H.D. Kumaraswamy defends statement that there are terrorists in Vidhan Soudha

ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಹೇಳಿದರು.

ಬೆಂಗಳೂರಿನಲ್ಲಿ ನಡೆದ ಎನ್ ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದು ಅಭಿಪ್ರಾಯಪಟ್ಟರು.

ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕಲಹದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ.

ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಎಂದು ಕೇಂದ್ರ ಸಚಿವರು ಹೇಳಿದರು.

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಈ ಸರ್ಕಾರಕ್ಕೆ ರಾಜ್ಯದ ಜನ 140 ಸ್ಥಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಟ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಅವರು ಕಿಡಿಕಾರಿದರು.

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿವೆ ಎಂದು ಸಿಎಂ ಹೇಳಿರುವ ಬಗ್ಗೆ ಕೆಂಡ ಕಾರಿದ ಸಚಿವ ಕುಮಾರಸ್ವಾಮಿ ಅವರು; ಸಿದ್ದರಾಮಯ್ಯ ಅವರು ಒಬ್ಬರೇ ಸತ್ಯ ಹರಿಶ್ಚಂದ್ರ. ಪಾಪ.. ಸತ್ಯ ಹರಿಶ್ಚಂದ್ರ ಕಾಡಿಗೆ ಹೋಗಬೇಕಾದರೆ ಸಿದ್ದರಾಮಯ್ಯನ ಹುಂಡಿ ಮೇಲೆ ಹೋಗಿರಬೇಕು. ಅದಕ್ಕೆ ಸಿದ್ದರಾಮಯ್ಯ ಹೀಗೆ ಹೇಳುತ್ತಿರಬಹುದು ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

2028ರ ಕುನಾವಣೆ ತುಂಬಾ ದೂರಾ ಇದೆ. ತೇಜಸ್ವಿ ಯಾದವ್ ಬಿಹಾರದಲ್ಲಿ ಪ್ರಮಾಣ ವಚನ ದಿನಾಂಕವನ್ನೇ ನಿಗದಿ ಮಾಡಿದ್ದರು. ಆದರೆ ಅಲ್ಲಿ ಏನು ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಅನಗತ್ಯ ಜಾತಿ ಧರ್ಮವನ್ನು ಎಳೆದುತಂದು ಜನರನ್ನು ಪರಸ್ವರ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ. ಇದು ಆಗಬಾರದು. ಒಕ್ಕಲಿಗ, ಕುರುಬರ ಮತ್ತು ಇತರ ಸಮಾಜದ ಸ್ವಾಮೀಜಿಗಳ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ. ಧರ್ಮ ಸಂಘರ್ಷ ಮಾಡಬಾರದು ಎಂದು ಸಚಿವರು ಹೇಳಿದರು.

ಎಲ್ಲಾ ರೀತಿಯಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ವಿಫಲವಾಗಿದೆ. ಜನರ ಪರವಾಗಿ ದನಿಯೆತ್ತಲಿಕ್ಕಾಗಿಯೇ ನಾವು ಇಲ್ಲಿ ಸಭೆ ಸೇರಿದ್ದೇವೆ. ಡಿಸೆಂಬರ್ 8ರಿಂದ ಬೆಳಗಾವಿ ಅಧಿವೇಶನ ನಡೆಯುತ್ತದೆ. ಎರಡು ಪಕ್ಷಗಳು ಪರಿಣಾಮಕಾರಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿವೆ.

