BJP supports transport workers' protest: R. Ashoka

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸದಾಶಿವನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

ಕೆಲವು ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಾಹಾರ ನಡೆದಿದ್ದರೆ, ಈಗ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ನಡೆದಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ವೇಣುಗೋಪಾಲ್‌ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದರು.

ನಾನು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಆದರೆ ಈಗ ಅವರು ಉಪಾಹಾರ ಸವಿದಿದ್ದಾರೆ. ಈ ನಡುವೆ ಡಾ.ಜಿ.ಪರಮೇಶ್ವರ್‌ ಬಹಳ ನೋವಿನಿಂದ ಮಾತಾಡಿದ್ದಾರೆ. ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 580 ಕ್ಕೂ ಅಧಿಕ ಜನರು ರಸ್ತೆಗುಂಡಿಯಿಂದ ಸತ್ತಿದ್ದಾರೆ. ತಿಂಡಿ ತಿನ್ನುವ ಸಮಯವನ್ನು ರಸ್ತೆಗುಂಡಿ ಮುಚ್ಚಿಸಲು ವಿನಿಯೋಗಿಸಿದ್ದರೆ ಅಮಾಯಕ ಜೀವಗಳು ಉಳಿಯುತ್ತಿತ್ತು. ರೈತರ ಕಬ್ಬಿನ ದರದ ಸಮಸ್ಯೆ ಬಗೆಹರಿದಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರದ ಸಮಸ್ಯೆ ಬಗೆಹರಿದಿಲ್ಲ. ಈ ಬಗ್ಗೆ ಯಾವುದೇ ಉಪಾಹಾರ ಸಭೆ ನಡೆಸಿಲ್ಲ. ಇವರಿಬ್ಬರ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ನಡೆಸಬೇಕಿತ್ತೇ? ಅಂಗನವಾಡಿ ಕಾರ್ಯಕರ್ತರು, ರೈತರು, ಉದ್ಯಮಿಗಳು, ದಲಿತರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದೆ ಎಂದರು.

ಬಿಗ್‌ಬಾಸ್‌ನಲ್ಲಿ ವೈಲ್ಡ್‌ ಕಾರ್ಡ್‌ನಂತೆ ಸತೀಶ್‌ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್‌ ದಲಿತ ಬ್ರ್ಯಾಂಡ್‌ನಡಿ ಸಿಎಂ ಆಗಲು ಕಾಯುತ್ತಿದ್ದಾರೆ. ಇಡೀ ಸರ್ಕಾರ ರಿಯಾಲಿಟಿ ಶೋನಂತೆ ಆಗಿದೆ. ಈ ರೀತಿ ಸಭೆ ನಡೆಸುವ ಬದಲು, ತುಂಗಭದ್ರಾ ಜಲಾಶಯದ ಗೇಟ್‌ಗಳನ್ನು ದುರಸ್ತಿ ಮಾಡಿಸಲು 12 ಕೋಟಿ ರೂ. ಬಿಲ್‌ ಪಾವತಿಸಿದ್ದರೆ ರೈತರಿಗೆ ನೀರಾವರಿ ಲಭ್ಯವಾಗುತ್ತಿತ್ತು. ಈ ಬಗ್ಗೆ ರೈತರ ಪರವಾಗಿ ಅಧಿವೇಶನದ ಸಮಯದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾತ್ರ ಅಲ್ಲ, ಯಾವುದೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೊಟ್ಟ ಮಾತನ್ನು ಈಡೇರಿಸಲಾಗಿದೆಯೇ ಎಂದು ನಾವು ಪ್ರಶ್ನೆ ಮಾಡುತ್ತೇವೆ. ಧರ್ಮಸ್ಥಳದಲ್ಲಿ ಬುರುಡೆ ತಂದವನಿಗೆ ಬಿರಿಯಾನಿ ಕೊಟ್ಟಿದ್ದೇ ಕಾಂಗ್ರೆಸ್‌ ಸರ್ಕಾರ. ಆದರೆ ಅದನ್ನು ಸಾಬೀತುಪಡಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದರು.

ಬೆಂಗಳೂರಿನ ಬಗ್ಗೆ ಟೀಕೆ ಮಾಡಿದ ಉತ್ತರ ಪ್ರದೇಶದ ಸಂಸದರು ಭದ್ರತೆ ಹೆಚ್ಚು ಮಾಡಿಕೊಳ್ಳಬೇಕು. ಇಲ್ಲವಾದರೆ ಡಿ.ಕೆ.ಶಿವಕುಮಾರ್‌ ಅವರಿಗೂ ಬೆದರಿಕೆ ಹಾಕುತ್ತಾರೆ. ಈಗಾಗಲೇ ಉದ್ಯಮಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!