545 PSI posts filled in three months: Dr. G. Parameshwar

ಮೂರು ತಿಂಗಳಿನಲ್ಲಿ 545 ಪಿ.ಎಸ್.ಐ. ಹುದ್ದೆಗಳ ಭರ್ತಿ: ಡಾ. ಜಿ. ಪರಮೇಶ್ವರ್

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‍ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G. Parameshwar) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.

ಮೂಡಬಿದ್ರೆ, ಮುಲ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಒದಗಿಸಿಕೊಡುವ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಉಮಾನಾಥ್ ಅವರು ಪ್ರಶ್ನೆ ಸಲ್ಲಿಸಿದ್ದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿ, ಕಳೆದ ಐದು ವರ್ಷಗಳಿಂದಲೂ ಪಿಎಸ್‍ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣವನ್ನು ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್‍ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು.

ಪೊಲೀಸ್ ಕಾನ್ಸ್‍ಟೇಬಲ್‍ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.

ಕರಾವಳಿ ಮುಂತಾದೆಡೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯ ಪಡೆಯನ್ನು ನೇಮಿಸಿದ್ದೇವೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಾವು ಜಾರಿ ಮಾಡಿದ್ದು, 50 ಮನೆಗೆ ಒಂದು ಕ್ಲಸ್ಟರ್‍ನಂತೆ ಮಾಡಿ, ಪೊಲೀಸ್ ಕಾನ್ಸ್‍ಟೇಬಲ್ ಅವರು ಮನೆ ಮನೆಗೆ ಭೇಟಿ ನೀಡಿ, ಆಯಾ ಮನೆಗಳಲ್ಲಿನ ಕುಟುಂಬಗಳಿಂದ ಸಮಸ್ಯೆಗಳ ಬಗ್ಗೆ ನಿಗದಿತ ಪ್ರಶ್ನೆಗಳನ್ನು ಕೇಳಿ ವಿವರ ಪಡೆದು, ಕ್ರಮ ವಹಿಸಿದ್ದು, ಇದು ಜನರಿಂದಲೂ ಪ್ರಶಂಸೆಗೆ ಒಳಗಾಗಿದೆ.

ಇದರ ಜೊತೆಗೆ ಮಹಿಳೆಯರ ಸುರಕ್ಷತೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಕ್ಕ-ಪಡೆ ರಚಿಸಲಾಗುತ್ತಿದ್ದು, ಇದೂ ಕೂಡ ಮೆಚ್ಚುಗೆ ಪಡೆದುಕೊಂಡಿದೆ.

ರಾಜ್ಯದಲ್ಲಿ ಇದರಿಂದ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿಶೇಷವಾಗಿ ಕರಾವಳಿ ಪ್ರದೇಶವನ್ನು ಸುರಕ್ಷಿತ ಪ್ರದೇಶವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!