂದ್ರದ ನೆರವು ಪಡೆಯುವುದು ರಾಜ್ಯದ ಹಕ್ಕು. ಇತ್ತೀಚಿಗೆ ಸಿಎಂ ಅವರು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸಂಸದರ ಜೊತೆ ಚರ್ಚೆ ಮಾಡಿ ಈ ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ಹಾಕುವಂತೆ ತಿಳಿಸುತ್ತೇವೆ. ನಾವೆಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಪಾಡಬೇಕಿದೆ. ಕೇಂದ್ರ ಸಚಿವರು ನಿಯೋಗದಲ್ಲಿ ನೀವು ಬನ್ನಿ ಎಂದು ತಿಳಿಸಿದ್ದು, ನಾವು ಹೋಗುತ್ತೇವೆ. ಮೇಕೆದಾಟು ಯೋಜನೆ ವಿಚಾರದಲ್ಲಿ ನ್ಯಾಯಾಲಯದಿಂದ ರಾಜ್ಯದ ಪರವಾದ ತೀರ್ಪು ಬಂದಿದೆ, ಈಗ ಚೆಂಡು ಕೇಂದ್ರ ಸರ್ಕಾರದ ಜಲ ಆಯೋಗದ ಅಂಗಳದಲ್ಲಿದೆ. ನಾವು ಇದಕ್ಕೆ ಪರಿಷ್ಕೃತ ಡಿಪಿಆರ್ ಸಲ್ಲಿಸುತ್ತೇವೆ. ಇದರ ಜೊತೆಗೆ ಇತರೆ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡಬೇಕು. ದೇಶದಲ್ಲಿ ಕರ್ನಾಟಕ ಪ್ರಮುಖ ರಾಜ್ಯವಾಗಿದ್ದು, ಇಡೀ ವಿಶ್ವ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರು ಮೂಲಕ ನೋಡುತ್ತಿದೆ. ಇನ್ನು ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಅವರು ಏನಾದರೂ ಮಾಡಲಿ, ವಿರೋಧ ಪಕ್ಷವಾಗಿ ಅವರಿಗೆ ಆ ಹಕ್ಕಿದೆ. ಆಡಳಿತ ಪಕ್ಷವಾಗಿ ಅದನ್ನು ಎದುರಿಸಲು ನಾವು ಸಮರ್ಥರಿದ್ದೇವೆ” ಎಂದು ತಿಳಿಸಿದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!