A defamation suit is inevitable if the news is distorted; D.K. Sivakumar Warning

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಖಾಸಗಿ ಕಾರ್ಯಕ್ರಮ ಹಾಗೂ ಮತಕಳ್ಳತನ ವಿರುದ್ಧದ ಡಿ. 14 ರ ಪ್ರತಿಭಟನೆಗೆ ತಯಾರಿ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದು, ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ದೆಹಲಿ ಪ್ರವಾಸದ ಉದ್ದೇಶವೇನು ಎಂದು ಕೇಳಿದಾಗ, ನನ್ನ ಆಪ್ತ ಸ್ನೇಹಿತರ ಮಗನ ಮದುವೆ ಇರುವ ಕಾರಣ ತೆರಳುತ್ತಿದ್ದೇನೆ. ಡಿ.14 ರಂದು ಮತ ಕಳ್ಳತನ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಮಾವೇಶವಿದೆ. ಅದಕ್ಕೆ ನಮ್ಮ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದುಕೊಂಡು ಹೋಗಬೇಕು. ಈ ಬಗ್ಗೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚಿನೆ ನೀಡಿದ್ದೇನೆ. ನಮ್ಮ ಕಾರ್ಯಕರ್ತರಿಗೆ ವಾಸ್ತವ್ಯ ಕಲ್ಪಿಸಲು ಕೆಲವರಿಗೆ ಜವಾಬ್ದಾರಿ ವಹಿಸಬೇಕಾಗಿದೆ. ಈ ದೃಷ್ಟಿಯಿಂದ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಸಚಿವ ಸಂಪುಟ ಸಭೆಗೆ ಮರಳಲಿದ್ದೇನೆ ಎಂದು ತಿಳಿಸಿದರು.

ನಮ್ಮ ರಾಜ್ಯದಿಂದಲೇ ಮತಕಳ್ಳತನ ವಿರುದ್ಧ ಹೋರಾಟ ಆರಂಭವಾಗಿದ್ದು, ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹೀಗಾಗಿ ಪ್ರತಿ ತಾಲ್ಲೂಕಿನಿಂದ ಕನಿಷ್ಟ 30 ಜನರನ್ನು, ಬೆಂಗಳೂರಿನಿಂದ ಹೆಚ್ಚು ಜನರನ್ನು ಕರೆದೊಯ್ಯಬೇಕು. ಇದಕ್ಕಾಗಿ ರೈಲ್ವೇ ಸಚಿವರ ಜೊತೆ ಚರ್ಚೆ ಮಾಡಿ ಮನವಿ ಮಾಡಿದ್ದೇನೆ. ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್, ಶಾಸಕರು ಇದರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಈ ಬಗ್ಗೆ ನಾನು ಹಾಗೂ ಸಿಎಂ ಇಬ್ಬರೂ ಎಲ್ಲರಿಗೂ ಸಂದೇಶ ರವಾನಿಸಿದ್ದೇವೆ” ಎಂದು ತಿಳಿಸಿದರು.

ಡಿ.8 ರ ಸರ್ವಪಕ್ಷ ಸಭೆ ಮುಂದಕ್ಕೆ ಹೋಗುವ ಸಾಧ್ಯತೆ

ಡಿ.8 ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡುವ ಸಾಧ್ಯತೆಗಳಿವೆ. ನಾವು ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ ಅವರು ರಾಗ ಎಳೆಯುತ್ತಿದ್ದಾರೆ. ಹೀಗಾಗಿ ನಾನು ಹಾಗೂ ಸಿಎಂ ಚರ್ಚೆ ಮಾಡಿ, ವಿರೋಧ ಪಕ್ಷದವರಿಗೆ ಅವರಿಗೆ ಸರಿಹೋಗುವ ದಿನಾಂಕ ನಿಗದಿ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಕೆ.ಸಿ ವೇಣುಗೋಪಾಲ್ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೇಳಿದಾಗ, “ಬಹಳ ಸಂತೋಷ. ಸಿಎಂ ಅವರು ವೇಣುಗೋಪಾಲ್, ರಾಹುಲ್ ಗಾಂಧಿ, ಖರ್ಗೆ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಪಕ್ಷದ ವಿಚಾರವಾಗಿ ಅವರು ಮಾತನಾಡುತ್ತಾರೆ” ಎಂದು ತಿಳಿಸಿದರು.

