Champashashti: Special puja at Ghati Subrahmanya Kshetra..

ಗುಡ್ಮಾರ್ನಿಂಗ್ ನ್ಯೂಸ್: ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವ‌‌.. ಫ್ಲೆಕ್ಸ್, ಫುಟ್ ಪಾತ್ ಅಂಗಡಿಗಳು ತೆರವಿಗೆ ಸೂಚನೆ

ಬೆಂ, ಗ್ರಾ, ಜಿಲ್ಲೆ: ದೊಡ್ಡಬಳ್ಳಾಪುರದ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ (Ghati Subrahmanya Swamy) ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ. 25 ರಂದು ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಶ್ರಮ ವಹಿಸಬೇಕು ಎಂದರು.

ರಾಸುಗಳ ಜಾತ್ರೆಯು 10 ರಂದು ಆರಂಭವಾಗಲಿದ್ದು ವಿವಿಧ ಭಾಗಗಳಿಂದ ಸಾಕಷ್ಟು ರೈತರು, ಜಾನುವಾರುಗಳು ಆಗಮಿಸಲಿವೆ. ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಬೇಕು.

ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.

ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.

ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ಹೆಚ್ಚುವರಿಯಾಗಿ ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.

ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರಗಳು ಹಾಗೂ ಬೈಕ್ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು.

ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್, ಭಧ್ರತೆ ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಅನಧಿಕೃತ ಜಾಹಿರಾತು ಫಲಕ, ಫುಟ್ ಪಾತ್ ಅಂಗಡಿಗಳು ತೆರವಿಗೆ ಸೂಚನೆ

ಮಾಕಳಿ ಇಂದ ಘಾಟಿ ರಸ್ತೆಯ ವರೆಗೆ, ಕಂಟನಕುಂಟೆ ಮಾರ್ಗವಾಗಿ ಅನಧಿಕೃತವಾಗಿ ಜಾಹೀರಾತು ಫಲಕಗಳು ಅಳವಡಿಸಿರುವುದರಿಂದ ವಾಹನ ಓಡಾಟಕ್ಕೆ ತೊಂದರೆ ಆಗಲಿದ್ದು ತೆರವುಗೊಳಿಸಲು ಸೂಚಿಸಿದರು.

ಜೊತೆಗೆ ದೇವಾಲಯದ ಸುತ್ತಲೂ ಫೂಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವು ಗೊಳಿಸಿ ಅವರಿಗೆ ಪರ್ಯಾಯ ಜಾಗ ಗುರುತಿಸಿ ಅಲ್ಲಿ ಅಂಗಡಿ ಮಳಿಗೆಗಳ ಸ್ಥಾಪಿಸಲು ಅನುಮತಿ ನೀಡಿ ಎಂದರು.

ಸ್ಥಳೀಯ ಕಲಾವಿದರಿಗೆ ಆದ್ಯತೆ

ಬ್ರಹ್ಮರಥೋತ್ಸವದ ಡಿಸೆಂಬರ್ 24, 25 ರಂದು ಹಾಗೂ ರಾಸುಗಳ ಜಾತ್ರಾ ಸಮಯದಲ್ಲಿ ಒಂದು ದಿನ ಒಟ್ಟು ಮೂರು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲು ತೀರ್ಮಾನಿಸಲಾಗಿದ್ದು. ಜಿಲ್ಲೆಯ ನಾಲ್ಕು ತಾಲ್ಲೂಕಿನ ಸ್ಥಳೀಯ ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಸ್ಥಳೀಯ ಕಲಾವಿದರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಘಾಟಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.

ಸಭೆಯಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ಎಸಿ ದುರ್ಗ ಶ್ರಿ, ಎಎಸ್ಪಿ ನಾಗರಾಜ್, ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಇಒ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!