ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

Efforts to get GI tag for Doddaballapura saree: Minister's promise

ಬೆಂಗಳೂರು: ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ವಿಕಾಸಸೌಧದಲ್ಲಿ ಆಗಮಿಸಿದ್ದ ದೊಡ್ಡಬಳ್ಳಾಪುರ ನೇಕಾರರ ಸಭೆ ನಡೆಸಿದ ಸಚಿವರು, ಪವರ್‌ಲೂಮ್‌ ರಿಸರ್‌ವೇಷನ್‌ ಆಕ್ಟ್‌ ತಿದ್ದುದಪಡಿಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ತೆರಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರದ ಇತಿಮಿತಿಯಲ್ಲಿ ಸಾಧ್ಯವಿರುವ ನೆರವು ನೀಡಲಾಗುವುದು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ನಿಯೋಗ ತೆರಳಿ ಒತ್ತಡ ತರಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರಕ್ಕೆ ಬರುವ ಸೂರತ್‌ ಸೀರೆಗಳನ್ನು ನಿಷೇಧ ಮಾಡಬೇಕು ಎಂಬ ಬೇಡಿಕೆ ಸ್ಥಳೀಯ ನೇಕಾರರ ಹಿತರಕ್ಷಣೆ ದೃಷ್ಟಿಯಿಂದ ಸಾಧುವಾಗಿದೆ. ಆದರೆ ಕಾನೂನಿನಲ್ಲಿ ಅವಕಾಶ ಇದೆಯೇ? ನಿಷೇಧ ಮಾಡಬಹುದೇ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ಅವಕಾಶವಿದ್ದರೆ ಖಂಡಿತ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದರು.

ದೊಡ್ಡಬಳ್ಳಾಪುರದಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಮಳಿಗೆಗಳ ನಿರ್ಮಾಣ ಹಾಗೂ ನೇಕಾರರ ಭವನ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದು, ಈ ಯೋಜನೆಗೆ ಜಾಗ ಗುರುತಿಸಲಾಗುವುದು ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಅಧುನೀಕರಣ ಅನಿವಾರ್ಯವಾಗಿದ್ದು, ಕೈಮಗ್ಗ ಹೊಂದಿರುವವರು ರೇಪಿಯರ್‌ ಮಗ್ಗಕ್ಕೆ ಪರಿವರ್ತನೆ ಹೊಂದಲು ಬಯಸಿದರೆ ಸಬ್ಸಿಡಿ ಕೊಡುವ ಪ್ರಯತ್ನ ಮಾಡುತ್ತೇವೆ. ಆದರೆ ದೊಡ್ಡಬಳ್ಳಾಪುರದಲ್ಲಿರುವ ೨೫೦೦ ನೇಕಾರರಿಗೆ ಏಕಕಾಲಕ್ಕೆ ಸಬ್ಸಿಡಿ ಕೊಡುವುದು ಕಷ್ಟವಾಗಬಹುದು. ಹಂತ ಹಂತವಾಗಿ ರೇಪಿಯರ್‌ ಮಗ್ಗಕ್ಕೆ ಬದಲಾವಣೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಮಗ್ಗಗಳಿಗೆ ವಿದ್ಯುತ್‌ ಸಬ್ಸಿಡಿ ಕೊಡಬೇಕು ಎಂಬ ಬೇಡಿಕೆ ಬಂದ ಕಾರಣದಿಂದಲೇ ರಾಜ್ಯ ಸರ್ಕಾರ ೧೦ ಎಚ್‌ಪಿವರೆಗಿನ ಮಗ್ಗಗಳಿಗೆ ಉಚಿತವಾಗಿ ವಿದ್ಯುತ್‌ ಪೂರೈಕೆ ಮಾಡುತ್ತಿದೆ. ಆದರೆ ಈಗ ರೇಪಿಯರ್‌ ಮಗ್ಗಗಳಿಗೆ

