ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಡಿಸಿಎಂ ಜೊತೆ ದೆಹಲಿಗೆ – ಸಿಎಂ ಸಿದ್ದರಾಮಯ್ಯ

I will act as told by party leaders: Cmsiddaramaiah

ಬೆಂಗಳೂರು: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಪುನರುಚ್ಚರಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಉಪಾಹಾರಕ್ಕೆ ಆಹ್ವಾನ

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.

ಆಹ್ವಾನ ಬಂದರೆ ದೆಹಲಿಗೆ ತೆರಳುವೆ

ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ

“ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸುತ್ತಿದ್ದಾರಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ನನಗೆ ಯಾವುದೇ ಆತುರವಿಲ್ಲ ಎಂದರು.

ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀವು ಹಾಗೂ ಸಿಎಂ ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋಗಬಹುದು. ನನಗೆ ದೆಹಲಿಯಲ್ಲಿ ಸಾಕಷ್ಟು ಕೆಲಸಗಳಿವೆ.

ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ” ಎಂದರು.

ಮೆಕ್ಕೆಜೋಳ ವಿಚಾರವಾಗಿ ಮನವಿ ಸಲ್ಲಿಸುವುದಿದೆ

ಇದರ ಜೊತೆಗೆ ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ. ಮಾತ್ರ. ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿಲ್ಲ.

ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲಾ ಕಾರ್ಖಾನೆ ಮಾಲೀಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆ ಎಂದರು.

ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದಾಗ, “ಅದು ದೆಹಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದೆಹಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆ” ಎಂದು ತಿಳಿಸಿದರು.

ನನ್ನ ಸಮುದಾಯ ಕಾಂಗ್ರೆಸ್

ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದಾಗ, “ನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ.

ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಿದೆ. ಒಂದು ಗಂಟೆ ಅಲ್ಲಿದ್ದು, ನಾನು ವಾಪಸ್ಸಾಗಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!