ಕುಮಾರಸ್ವಾಮಿ ಸರಕಾರಕ್ಕೂ ನಿಷ್ಠೆಯಿಂದ ಕೊನೆವರೆಗೂ ಬೆಂಬಲ ಕೊಟ್ಟವನು ನಾನು; ಡಿಸಿಎಂ ಡಿ.ಕೆ. ಶಿವಕುಮಾರ್

Are BJP members pure? Why is no ED case registered against them?: DCM D.K. Shivakumar

ಬೆಂಗಳೂರು: “ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಮನ್ವಂತರ ಶುರು ಆಗಿದೆಯೇ ಎಂದು ಕೇಳಿದಾಗ, “ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ಬಹಳ ನಿರೀಕ್ಷೆ ಹೊಂದಿದ್ದು, ನಾವು ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. 2028 ರ ಚುನಾವಣೆ ನಮ್ಮ ಮುಂದಿನ ಗುರಿ” ಎಂದು ತಿಳಿಸಿದರು.

ನಾನು ಬೆನ್ನಿಗೆ ಚೂರಿ ಹಾಕಲ್ಲ

ನಾನು ಯಾವತ್ತೂ ಗುಂಪುಗಾರಿಕೆ ಮಾಡುವುದಿಲ್ಲ. ಎಲ್ಲರೂ ಗಮನಿಸಿರುವಂತೆ ನಾನು ದೆಹಲಿಗೆ ಹೋದರೆ ಒಬ್ಬನೇ ಹೋಗುತ್ತೇನೆ. ನಾನು 8-10 ಶಾಸಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಅದು ದೊಡ್ಡ ವಿಚಾರವಲ್ಲ. ನಾನು ಅಧ್ಯಕ್ಷ ಸ್ಥಾನದಲ್ಲಿ ಇರುವಾಗ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು.

140 ಶಾಸಕರೂ ನಮ್ಮ ನಾಯಕರೇ. ಯಾರಿಗೂ ತಾರತಮ್ಯ ಮಾಡಲ್ಲ. ನಾನು ಕುಮಾರಸ್ವಾಮಿ ಅವರ ಜತೆಯಲ್ಲೇ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಇದನ್ನು ಕುಮಾರಸ್ವಾಮಿ ಅವರು ಒಪ್ಪದೇ ಇರಬಹುದು, ನನ್ನ ನಿಷ್ಠೆ, ನನ್ನ ಆತ್ಮಸಾಕ್ಷಿ ಆ ದೇವರಿಗೆ ಗೊತ್ತಿದೆ.

ಕುಮಾರಸ್ವಾಮಿ ಅವರ ಸರ್ಕಾರ ಉಳಿಸಲು ಕೊನೆ ದಿನದವರೆಗೂ ಎಷ್ಟು ಪ್ರಯತ್ನ ಮಾಡಿದ್ದೇನೆ ಎಂದು ಅವರ ತಂದೆಯವರಿಗೂ ಗೊತ್ತಿದೆ. ಅವರು ತಮ್ಮ ಆಸೆಗೆ ಏನಾದರೂ ಮಾತಾಡಿಕೊಳ್ಳಲಿ, ನಾನು ಬೇಸರ ಮಾಡಿಕೊಳ್ಳಲ್ಲ. ನಾನು ಎಂದಿಗೂ ಬೆನ್ನಿಗೆ ಚೂರಿ ಹಾಕಲ್ಲ. ನೇರವಾಗಿ ಹೋರಾಟ ಮಾಡುವವನು ಎಂದರು.

ಕೆ.ಸಿ. ವೇಣುಗೋಪಾಲ್ ಅವರ ಜೊತೆಗಿನ ಮಾತುಕತೆ ಬಗ್ಗೆ ಕೇಳಿದಾಗ, “ನಾನು ಎಲ್ಲರ ಜೊತೆ ಚರ್ಚೆ ಮಾಡಿದ್ದು, ಏನು ಚರ್ಚೆ ಮಾಡಿದ್ದೇವೆ ಎಂದು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ” ಎಂದು ತಿಳಿಸಿದರು.

ಬದುಕಿದ್ದೇವೆ ಎಂದು ತೋರಿಸಲು ಬಿಜೆಪಿಯವರು ಮಾತನಾಡುತ್ತಿದ್ದಾರೆ

ಶಿವಕುಮಾರ್ ಸೂಪರ್ ಸಿಎಂ ಆಗುತ್ತಿದ್ದಾರೆ ಎಂದು ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಹೇಳಿದಾಗ, “ಬಿಜೆಪಿ ವಿರೋಧ ಪಕ್ಷವಾಗಿ ಏನಾದರೂ ಮಾತನಾಡಬೇಕಲ್ಲ, ಬದುಕಿದ್ದೇವೆ ಎಂದು ತೋರಿಸಲು ಮಾತನಾಡುತ್ತಾರೆ. ಬಿಜೆಯವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಆಗುತ್ತದೆಯೇ” ಎಂದು ತಿರುಗೇಟು ಕೊಟ್ಟರು.

ಸರ್ವಪಕ್ಷ ಸಭೆ ಬಗ್ಗೆ ಸಿಎಂ ಜೊತೆ ಚರ್ಚೆ

ಕೇಂದ್ರ ಸಚಿವರು, ಸಂಸದರ ಭೇಟಿ ಹೊರತಾಗಿ ಪಕ್ಷ ಹಾಗೂ ರಾಜಕೀಯ ಉದ್ದೇಶದಿಂದ ದೆಹಲಿ ಪ್ರಯಾಣ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಮತ್ತು ಸಿಎಂ ಈಗ ಚರ್ಚೆ ಮಾಡಿದ್ದು, ಮುಂದೆಯೂ ಮಾತನಾಡುತ್ತೇವೆ. ನೀರಾವರಿ, ಮೆಕ್ಕೆಜೋಳ ಹಾಗೂ ಕಬ್ಬು ಬೆಳೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡಬೇಕು. ಸರ್ವಪಕ್ಷ ಸಭೆ ಕರೆಯಬೇಕಿದ್ದು, ಈ ಸಭೆಯಲ್ಲಿ ಎಲ್ಲಾ ಸಂಸದರು ಭಾಗವಹಿಸಬೇಕು. ಹೀಗಾಗಿ ಈ ಸಭೆಯನ್ನು ದೆಹಲಿಯಲ್ಲಿ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಸಿಎಂ ಏನು ಹೇಳುತ್ತಾರೆ ಕೇಳುತ್ತೇನೆ. ನಾನೊಬ್ಬನೇ ಹೋಗಿ ಎಲ್ಲರ ಸಭೆ ಮಾಡುವುದು ಸರಿಯಲ್ಲ. ಈ ಸಭೆಯಲ್ಲಿ ರಾಜ್ಯದ ಇತರ ಸಚಿವರೂ ಇರಬೇಕು” ಎಂದರು.

ಅಪ್ಪ, ಮಗ ಭೇಟಿಗೆ ಅರ್ಜಿ ಹಾಕಿಕೊಳ್ಳಬೇಕೆ?

ದೆಹಲಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, ಅಪ್ಪ ಮಗನ ಭೇಟಿಗೂ ನೀವು ಅರ್ಥ ಕಲ್ಪಿಸುತ್ತೀರಾ? ಅಪ್ಪ, ಮಕ್ಕಳ ಭೇಟಿಗೂ ಅರ್ಜಿ ಹಾಕಿಕೊಳ್ಳಬೇಕಾ? ಪ್ರಿಯಾಂಕ್ ಖರ್ಗೆ ಅವರು ಎಐ ತಂತ್ರಜ್ಞಾನದ ಅತ್ಯುತ್ತಮ ಸಾಧನ ಪರಿಚಯಿಸಿದ್ದಾರೆ. ಇದರ ಉದ್ಘಾಟನೆಗೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದೆವು, ಅವರು ಬರಲು ಆಗಿರಲಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರು ಅದರ ಬಗ್ಗೆ ಮಾಹಿತಿ ಪಡೆಯಲು ಕರೆದಿದ್ದರು. ಹೀಗಾಗಿ ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಅವರನ್ನು ಕರೆಸಿ ಅವರಿಂದ ಮಾಹಿತಿ ಪಡೆದಿದ್ದಾರೆ. ಇಲ್ಲೂ ರಾಜಕೀಯ ಮಾತನಾಡಿದ್ದಾರೆ ಎಂದು ಹೇಳಲು ಸಾಧ್ಯವೇ? ಅಪ್ಪ ಮಕ್ಕಳು, ಅಣ್ಣ ತಮ್ಮ ಸೇರಿದಾಗ ರಾಜಕೀಯವೇ? ಬೇರೆಯವರು ಸೇರಿದಾಗ ನಿಮಗೆ ಲೆಕ್ಕಕ್ಕೆ ಇರುವುದಿಲ್ಲ. ನಮ್ಮದು ಮಾತ್ರ ಲೆಕ್ಕ ಹಾಕುತ್ತೀರಿ ಎಂದು ಹೇಳಿದರು.

ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಬಗ್ಗೆ ಕೇಳಿದಾಗ, “ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಅವರು ದಿನಾಂಕ ನೀಡಿರಲಿಲ್ಲ. ಈಗ ವಾರಾಂತ್ಯದಲ್ಲಿ ಬಂದು ನೆರವೇರಿಸಿ ಎಂದು ಕೇಳಿದ್ದೇನೆ. 100 ಭವನಗಳ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನನಗೆ ತೃಪ್ತಿ ಇದೆ” ಎಂದರು.

ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗುತ್ತಿರುವ ಬಗ್ಗೆ ಕೇಳಿದಾಗ, “ನಾನು ಅದನ್ನು ಸ್ವಾಗತಿಸುತ್ತೇನೆ” ಎಂದರು.

ಮನಶಾಂತಿಗೆ ದೇವಾಲಯ ಭೇಟಿ, ಪೂಜೆ

ಟೆಂಪಲ್ ರನ್ ಮಾಡುತ್ತಿದ್ದು, ಏನು ಸಂಕಲ್ಪ ಮಾಡಿದ್ದೀರಿ ಎಂದು ಕೇಳಿದಾಗ, “ನಾವು ನಮ್ಮ ಬದುಕಿನಲ್ಲಿ ನಮ್ಮದೇ ಆದ ಆಚರಣೆ ಹಿಂದಿರುತ್ತೇವೆ. ನಮ್ಮ ಮನಶಾಂತಿಗಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ. ದೇವಾಲಯ, ಮಸೀದಿ, ಚರ್ಚ್, ಜೈನ ಬಸದಿಗೆ ಹೋಗಿ ಪೂಜೆ ಪ್ರಾರ್ಥನೆ ಸಲ್ಲಿಸುತ್ತೇವೆ. ಇದನ್ನು ಟೆಂಪಲ್ ರನ್ ಎನ್ನುವ ಅಗತ್ಯವೇನು? ನಮ್ಮ ಹಿರಿಯರು ಕೊಟ್ಟ ಮಾರ್ಗದರ್ಶನದ ಪ್ರಕಾರ ನಾನು ನಿತ್ಯ ಬೆಳಗ್ಗೆ ಪೂಜೆ ಮಾಡದೇ ಮನೆಯಿಂದ ಆಚೆ ಬರುವುದಿಲ್ಲ. ಸರ್ಕಾರ ದೇವಾಲಯ ಮುಚ್ಚಲು ಸಾಧ್ಯವೇ? ಗ್ರಾಮೀಣ ಭಾಗದ ದೇವಾಲಯ ಅಭಿವೃದ್ಧಿಗೆ ಬಂಗಾರಪ್ಪನವರ ಕಾಲದಲ್ಲಿ ಆರಾಧನಾ ಯೋಜನೆ ಜಾರಿಗೆ ತಂದಿದ್ದರು” ಎಂದರು.

“ನಮ್ಮ ಸ್ನೇಹಿತರು ಭೂವರಾಹಸ್ವಾಮಿ ದೇವಾಲಯದ ಬಗ್ಗೆ ಹೇಳುತ್ತಿದ್ದರು. ನಾನು ಹೋಗಿದ್ದೆ, ದೇವಾಲಯ ಬಹಳ ಚೆನ್ನಾಗಿದೆ” ಎಂದರು.

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಹೇಳುತ್ತಿರುತ್ತೀರಿ ಎಂದು ಕೇಳಿದಾಗ, “ಅದನ್ನು ಎಷ್ಟು ಬಾರಿ ಹೇಳಲಿ. ನಾನು ಅದನ್ನು ಹೇಳಿದರೆ ಅದನ್ನು ಬೇರೆ ಅರ್ಥಕ್ಕೆ ತಿರುಚುತ್ತೀರಿ” ಎಂದು ಪ್ರತಿಕ್ರಿಯೆ ನೀಡಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!