MP Dr.K. Sudhakar introduced two farmer-centric private bills

ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್

ನವದೆಹಲಿ: ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ (Dr.K. Sudhakar) ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ.

  1. ಹೈನುಗಾರರ (ಕಲ್ಯಾಣ) ಮಸೂದೆ, 2024

ಈ ಮಸೂದೆಯು ಭಾರತದ 7 ಕೋಟಿ ಡೇರಿ ಆಧಾರಿತ ಕೃಷಿ ಕುಟುಂಬಗಳಿಗೆ ಸಾಮಾಜಿಕ ಭದ್ರತೆಯ ನೆರವು ನೀಡುತ್ತದೆ. ಈ ಕುಟುಂಬಗಳಲ್ಲಿ ಹೆಚ್ಚಿನವರು ಸಣ್ಣ, ಅತಿ ಸಣ್ಣ ರೈತರು ಮತ್ತು ಮಹಿಳೆಯರಿದ್ದಾರೆ.

ಪ್ರಮುಖ ಅಂಶಗಳು

ಸಂಸದರು, ತಜ್ಞರು ಮತ್ತು ರೈತ ಪ್ರತಿನಿಧಿಗಳನ್ನು ಒಳಗೊಂಡ ಡೇರಿ ರೈತರ ಕಲ್ಯಾಣ ಸಮಿತಿಯ ರಚನೆ
ಡೇರಿ ರೈತರ ಕಲ್ಯಾಣ ನಿಧಿ ಸ್ಥಾಪನೆ .
ಡೇರಿ ರೈತರಿಗೆ ತಲಾ ₹50 ಲಕ್ಷ ಅಪಘಾತ ವಿಮೆ.
ಡೇರಿ ರೈತರಿಗೆ ತಲಾ ₹10 ಲಕ್ಷ ಆರೋಗ್ಯ ವಿಮೆ.

ಸರ್ಕಾರಿ ಯೋಜನೆಗಳಡಿ ಖರೀದಿಸಿದ ಜಾನುವಾರುಗಳಿಗೆ ಉಚಿತ ವಿಮೆ
ಡೇರಿ ರೈತರಿಗೆ ಮಾಸಿಕ ಪಿಂಚಣಿ
ಅಂದಾಜು ವೆಚ್ಚ: ವಾರ್ಷಿಕ ₹10,000 ಕೋಟಿ.

ಹವಾಮಾನದ ವೈಪರೀತ್ಯದಿಂದ ಜಾನುವಾರುಗಳ ಮೇಲೆ ಆಗುವ ಪರಿಣಾಮ, ಬೆಲೆ ಏರಿಳಿತ, ಹೆಚ್ಚುವ ವೆಚ್ಚಗಳು ಮತ್ತು ಸಾಮಾಜಿಕ ಭದ್ರತೆಯ ಸವಾಲುಗಳನ್ನು ಈ ಮಸೂದೆ ಪರಿಹರಿಸುತ್ತದೆ.

  1. ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ಮಸೂದೆ, 2024

ಭಾರತದ ಹೂವಿನ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಈ ಮಸೂದೆ ನೆರವಾಗುತ್ತದೆ. ಹೆಚ್ಚಿನ ಮೌಲ್ಯದ ಹೂವು ಉತ್ಪಾದನೆ ಮತ್ತು ರಫ್ತು ಹೆಚ್ಚಿಸಿ ದೇಶವನ್ನು ಹೂ ಮಾರುಕಟ್ಟೆಯ ಜಾಗತಿಕ ಕೇಂದ್ರವಾಗಿ ಮಾಡಲು ಇದು ಉತ್ತೇಜನ ನೀಡುತ್ತದೆ.

ಪ್ರಮುಖ ಅಂಶಗಳು

ರಾಷ್ಟ್ರೀಯ ಪುಷ್ಪಕೃಷಿ ಮಂಡಳಿಯ ರಚನೆ
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಪ್ರಧಾನ ಕಚೇರಿ ಸ್ಥಾಪನೆ, ದೇಶದ ವಿವಿಧೆಡೆ ಪ್ರಾದೇಶಿಕ ಕಚೇರಿಗಳು
ವೈಜ್ಞಾನಿಕ ಕೃಷಿಗೆ ಒತ್ತು, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅಭಿವೃದ್ಧಿ
ರಫ್ತು ಪ್ರಮಾಣೀಕರಣಕ್‌ಕೆ ಸಹಾಯ, ಸಂಶೋಧನೆ ಮತ್ತು ಬೆಲೆ ಶಿಫಾರಸು
ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ನಿಧಿಯ ರಚನೆ.

ಅಂದಾಜು ವಾರ್ಷಿಕ ವೆಚ್ಚ; ₹1,500 ಕೋಟಿ, ಒಂದು ಬಾರಿ ವೆಚ್ಚ: ₹50 ಕೋಟಿ
ಭಾರತವು ಈಗಾಗಲೇ ₹717.83 ಕೋಟಿ ಮೌಲ್ಯದ ಸುಮಾರು 19,677 ಮೆಟ್ರಿಕ್ ಟನ್ ಪುಷ್ಪ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಈ ಮಸೂದೆಯು ಉತ್ಪಾದನಾ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಕುರಿತು ಮಾತನಾಡಿದ ಸಂಸದ ಡಾ.ಕೆ.ಸುಧಾಕರ್‌, “ನಮ್ಮ ಹೈನುಗಾರರು ಮತ್ತು ಹೂವು ಬೆಳೆಗಾರರು ಗ್ರಾಮೀಣ ಭಾರತದ ಬೆನ್ನೆಲುಬಾಗಿದ್ದಾರೆ. ಈ ಮಸೂದೆಗಳು ಅವರ ಆದಾಯವನ್ನು ಭದ್ರಪಡಿಸಿ, ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಹೊಸ ಆರ್ಥಿಕ ಅವಕಾಶಗಳನ್ನು ನೀಡುತ್ತದೆ. ಸರಿಯಾದ ಸಾಂಸ್ಥಿಕ ಚೌಕಟ್ಟು ನೀಡುವುದರ ಮೂಲಕ, ಭಾರತವು ಪುಷ್ಪಕೃಷಿಯಲ್ಲಿ ಜಾಗತಿಕ ನಾಯಕನಾಗಬಹುದು. ಹಾಗೆಯೇ ಪ್ರತಿ ಹೈನುಗಾರರು ಸಾಮಾಜಿಕ ಭದ್ರತೆ ಮತ್ತು ಘನತೆಯನ್ನು ಪಡೆಯಬಹುದು” ಎಂದು ತಿಳಿಸಿದ್ದಾರೆ.

ರೈತರ ಕಲ್ಯಾಣ, ಗ್ರಾಮೀಣ ಉದ್ಯಮಶೀಲತೆ ಮತ್ತು ಭಾರತದ ಕೃಷಿ ಪರಿವರ್ತನೆಯ ವಿಚಾರದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರ ಬದ್ಧತೆಯನ್ನು ಈ ಎರಡೂ ಮಸೂದೆಗಳು ಪ್ರತಿಬಿಂಬಿಸುತ್ತವೆ.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!