ಶಾಸಕ ಧೀರಜ್‌ ಮುನಿರಾಜು ಮಾತನಾಡಿ, ಸೂರತ್‌ ಸೀರೆಗಳಿಂದಲೇ ದೊಡ್ಡಬಳ್ಳಾಪುರ ನೇಕಾರರಿಗೆ ಸಂಕಷ್ಟ ಎದುರಾಗಿದೆ. ಆದ್ದರಿಂದ ಸೂರತ್‌ ಸೀರೆಗಳನ್ನು ನಿಷೇಧಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರೇಪಿಯರ್‌ ಮಗ್ಗಗಳಲ್ಲಿ ಸೀರೆಗಳನ್ನು ನೇಯಲು ಅವಕಾಶ ಇಲ್ಲ. ಆರ್‌. ಎಲ್‌. ಜಾಲಪ್ಪ ಅವರು ಜವಳಿ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ರೂಪಿಸಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.

ದೊಡ್ಡಬಳ್ಳಾಪುರ ಟೆಕ್ಸ್‌ಟೈಲ್‌ ವೀವರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ನರಸಿಂಹರಾವ್‌ ಅವರು, ದೊಡ್ಡಬಳ್ಳಾಪುರದ ಸೀರೆಗಳ ಉತ್ಪಾದನಾ ವೆಚ್ಚ 1500 ರೂ. ಇದ್ದರೆ ಸೂರತ್‌ ಸೀರೆಗಳ ಉತ್ಪಾದನಾ ವೆಚ್ಚ 600 ರೂ.ಗಳಿಂದ 700 ರೂ.ಗಳ ವರೆಗೆ ಇದೆ. ಸೂರತ್‌ ಸೀರೆಗಳು ಗರಿಷ್ಠ ಪ್ರಮಾಣದಲ್ಲಿ ಬರುತ್ತಿರುವುದರಿಂದ ದೊಡ್ಡ ಬಳ್ಳಾಪುರ ನೇಕಾರರ ಸ್ಥಿತಿ ಶೋಚನೀಯವಾಗಿದೆ. ಈ ನೇಕಾರರ ಉಳಿವಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸೂರತ್‌ ಸೀರೆಗಳನ್ನು ನಿಷೇಧ ಮಾಡಲು ಅವಕಾಶ ಇದೆ. ಸೂರತ್‌ ಸೀರೆಗಳ ಲಾರಿಗಳನ್ನು ತಡೆದು ಪ್ರತಿಭಟನೆ ಮಾಡುತ್ತೇವೆ. ಜವಳಿ ಇಲಾಖೆಗೆ ಮಾಹಿತಿ ನೀಡಲಿದ್ದು, ಅಧಿಕಾರಿಗಳು ಆಗಮಿಸಿ ಈ ಸೀರೆಗಳನ್ನು ವಶಕ್ಕೆ ಪಡೆಯಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ನೇಕಾರರು ಆಗ್ರಹಪಡಿಸಿದರು.

ಸಚಿವ ಶಿವಾನಂದ ಪಾಟೀಲ ಅವರು ನೆರವಿಗೆ ಬರುವುದಾಗಿ ಭರವಸೆ ನೀಡಿದ್ದಾರೆ. ಕಾಯ್ದೆ ತಿದ್ದುಪಡಿಗೆ ಅವರ ಸಲಹೆಯಂತೆ ಕೇಂದ್ರದ ಬಳಿ ನಿಯೋಗ ತೆರಳುವುದು ಸೂಕ್ತ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಹೇಳಿದರು.

ಜವಳಿ ಇಲಾಖೆ ಆಯುಕ್ತ ಕ್ಯಾಪ್ಷನ್‌ ರಾಜೇಂದ್ರ, ಜವಳಿ ಇಲಾಖೆ ಅಧಿಕಾರಿಗಳಾದ ಪ್ರಕಾಶ್‌, ಯೋಗೇಶ್‌ ಮತ್ತಿತರು ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]