Don't organize on the basis of caste, organize on the basis of women's power: DCM D.K. Shivakumar advises

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು: “ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು.

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು

ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ.

ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ ಎಂದು ಬಣ್ಣಿಸಿದರು.

ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು.

ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ ಎಂದು ತಿಳಿಸಿದರು.

ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಿ

ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ.

ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ ಎಂದು ಹೇಳಿದರು.

ನಿಮ್ಮ ಬೇಡಿಕೆಯಂತೆ ಸಂಘಕ್ಕೆ ಅಗತ್ಯವಾದ ಭೂಮಿ ನೀಡಲಾಗುವುದು

ಮಹಿಳಾ ನೌಕಕರ ಸಂಘಕ್ಕೆ ಜಾಗದ ಮನವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಹಾಗೂ ನನ್ನ ಬಳಿ ಪ್ರಸ್ತಾಪ ಮಾಡಿದರು. ಸಿಎಂ ಅವರು ಜಾಗ ನೀಡಿ ಎಂದು ಮುಕ್ತವಾಗಿ ಹೇಳಿದ್ದಾರೆ. ನಿಮಗೆ ಅಗತ್ಯವಾಗಿರುವ ಜಾಗವನ್ನು ನೀಡುತ್ತೇವೆ.

ಹೆಣ್ಣು ಮಗು ಕಲಿತರೆ ಒಂದು ಕುಟುಂಬ ಹಾಗೂ ಸಮಾಜವೇ ಕಲಿತಂತೆ ಎಂದು ನೆಹರೂ ಅವರು ನಮಗೆ ಸಂದೇಶ ನೀಡಿದ್ದಾರೆ. ಮಹಿಳೆಯರು ಸಹಕಾರ ನೀಡದಿದ್ದರೆ ನಮಗೆ ರಾಜಕಾರಣ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

“ಮುಂದಿನ ಒಂದು ವರ್ಷದಲ್ಲಿ ಅರಮನೆ ಮೈದಾನದಲ್ಲಿ ದೊಡ್ಡ ಮಟ್ಟದ ಮಹಿಳಾ ಸಮಾವೇಶವನ್ನು ಮಾಡಲು ನೀವು ರೂಪುರೇಷೆ ಸಿದ್ಧಮಾಡಿಕೊಳ್ಳಿ. ಅದಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದು ಹೆಚ್.ಕೆ ಪಾಟೀಲ್ ಅವರು ನನ್ನ ಬಳಿ ಹೇಳಿದ್ದಾರೆ” ಎಂದು ತಿಳಿಸಿದರು.

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ

ನಾನು ಹಾಗೂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೊದಲು ಜಾರಿಗೆ ತಂದಿದ್ದೆ, ಮಹಿಳೆಯರಿಗಾಗಿ ಘೋಷಣೆಯಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರಿ ನೌಕರರಾದರೂ ನಿಮಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆಯಲ್ಲವೇ? ಸರ್ಕಾರಿ ಮಹಿಳಾ ನೌಕರರು ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣ ಮಾಡಬಹುದಲ್ಲವೇ? ಬಡ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ ಅಲ್ಲವೇ? ನಮ್ಮ ಯೋಜನೆ ನೋಡಿ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದಾರಲ್ಲವೇ? ಹೀಗಾಗಿ ಮಹಿಳಾ ಸಬಲೀಕರಣ ವಿಚಾರದಲ್ಲಿ ನಾವು ಭದ್ರ ಅಡಿಪಾಯ ಹಾಕಿದ್ದೇವೆ.

ಮಹಿಳೆಯರ ಪರವಾಗಿ ಚಿಂತನೆ ಮಾಡಿರುವ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ ಮಾತ್ರ. ಮಹಿಳೆಯರು ಉಪಕಾರ ಸ್ಮರಣೆ ಇಟ್ಟುಕೊಂಡಿರುತ್ತಾರೆ. ತಾಯಿ ಹೃದಯದವರು, ಸಹಾಯ ಮಾಡಿದವರನ್ನು ಸ್ಮರಿಸುತ್ತೀರಿ ಎಂದು ನಾವು ಮಹಿಳೆಯರಿಗಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!