Doddaballapura: Hanuma Jayanti.. Special worship in various temples

ದೊಡ್ಡಬಳ್ಳಾಪುರ: ಹನುಮ ಜಯಂತಿ.. ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಆಂಜನೇಯ ದೇವಾಲಯಗಳಲ್ಲಿ ಇಂದು ಹನುಮ ಜಯಂತಿ (Hanuma Jayanti) ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ನಡೆಯುತ್ತಿದ್ದು, ದೇವಾಲಯಗಳು ತಳಿರು ತೋರಣ ದೀಪಾಲಂಕಾರದಿಂದ ಅಲಂಕೃತವಾಗಿವೆ.

ನಗರದ ಗಂಗಾಧರಪುರ, ರೋಜೀಪುರದಲ್ಲಿನ ಪ್ರಸನ್ನ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಡಿ.2ರಂದು ಮಧ್ಯಾಹ್ನ 12ಕ್ಕೆ ಹನುಮಜಯಂತಿ ಅಂಗವಾಗಿ ರಥೋತ್ಸವ ನಡೆಯುತ್ತಿದೆ.

ಇದರ ಅಂಗವಾಗಿ ಡಿ.1 ರಂದುಸಂಜೆ 6 ಗಂಟೆಗೆ ಸೀತಾರಾಮ ಕಲ್ಯಾಣೋತ್ಸವ ನಡೆಯಲಿದೆ. ಕಳೆದ 11 ದಿನಗಳಿಂದ ಹನುಮಜಯಂತಿ ಅಂಗವಾಗಿ ವಿವಿಧ ಭಜನಾ ಮಂಡಳಿಗಳ ವತಿಯಿಂದ ರಾತ್ರಿ ಹಗಲು ನಿರಂತರವಾಗಿ ಭಜನೆಗಳು ನಡೆದಿದ್ದು, ಹನುಮ ಜಯಂತಿಯಂದು ಮುಕ್ತಾಯವಾಗಲಿದೆ.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 5 ಗಂಟೆಗೆ ಪಂಚಮೃತ ಅಭಿಷೇಕ, 7 ಗಂಟೆಗೆ ಸುರಭಿ ಭಜನಾ ಮಂಡಲಿಯವರಿಂದ ಭಜನೆ ಕಾರ್ಯಶಕ್ರಮ, 8.30ಕ್ಕೆ ಶ್ರೀ ರಾಮತಾರಕ ಹೋಮ, ಸಂಜೆ ನೆಲದಾಂಜನೇಯ ಸ್ವಾಮಿ ಪ್ರಾಕಾರೋತ್ಸವ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮ ನಡೆಯಲಿದೆ.

ಅರಳು ಮಲ್ಲಿಗೆ ಬಾಗಿಲು ಸರ್. ಎಂ. ವಿಶ್ವೇಶ್ವರಯ್ಯ ವೃತ್ತದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಗ್ಗೆ 6 ಗಂಟೆಗೆ ಮಹಾಭಿಷೇಕ, 9 ಗಂಟೆಗೆ ವಿಶೇಷ ಅಲಂಕಾರ, 10 ಗಂಟೆಗೆ ವಿಷ್ಣು ಸಹಸ್ರ ನಾಮ ಪಾರಾಯಣ,ದೇವರ ನಾಮಗಳ ಗಾಯನ, ಸಂಜೆ 6 ಗಂಟೆಗೆ ಆಂಜನೇಯಸ್ವಾಮಿ ಮೆರವಣಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಹೂವಿನ ಅಲಂಕಾರ ವಿಶೇಷ ಆಲಂಕಾರ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಸಾದ ವಿನಿಯೋಗ ಕೈಗೊಳ್ಳಲಾಗಿದೆ.

ರೈಲ್ವೆ ನಿಲ್ದಾಣ ವೃತ್ತದ ಬಳಿಯ ಪ್ರಸನ್ನ ಆಂಜನೇಯಸ್ವಾಮಿ, ತಾಲೂಕಿನ ಜಿಂಕೆಬಚ್ಚಹಳ್ಳಿಯ ವೀರಾಂಜನೇಯ ಸ್ವಾಮಿ, ಕೊಡಿಗೆಳ್ಳಿಯ ಅಭಯ ಆಂಜನೇಯಸ್ವಾಮಿ ದೇವಾಲಯ, ಮಜರಾಹೊಸಹಳ್ಳಿಯ ಆಂಜನೇಯಸ್ವಾಮಿ, ಸಿದ್ದೇನಾಯಕನಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ, ಶಿವಪುರ ಗೇಟ್, ರಾಗಿರಾಯನ ಕೆರೆ ಆಂಜನೇಯಸ್ವಾಮಿ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!