ಬೆಂಗಳೂರಿನಿಂದ ಶಾಸಕರು ಕಾಟಾಚಾರಕ್ಕೆ ಬರುತ್ತಾರೆ ಎನ್ನುವ ಅಭಿಪ್ರಾಯ ಬೇಡ. ಉತ್ತರ ಕರ್ನಾಟಕದ ಜನ ಕಷ್ಟದಲ್ಲಿದ್ದಾರೆ. ನೆರೆ ಬಂದು ಅನೇಕ ಜಿಲ್ಲೆಗಳ ಜನರು ಕಷ್ಟಕ್ಕೆ ಸಿಲುಕಿದ್ದರು. ಆಸ್ತಿ, ಮನೆಮಠ ಕಳೆದುಕೊಂಡ ಜನರ ನೆರವಿಗೆ ರಾಜ್ಯ ಸರ್ಕಾರ ಬಂದಿಲ್ಲ. ಕೇವಲ ಕೇಂದ್ರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದೆ.

ತುಂಗಭದ್ರಾ ನೀರು ಬಳಕೆ ಮಾಡುವ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ ಎಂದು ಹೇಳುತ್ತಿದೆ ಸರ್ಕಾರ. ಈ ವಿಷಯವನ್ನು ಎರಡು ಪಕ್ಷಗಳ ಶಾಸಕರು ಸದನದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಪೊಲೀಸರೇ ದರೋಡೆ ಮಾಡುತ್ತಾರೆ!

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಕೆಲ ಪೊಲೀಸರೇ ದರೋಡೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುತ್ತಾರೆ. ಹಿಂದೆ ಅವರು ಐದು ವರ್ಷ ಸಿಎಂ ಆಗಿದ್ದಾಗ ಮೈಸೂರಿನ ಬಿಳಿಕೆರೆಯಲ್ಲಿ ಬಸ್ಸಿನಲ್ಲಿ ಹಣವನ್ನು ದೋಚಲಾಗಿತ್ತು. ಆ ಪ್ರಕರಣದಲ್ಲಿಯೂ ಪೊಲೀಸ್ ಅಧಿಕಾರಿಯೊಬ್ಬ ಭಾಗಿಯಾಗಿದ್ದ. ಇತ್ತೀಚೆಗೆ ಎಟಿಎಂ ಹಣ ದರೋಡೆ ಮಾಡಿದ ಪ್ರಕರಣದಲ್ಲಿಯೂ ಪೊಲೀಸ್ ಒಬ್ಬ ಭಾಗಿ ಆಗಿದ್ದಾನೆ.

ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗ ಮಾತ್ರವೇ ಯಾಕೆ ಹೀಗೆ ಆಗುತ್ತದೆ? ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಉಗ್ರರ ಕೈಗೆ ಸ್ಮಾರ್ಟ್ ಫೋನ್ ಹೋಗುತ್ತಿದೆ. ಅದನ್ನು ಗೃಹ ಸಚಿವರು ಖುದ್ದು ಪರಿಶೀಲನೆ ಮಾಡಿದ್ದರು.

ಇತ್ತೀಚೆಗೆ ಇನ್ನೊಬ್ಬ ಮಂತ್ರಿ ಜೈಲಿಗೆ ಭೇಟಿ ನೀಡಿದ್ದರು. ಅವರು ಏನು ಕಾರಾಗೃಹದಲ್ಲಿ ಏನು ಪರಿಶೀಲನೆ ಮಾಡಿದರೋ ಗೊತ್ತಿಲ್ಲ. ಆದರೆ ಅವರು ಭೇಟಿ ನೀಡಿದ ನಂತರ ಜೈಲಿನಲ್ಲಿ ಡಿಸ್ಟಿಲರಿಯೇ ನಡೆಯುತ್ತಿರುವುದು ಪತ್ತೆ ಆಯಿತು! ಅವರು ಏನು ತಪಾಸಣೆ ಮಾಡೋಕೆ ಹೋಗಿದ್ದರು? ಸ್ವತಃ ಅವರೇ ಜೈಲ್ ಡಿಸ್ಟಿಲರಿ ಡ್ರಿಂಕ್ಸ್ ಗುಣಮಟ್ಟ ಪರಿಶೀಲನೆ ಮಾಡೋಕೆ ಹೋಗಿದ್ದರಾ ಹೇಗೆ? ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!