H.D. Kumaraswamy publicly apologized to Adichunchanagiri Sri..!

ಆದಿಚುಂಚನಗಿರಿ ಶ್ರೀಗಳಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ ಹೆಚ್.ಡಿ. ಕುಮಾರಸ್ವಾಮಿ..!

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ) ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಸಿಎಂ ಆಗಲೆಂದು ಒಕ್ಕಲಿಗ ಮಠದ ಶ್ರೀಗಳು ದನಿ ಎತ್ತಿರುವುದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು.

ಪವರ್ ಶೇರಿಂಗ್ ವಿಚಾರವಾಗಿ ಉಂಟಾಗಿದ್ದ ಗೊಂದಲಗಳಿಗೆ ಹೈಕಮಾಂಡ್ ಸೂಚನೆಯಂತೆ ನಿನ್ನೆ ಸಿಎಂ ಸಿದ್ದರಾಮಯ್ಯ (Cmsiddaramaiah) ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಬ್ರೇಕ್‌ಫಾಸ್ಟ್ ಮಿಟಿಂಗ್ ನಡೆಸಿ ಕದನ ವಿರಾಮ ಘೋಷಣೆಯಾಗಿದೆ. ಆದರೆ ಡಿ.ಕೆ. ಶಿವಕುಮಾರ್ ಅವರಿಗೆ ಒಕ್ಕಲಿಗ ಶ್ರೀಗಳ ಬೆಂಬಲ ನೀಡಿರುವುದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವುದು ಚರ್ಚೆಯಾಗಿತ್ತು.

ಒಕ್ಕಲಿಗ ಸಮುದಾಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಕೂಡಾ ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಮಾತನಾಡಿ ಬೆಂಬಲ ನೀಡಿದ್ದರು.

ಡಿ.ಕೆ. ಶಿವಕುಮಾರ್ ಜೀವ ಪಣಕ್ಕಿಟ್ಟು ಹೋರಾಡಿದ್ದಾರೆ: ನಿರ್ಮಲಾನಂದನಾಥ ಸ್ವಾಮೀಜಿ

ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಅವರು ಶ್ರಮಿಸಿದ್ದಾರೆ. ಜೀವ ಪಣಕ್ಕಿಟ್ಟು ಹೋರಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗದಿದ್ದರೆ ಬೇಸರವಾಗಲಿದೆ.

ಪಕ್ಷ ಅಧಿಕಾರಕ್ಕೆ ತಂದ ಹೋರಾಟಗಾರ ಡಿ.ಕೆ. ಶಿವಕುಮಾರ್ ಅವರೇ ಮುಂದಿನ 2.5 ವರ್ಷ ಸಿಎಂ ಆಗಲಿದ್ದಾರೆ. ಅವರಿಗೆ ಸಿಎಂ ಸ್ಥಾನ ಅವಕಾಶ ಸಿಗುವ ಭರವಸೆ ಇತ್ತು. ಅವರನ್ನು ಮುಖ್ಯಮಂತ್ರಿ ಆಗಿ ಮಾಡಬೇಕು. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಹೇಳಿದ್ದರು.

ಶ್ರೀಗಳ ಮಾತಿಗೆ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ

ಒಕ್ಕಲಿಗ ಮಠಗಳ ಶ್ರೀಗಳು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲೆಂದು ಹಾರೈಸಿರುವುದಕ್ಕೆ ಕೆಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದಿದ್ದರು.

ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಎನ್ ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದಿದ್ದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ.

ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಎಂದು ಕೇಂದ್ರ ಸಚಿವರು ಹೇಳಿದ್ದರು.

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದರು.

ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದರು.

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಹೆಚ್.ಡಿ. ಕುಮಾರಸ್ವಾಮಿ

ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ದೊರಕಬೇಕೆಂದು ಬೆಂಬ ನೀಡಿದ್ದ ನಿರ್ಮಲಾನಂದ ಶ್ರೀಗಳ ಬಗ್ಗೆ ಆಕ್ಷೇಪದ ಮಾತನಾಡಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಶ್ರೀಗಳನ್ನು ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ‌

ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ.

ಶ್ರೀಗಳಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು.

ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದರು.

ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ‌ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಓದಿಕೊಂಡವರು, ಶಿಕ್ಷಣ ಪಡೆದವರು ಮತ್ತೊಬ್ಬರು ಇಲ್ಲ.

ಸ್ವಾಮೀಜಿಗಳು ಅವರದ್ದೆ ಆದ ಕಲ್ಪನೆಗಳನ್ನು ಹೊಂದಿರುತ್ತಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ ಎಂದು ಅವರು ಹೇಳುವ ಮೂಲಕ ತಮ್ಮ ಮಾತಿನಿಂದ ಉಂಟಾಗಿದ್ದ ವಿವಾದವನ್ನು ಕುಮಾರಸ್ವಾಮಿ ಅವರು ತೆರೆ ಹೆಳೆದಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!