ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ (Kittur Rani Chennamma Award) ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸುವುದಕ್ಕೆ ಇರುವ ಷರತ್ತು ಹಾಗೂ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಡಿಸೆಂಬರ್ 20 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ, 2ನೇ ಮಹಡಿ,
ಕೊಠಡಿ ಸಂಖ್ಯೆ:206, ಜಿಲ್ಲಾಡಳಿತ ಭವನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಥವಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ದೂ.ಸಂಖ್ಯೆ: 080-29787445.
ದೇವನಹಳ್ಳಿ ತಾಲ್ಲೂಕು ದೂ.ಸಂಖ್ಯೆ: 080-27682268, ದೊಡ್ಡಬಳ್ಳಾಪುರ ದೂ.ಸಂಖ್ಯೆ: 080-27625228, ಹೊಸಕೋಟೆ ದೂ.ಸಂಖ್ಯೆ: 080-27931493, ನೆಲಮಂಗಲ ದೂ.ಸಂಖ್ಯೆ: 080-27722177 ಗೆ ಸಂಪರ್ಕಿಸಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.