DCM Tiffin meeting with CM

ಸಿಎಂ ಜೊತೆ ಡಿಸಿಎಂ ಟಿಫನ್ ಮೀಟಿಂಗ್

ಬೆಂಗಳೂರು: ಕರ್ನಾಟಕದ ಅಧಿಕಾರ ಹಸ್ತಾಂತರ ವಿಚಾರ ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಹೈಕಮಾಂಡ್ ಸೂಚನೆ ಮೇರೆಗೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ (Cm Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ಉಪಾಹಾರ ಸಭೆ ನಡೆಸಿದರು.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ; ಸಿಎಂ

ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಪುನರುಚ್ಚರಿಸಿದ್ದರು. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದಿದ್ದಾರೆ.

ಉಪಾಹಾರಕ್ಕೆ ಆಹ್ವಾನ

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.

ಆಹ್ವಾನ ಬಂದರೆ ದೆಹಲಿಗೆ ತೆರಳುವೆ

ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ

“ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಿನ್ನೆ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸುತ್ತಿದ್ದಾರಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ನನಗೆ ಯಾವುದೇ ಆತುರವಿಲ್ಲ ಎಂದರು.

ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀವು ಹಾಗೂ ಸಿಎಂ ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋಗಬಹುದು. ನನಗೆ ದೆಹಲಿಯಲ್ಲಿ ಸಾಕಷ್ಟು ಕೆಲಸಗಳಿವೆ.

ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ” ಎಂದರು.

ಮೆಕ್ಕೆಜೋಳ ವಿಚಾರವಾಗಿ ಮನವಿ ಸಲ್ಲಿಸುವುದಿದೆ

ಇದರ ಜೊತೆಗೆ ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ. ಮಾತ್ರ. ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿಲ್ಲ.

ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲಾ ಕಾರ್ಖಾನೆ ಮಾಲೀಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆ ಎಂದರು.

ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದಾಗ, “ಅದು ದೆಹಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದೆಹಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆ” ಎಂದು ತಿಳಿಸಿದರು.

ನನ್ನ ಸಮುದಾಯ ಕಾಂಗ್ರೆಸ್

ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದಾಗ, “ನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ.

ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಿದೆ. ಒಂದು ಗಂಟೆ ಅಲ್ಲಿದ್ದು, ನಾನು ವಾಪಸ್ಸಾಗಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!