D.C. Shashidhar distance from Doddaballapura Congress..! What is the reason..?

ದೊಡ್ಡಬಳ್ಳಾಪುರ ಕಾಂಗ್ರೆಸ್‌ನಿಂದ ಡಿ.ಸಿ. ಶಶಿಧರ್ ಅಂತರ..! ಕಾರಣವೇನು..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸಿ. ಶಶಿಧರ್ (D.C. Shashidhar) ದೊಡ್ಡಬಳ್ಳಾಪುರ ಕಾಂಗ್ರೆಸ್ (Doddaballapura Congress) ಪಕ್ಷದಿಂದ ಅಂತರ ಕಾಯ್ದುಕೊಂಡಿರುವುದು, ರಾಜಕಾರಣದಿಂದ ತಟಸ್ಥವಾಗಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

21ನೇ ವಯಸ್ಸಿಗೆ ರಾಜಕಾರಣಕ್ಕೆ ಕಾಲಿಟ್ಟ ದೊಡ್ಡಬೆಳವಂಗಲದ ಡಿ.ಸಿ. ಶಶಿಧರ್, 2005 ರಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, 2008 ರಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, 2012ರಲ್ಲಿ ಯೂತ್ ಕಾಂಗ್ರೆಸ್ ಪಾರ್ಲಿಮೆಂಟ್ ಅಧ್ಯಕ್ಷರಾಗಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ.

ಬಳಿಕ ದೊಡ್ಡಬೆಳವಂಗಲ ಗ್ರಾಮಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಡಿ.ಸಿ. ಶಶಿಧರ್ ನಂತರ ಗ್ರಾಮಪಂಚಾಯಿತಿ ಅಧ್ಯಕ್ಷರಾದರೂ, ಆನಂತರ ನಡೆದ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ, ಕಾಂಗ್ರೆಸ್ ಪಕ್ಷದಲ್ಲಿನ ತೀವ್ರ ಸ್ಪರ್ಧೆಯ ನಡುವೆಯೂ ಅಧ್ಯಕ್ಷರಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯಲ್ಲಿ ಹಲವು ಮಹತ್ತರ ಕಾರ್ಯಗಳನ್ನು ಮಾಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಜನತೆ ಹಾಗೂ ಎಲ್ಲಾ ಪಕ್ಷಗಳ ಸದಸ್ಯರ ಮನ್ನಣೆಗೆ ಪಾತ್ರರಾಗಿದ್ದರು.

ಆದರೆ ವಿಧಾನಸಭೆ ಚುನಾವಣೆಯ ಬಳಿಕ ಡಿ.ಸಿ. ಶಶಿಧರ್ ಅವರು ಏಕಾಏಕಿ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಲಕ್ಷಣಗಳು ಕಂಡುಬರುತ್ತಿದೆ.

ಡಿ.ಸಿ. ಶಶಿಧರ್ ತಟಸ್ಥವಾಗಲು ಕಾರಣವೇನು..?

ಡಿ.ಸಿ. ಶಶಿಧರ್ ಅವರ ಆತ್ಮೀಯ ವಲಯದ ಪ್ರಕಾರ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕರಿಗೆ ಬೆಲೆ ಸಿಗುತ್ತಿಲ್ಲ, ಹಣ ಬಲ ಉಳ್ಳವರಿಗೆ ಮಾತ್ರ ಹುದ್ದೆಗಳು ದೊರಕುತ್ತಿದೆ, ಪಕ್ಷ ನಿಷ್ಟೆ ಹೊಂದಿದವರಿಗೆ ಅವಕಾಶಗಳು ಸಿಗುತ್ತಿಲ್ಲ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರ ಕೇಳುವವರು ಇಲ್ಲವಾಗಿದೆ ಎಂಬ ಬೇಸರ ಅವರಿಗೆ ಕಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಪ್ರಬಲವಾದ ಹಿಡಿತ ಹೊಂದಿರುವ ಶಶಿಧರ್ ಅವರು ಸಚಿವ ಕೃಷ್ಣಾ ಬೈರೇಗೌಡ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡವರು. ಆದರೆ ಈಗ ಬೈರೇಗೌಡರ ಸಲಹೆಗೂ ಶಶಿಧರ್ ಮೌನವೇ ಉತ್ತರ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.

ಅಲ್ಲದೆ ಬೆಂಗಳೂರು ಗ್ರಾಮಾಂತರ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ದೊಡ್ಡಬಳ್ಳಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ಶಶಿಧರ್ ಅವರ ಬೆಂಬಲಿಗರಾಗಿದ್ದಾರೆ‌. ಆದರೆ ಏಕಾಏಕಿ ಡಿ.ಸಿ. ಶಶಿಧರ್ ಅವರು ತಟಸ್ಥವಾಗಿರುವುದು ಅವರ ಹಿಂಬಾಲಕರಿಗೆ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಶಶಿಧರ್ ಬೇರೆ ಪಕ್ಷಕ್ಕೆ ತೆರಳಿದರೆ ಗತಿ ಯಾರು ಎಂಬ ಆತಂಕ ಅವರದ್ದಾಗಿದೆ.

ಕೆಲವೇ ತಿಂಗಳುಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಘೋಷಣೆಯಾಗಲಿದ್ದು, ದೊಡ್ಡಬಳ್ಳಾಪುರ ಕಾಂಗ್ರೆಸ್ ಡಿ.ಸಿ.ಶಶಿಧರ್ ಅಂತಹ ನಾಯಕರನ್ನು ಓಲೈಸಿ ಸಕ್ರಿಯರನ್ನಾಗಿಸದಿದ್ದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ನಷ್ಟ ಉಂಟಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಪ್ರತಿಕ್ರಿಯೆ ನೀಡಲು ಮೌನ

ಈ ಎಲ್ಲಾ ಬೆಳವಣಿಗೆ ಕುರಿತು ಹರಿತಲೇಖನಿ ಡಿ.ಸಿ.ಶಶಿಧರ್ ಅವರನ್ನು ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಯಿತು. ಆದರೆ, ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿ, ಮೌನ ವಹಿಸಿದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!