Another BBMP waste plant thorn in Doddaballapura..?

ದೊಡ್ಡಬಳ್ಳಾಪುರಕ್ಕೆ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ..? ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಆತಂಕಕಾರಿ ಮಾಹಿತಿ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ ಮತ್ತೆ ಹೆಚ್ಚುವರಿ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಆರಂಭಕ್ಕೆ ಸ್ಥಳ ನಿಗದಿ ಪಡಿಸಲಾಗಿರುವ ಮಾಹಿತಿ ಇಂದು ತಿಳಿದುಬಂದಿದೆ.

ಬೆಳಗಾವಿ ವಿಧಾನಸಭೆ ಕಲಾಪದ ಪ್ರಶ್ನೋತ್ತರ ಕಲಾಪದ ವೇಳೆ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು. ಹೊಸತನ್ನು ಬೇಕಾದಲ್ಲಿ ಆರಂಭಿಸಿ, ಆದರೆ‌ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ ಮಾಡಬೇಡಿ ಎಂದು ಶಾಸಕ ಧೀರಜ್‌ ಮುನಿರಾಜು ಅವರ ಮನವಿಗೆ ಉತ್ತರಿಸಿದ ಡಿಸಿಎಂ ಅವರು ಉತ್ತರ ನೀಡಿದರು.

“ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂಡ್ಲಹಳ್ಳಿಯಲ್ಲಿ ಒಟ್ಟು 134.10 ಎಕರೆಯಲ್ಲಿ ಮತ್ತೆ ಟೆರ್ರಾಫಾರ್ಮ ಘಟಕವನ್ನು ಮತ್ತೆ ಆರಂಭಿಸುವುದು ಹಾಗೂ ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಗೊಲ್ಲಹಳ್ಳಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ” ಎಂದು ಹೇಳಿದ್ದಾರೆ.

ಆ ಮೂಲಕ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ ದೊಡ್ಡಬಳ್ಳಾಪುರ ಜನತೆಗೆ ಎದುರಾಗಿದೆ.

ಕಸ ವಿಲೇವಾರಿಯಿಂದ ತೊಂದರೆಯಿಲ್ಲ; ರೈತರ ಮನವೊಲಿಸಿ

ಕಸ ವಿಲೇವಾರಿ ಘಟಕ ಮತ್ತೆ ತೆರೆದರೆ ಜನರ ವಿರೋಧಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಧೀರಜ್‌ ಮುನಿರಾಜು ಅವರು ಹೇಳಿದಾಗ, ಈಗ ತಂತ್ರಜ್ಞಾನ ಮುಂದುವರೆದಿದೆ. ಜನರಿಗೆ ಮನವರಿಕೆ ಮಾಡಿ ನಾನು ಬರುತ್ತೇನೆ. ಈ ಘಟಕಗಳನ್ನು ನಗರದ ನಾಲ್ಕೈದು ಕಡೆ ಮಾಡುತ್ತೇವೆ.

ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಇದೇ ರೀತಿಯ ಘಟಕವನ್ನು ನಾನು ಕನಕಪುರದಲ್ಲಿಯೂ ತೆರೆಯಲು ಹೊರಟಿದ್ದೇನೆ. ಬಿಡದಿಯಲ್ಲಿಯೂ ಮಾಡುತ್ತಿದ್ದೇವೆ, ನಗರದ ಒಳಭಾಗದಲ್ಲಿ, ದಾಸರಹಳ್ಳಿ, ರಾಮಲಿಂಗಾರೆಡ್ಡಿ ಅವರ ಕ್ಷೇತ್ರದಲ್ಲಿಯೂ ಸಣ್ಣ ಪ್ರಮಾಣದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ

ಬೆಂಗಳೂರಿನ ಸುತ್ತಲಿನ ಪ್ರದೇಶದ ಕಸ ಸೇರಿ 2,500 ಟನ್‌ ಸೇರಿ ನಗರದಲ್ಲಿ 8 ಸಾವಿರ ಟನ್‌ ಕಸ ಉತ್ಪಾದನೆಯಾಗುತ್ತದೆ ಇದನ್ನು ಎಲ್ಲಿ ಹಾಕುವುದು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಮಂಗಳೂರಿನಲ್ಲಿ ರೇಷ್ಮೆ ಹುಳ ಮಾದರಿಯ ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿಕೊಂಡು ಕಸವನ್ನು ಗೊಬ್ಬರ ಮಾಡಲಾಗಿದೆ.

ಇದು ಕಸವನ್ನು ತಿಂದು ಗೊಬ್ಬರ ಮಾಡುತ್ತದೆ. ಈ ಪ್ರಯೋಗವನ್ನು ಬೆಂಗಳೂರಿನಲ್ಲೂ ಪ್ರಯೋಗಿಸಲಾಗಿವುದು. ಇದರ ಬಗ್ಗೆ ಪ್ರಧಾನಿ ಮೋದಿಯವರು ಸಹ ಎಕ್ಸ್‌ ಮಾಡಿದ್ದರು ಎಂದರು.

ಕಸದ ಮಾಫಿಯಾ ನಿಯಂತ್ರಣಕ್ಕೆ ಕಾನೂನಿನಲ್ಲಿರುವ ಅವಕಾಶಗಳನ್ನು ನೋಡಲಾಗುವುದು

ಕಸದ ಮಾಫಿಯಾವನ್ನು ಬಗ್ಗುಬಡಿಯಲು ಹೊಸ ಕಾಯ್ದೆ ತನ್ನಿ ವಿರೋಧ ಪಕ್ಷವು ಬೆಂಬಲ ನೀಡುತ್ತದೆ ಎಂದು ಅಶೋಕ್‌ ಅವರು ಹೇಳಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, ಕಸದ ಮಾಫಿಯಾ ಮಟ್ಟ ಹಾಕಲು ಕಾನೂನಿನಲ್ಲಿ ಏನೆಲ್ಲಾ ಅವಕಾಶವಿದೆ ಎಂಬುದನ್ನು ನೋಡುತ್ತೇನೆ. ಇದರ ಬಗ್ಗೆ ಕ್ರಮ ತಗೆದುಕೊಳ್ಳಲಾಗುವುದು.

ಬಿಜೆಪಿ ಸಮಯದಲ್ಲಿ 89 ಪ್ಯಾಕೇಜ್‌ ಗಳನ್ನು ಕಸ ವಿಲೇವಾರಿಗೆ ತರಲಾಗಿತ್ತು. ಇದನ್ನು ಜಾರಿಗೆ ತರಲು ಆಗಲೇ ಇಲ್ಲ. ನ್ಯಾಯಾಲಯಕ್ಕೆ ತೆರಳಿದ್ದರು. ಈಗ ಏನೇನೋ ಮಾಡಿ 33 ಪ್ಯಾಕೇಜ್‌ ಗಳನ್ನು ತರಲಾಗಿದೆ ಎಂದರು.

ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು

“ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.

“ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 26 ಎಕರೆ ಪ್ರದೇಶದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲಾಗಿದೆ. ನಗರದ ನಾಲ್ಕು ಭಾಗದಲ್ಲೂ ವೈಜ್ಞಾನಿಕ ಕಸ ವಿಲೇವಾರಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿರುವೆ. ