Appointment of corporation board members within a week: DCM D.K. Shivakumar

ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ (Rahul Gandhi) ಅವರಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ.

ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ.

ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ವಿವರಿಸಿದರು.

ನ್ಯಾಷನಲ್ ಹೆರಾಲ್ಡ್ ಅವರ ವೈಯಕ್ತಿಕ ಆಸ್ತಿಯಲ್ಲ, ಪಕ್ಷದ ಆಸ್ತಿ

ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ.

ಮೊರಾರ್ಜಿ ಅವರು, ಅಹ್ಮದ್ ಪಟೇಲ್ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು. ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವುಗಳು ಸೋನಿಯಾ ಗಾಂಧಿ ಅವರ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ. ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ಇತಿಹಾಸ ಮರುಕಳಿಸಲಿದೆ. ಅವರು ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಿದರೂ ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ.

ಕೇಂದ್ರ ಸರ್ಕಾರದ ಈ ದ್ವೇಷ ರಾಜಕಾರಣ ಸರಿಯಲ್ಲ. ಇದರಿಂದ ಅವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರಕ್ಕೆ ಹೇಳಲು ಬಯಸುತ್ತೇನೆ. ಇದು ಕೇಂದ್ರ ಸರ್ಕಾರದ ನೈತಿಕತೆಯನ್ನಷ್ಟೇ ಕುಗ್ಗಿಸಲಿದೆ. ರಾಜಕೀಯವನ್ನು ನೇರಾನೇರವಾಗಿ ಜನರ ಮಧ್ಯೆ ಮಾಡೋಣ. ಚುನಾವಣೆಯಲ್ಲಿ ಹೋರಾಡೋಣ. ಆದರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಈ ರೀತಿ ಕಿರುಕುಳ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಉಪಾಹಾರ ಕೂಟ ನನ್ನ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ

ನಾಳೆ ಸಿಎಂ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೀರಾ ಎಂದು ಕೇಳಿದಾಗ, “ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ” ಎಂದು ತಿಳಿಸಿದರು.

ಈ ವಾರ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆಯೇ ಎಂದು ಕೇಳಿದಾಗ, “ನಾನು ಸರ್ವಪಕ್ಷ ಸಭೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದೇನೆ. ಸಂಸತ್ ಅಧಿವೇಶನ ಆರಂಭವಾಗಿದ್ದು, ರಾಜ್ಯದ ಹಿತರಕ್ಷಣೆ ವಿಚಾರವಾಗಿ ಸಂಸದರಿಗೆ ಕೆಲವು ಜವಾಬ್ದಾರಿಗಳ ಬಗ್ಗೆ ಹೇಳಬೇಕಿದೆ” ಎಂದು ತಿಳಿಸಿದರು.

ಉತ್ತರ ಪ್ರದೇಶ ಸಂಸದ ರಾಜೀವ್ ರಾಯ್ ಎಂಬುವವರು ನಿನ್ನೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಎಕ್ಸ್ ಖಾತೆಯಲ್ಲಿ ಸಿಎಂ ಅವರನ್ನು ಟ್ಯಾಗ್ ಮಾಡಿ ಇದು ಅತ್ಯಂತ ಕೆಟ್ಟ ಟ್ರಾಫಿಕ್ ಜಾಮ್ ಎಂದು ಬರೆದಿರುವ ಬಗ್ಗೆ ಕೇಳಿದಾಗ, “ಅವರಿಗೆ ನನ್ನನ್ನು ದೆಹಲಿಯಲ್ಲಿ ಭೇಟಿ ಮಾಡಲು ಹೇಳಿ. ದೆಹಲಿಯಲ್ಲಿರುವ ಟ್ರಾಫಿಕ್ ಸಮಸ್ಯೆ ಏನು ಎಂದು ಅವರಿಗೆ ತೋರಿಸುತ್ತೇನೆ” ಎಂದು ತಿಳಿಸಿದರು.

ಬೆಂಗಳೂರಿನ ಇಂದಿನ ಅಭಿವೃದ್ಧಿಗೆ ಕೆಂಗಲ್ ಹನುಮಂತಯ್ಯ ಕಾರಣ

ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, “ಇಂದು ನಾವೆಲ್ಲರೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರನ್ನು ಸ್ಮರಿಸುತ್ತಿದ್ದೇವೆ. ವಿಧಾನ ಸೌಧ ಕಟ್ಟಿದವರು ಕೆಂಗಲ್ ಹನುಮಂತಯ್ಯ ಅವರು, ವಿಕಾಸ ಸೌಧ ಕಟ್ಟಿದವರು ಎಸ್.ಎಂ ಕೃಷ್ಣ ಅವರು, ಬೆಂಗಳೂರನ್ನು ಕಟ್ಟಿದ್ದು ಕೆಂಪೇಗೌಡರು. ಇವೆಲ್ಲವೂ ಈ ನಾಯಕರು ಬಿಟ್ಟು ಹೋಗಿರುವ ಸಾಕ್ಷಿಗುಡ್ಡೆ” ಎಂದರು.

“ಅಂದಿನ ಕಾಲದಲ್ಲಿ ರಾಜಧಾನಿಯನ್ನಾಗಿ ಬೇರೆ ಪ್ರದೇಶವನ್ನು ಆಯ್ಕೆ ಮಾಡಿದ್ದರೆ, ಇಂದು ಬೆಂಗಳೂರು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಬೆಂಗಳೂರಿನಲ್ಲಿರುವ ಹವಾಮಾನ ಕಂಡು ಇಡೀ ವಿಶ್ವದ ಜನ ಆಕರ್ಷಿತರಾಗುತ್ತಾರೆ. ಸಮುದ್ರದ ಪಕ್ಕದಲ್ಲಿನ ನಗರಗಳಿಗೆ ಆಗುತ್ತಿರುವ ಸಮಸ್ಯೆ ನೀವು ಗಮನಿಸಿದ್ದೀರಿ. ಬೆಂಗಳೂರು ದೇಶದಲ್ಲೇ ಅತ್ಯುತ್ತಮ ಸುರಕ್ಷಿತ ಪ್ರದೇಶ. ಇದಕ್ಕೆ ಮುನ್ನುಡಿ ಬರೆದವರು ಕೆಂಗಲ್ ಹನುಮಂತಯ್ಯನವರು. ನಮಗೆ ಅಧಿಕಾರ ಸಿಕ್ಕಾಗ ಇಂತಹ ಸಾಕ್ಷಿಗುಡ್ಡೆಗಳನ್ನು ಬಿಟ್ಟುಹೋಗಬೇಕು” ಎಂದು ತಿಳಿಸಿದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!