ದೊಡ್ಡಬಳ್ಳಾಪುರದಲ್ಲಿ SDPI ವತಿಯಿಂದ ನಶಾಮುಕ್ತ ಅಭಿಯಾನ

ದೊಡ್ಡಬಳ್ಳಾಪುರ: ಸಮಾಜದಲ್ಲಿ ಹೆಚ್ಚುತ್ತಿರುವ ನಶೆ, ಮದ್ಯಪಾನ, ಮಾದಕ ವ್ಯಸನ ಮತ್ತು ಧೂಮಪಾನದಂತಹ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದೊಡ್ಡಬಳ್ಳಾಪುರ ವತಿಯಿಂದ “ನಶಾಮುಕ್ತ ಅಭಿಯಾನ” ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಯುವಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ ನೈತಿಕ ಹಾಗೂ ಶಾರೀರಿಕ ಸದೃಢತೆಯ ಸಮಾಜ ನಿರ್ಮಾಣವೇ ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಸ್ಟೇಷನ್‌ನ ಎಎಸ್‌ಐ ನಾರಾಯಣಸ್ವಾಮಿ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಯುವಕರು ಸುಲಭವಾಗಿ ನಶೆಗೆ ದಾಸರಾಗುತ್ತಿದ್ದಾರೆ. ಪೋಷಕರು ಮತ್ತು ಸಮಾಜವು ಅವರ ಮೇಲೆ ನಿಗಾ ಇಟ್ಟು ಸರಿಯಾದ ಮಾರ್ಗದರ್ಶನ ನೀಡುವುದು ಅತ್ಯಂತ ಅಗತ್ಯ” ಎಂದರು.

ಪ್ರೊಫೆಸರ್ ಇಕ್ಬಾಲ್ ಮಾತನಾಡಿ, ಮಕ್ಕಳಲ್ಲಿ ವ್ಯಸನದ ಅಭ್ಯಾಸ ಹೇಗೆ ಆರಂಭವಾಗುತ್ತದೆ ಹಾಗೂ ಅದನ್ನು ತಡೆಗಟ್ಟಲು ಶಿಕ್ಷಣ ಸಂಸ್ಥೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.

ರೈತ ಮುಖಂಡ ರಮೇಶ್ ಸಂಕ್ರಾಂತಿ ಮಾತನಾಡಿ, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಅವರ ಕಾಲದಲ್ಲೇ ನಶೆ ಸೇವನೆಯನ್ನು ನಿಷೇಧಿಸಲಾಗಿತ್ತು ಎಂದು ಉಲ್ಲೇಖಿಸಿ, ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳ ಜೀವನಶೈಲಿಯಲ್ಲಿ ನಡೆಯುತ್ತಿರುವ ಬದಲಾವಣೆಗಳನ್ನು ಕುರಿತು ಚಿಂತನೆ ವ್ಯಕ್ತಪಡಿಸಿದರು.

SDPI ದೊಡ್ಡಬಳ್ಳಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ನೂರ್ ಅಹಮದ್ ಮಾತನಾಡಿ: “ಯಾವುದೇ ಧರ್ಮದಲ್ಲೂ ನಶೆ ಸೇವಿಸುವುದು ನಿಷೇಧಿತವಾಗಿದೆ. ವ್ಯಸನವು ವ್ಯಕ್ತಿಯ ವಿಚಾರಶಕ್ತಿ, ಆರೋಗ್ಯ ಮತ್ತು ಧಾರ್ಮಿಕ ಜೀವನಕ್ಕೆ ಗಂಭೀರ ಆಘಾತ ಉಂಟುಮಾಡುತ್ತದೆ ಎಂದರು.”

ಡಾ. ವೆಂಕಟೇಶ್ ಪ್ರಸಾದ್ ಮಾತನಾಡಿ, ನಶೆ ಸೇವನೆಯ ಪರಿಣಾಮವಾಗಿ ಉಂಟಾಗುವ ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

SDPI ಜಿಲ್ಲಾ ನಾಯಕ ಅಯಾಜ್ ಅಹಮದ್ ಅವರು ನಶೆಯಿಂದ ಜೀವನ ನಾಶವಾಗಿದೆಯೆಂಬ ಯುವಕನ ಒಂದು ನಿದರ್ಶನವನ್ನು ವಿವರಿಸಿ, ಪೋಷಕರು ಹಾಗೂ ಸಮಾಜ ಹೆಚ್ಚು ಜಾಗೃತರಾಗಿರಬೇಕೆಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾನ್ ಅವರು ಮಕ್ಕಳ ಸುರಕ್ಷತೆ ಹಾಗೂ ವ್ಯಸನ ತಡೆಯಲು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತಂತೆ ಸ್ಪೂರ್ತಿದಾಯಕ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ SDPI ಜಿಲ್ಲಾ ಸದಸ್ಯ ಸೈಯದ್ ಬಾಬಾ, ದೊಡ್ಡಬಳ್ಳಾಪುರ ಕಾರ್ಯದರ್ಶಿ ಇಲಿಯಾಜ್ ಅಹಮದ್ ಮತ್ತಿತರರಿದ್ದರು.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!