ರಾಜಕಾರಣದಲ್ಲಿ ಜೈಕಾರ, ಧಿಕ್ಕಾರ ಸಹಜ

ಮಂಗಳೂರಿನಲ್ಲಿ ನಿಮ್ಮ ಅಭಿಮಾನಿಗಳು ಡಿ.ಕೆ, ಡಿ.ಕೆ.. ಎಂದು ಕೂಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಪೂರ್ಣಾವಧಿ ಸಿಎಂ ಎಂದು ಕೂಗಿದ್ದಾರೆ ಎಂದು ಕೇಳಿದಾಗ, “ಅಭಿಮಾನಿಗಳು ಈ ರೀತಿ ಕೂಗುವುದು ಸಹಜ. ಜನ ಕಳೆದ ಹತ್ತು ವರ್ಷಗಳಿಂದ ಡಿಕೆ, ಡಿಕೆ.. ಎಂದು ಕೂಗುತ್ತಿದ್ದಾರೆ. ಇದರಲ್ಲಿ ಹೊಸತೇನೂ ಇಲ್ಲ. ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ.. ಎಂದು ಕೂಗುವುದಿಲ್ಲವೇ? ಕಾಂಗ್ರೆಸ್ ಕಾರ್ಯಕರ್ತರು ರಾಹುಲ್.., ರಾಹುಲ್… ಎಂದು ಕೂಗುತ್ತಾರೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು, ಸಿದ್ದು… ಎಂದು ಕೂಗುತ್ತಾರೆ. ಇದರಲ್ಲಿ ತಪ್ಪೇನಿಲ್ಲ, ಇದಕ್ಕೆಲ್ಲ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಇದನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ರಾಜಕಾರಣದಲ್ಲಿ ಜೈಕಾರ, ಧಿಕ್ಕಾರ, ಅಭಿಮಾನದ ಮಾತುಗಳು ಸಹಜ” ಎಂದು ತಿಳಿಸಿದರು.

ತಮಗಿಷ್ಟದ ವಾಚ್ ಧರಿಸುವ ಹಕ್ಕು ಸಿದ್ದರಾಮಯ್ಯನವರಿಗಿದೆ

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ ಕ್ರೆಟಿಡ್ ಕಾರ್ಡ್ ಮೂಲಕ 24 ಲಕ್ಷ ರೂಪಾಯಿ ಕೊಟ್ಟು ಖರೀದಿ ಮಾಡಿದ್ದೇನೆ. ಬೇಕಿದ್ದರೆ ನನ್ನ ಕ್ರೆಡಿಟ್ ಕಾರ್ಡ್ ಪರಿಶೀಲಿಸಿ. ಇದನ್ನು ನನ್ನ ಚುನಾವಣಾ ಅಫಿಡವಿಟ್ ನಲ್ಲೂ ಘೋಷಿಸಿಕೊಂಡಿದ್ದೇನೆ. ಸಿದ್ದರಾಮಯ್ಯ ಅವರ ಬಗ್ಗೆ ಟೀಕೆ ಬಗ್ಗೆ ನನಗೆ ಗೊತ್ತಿಲ್ಲ. ನನಗಾಗಲಿ, ಸಿದ್ದರಾಮಯ್ಯ ಅವರಿಗಾಗಲಿ ನಮಗೆ ಇಷ್ಟವಾದ ವಾಚ್ ಧರಿಸುವ ಹಕ್ಕು ಇದೆ. ಅವರಿಗೆ ಅವರ ಮಗ ವಾಚ್ ಕೊಡಿಸಿರಬಹುದು ಅಥವಾ ಅವರೇ ಅದನ್ನು ಖರೀದಿ ಮಾಡಿರಬಹುದು. ನಮ್ಮ ತಂದೆಗೆ ವಾಚ್ ಗಳೆಂದರೆ ಬಹಳ ಇಷ್ಟ. ಅವರ ಬಳಿ ಏಳು ವಾಚ್ ಗಳಿದ್ದವು. ಅವರು ಸತ್ತ ನಂತರ ಅದನ್ನು ಯಾರು ಧರಿಸಬೇಕು..? ನಾನು ಧರಿಸಬೇಕು, ಇಲ್ಲವೇ ನನ್ನ ತಮ್ಮ ಧರಿಸಬೇಕು ಎಂದು ತಿಳಿಸಿದರು.

30 ತಿಂಗಳ ನಂತರ ಬೇಕಾದರೂ ಸಿಎಂ ಬದಲಾಗಬಹುದು ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷ ಹಾಗೂ ನನಗೆ ಮಾತ್ರ ವಕ್ತಾರ. ಬೇರೆ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!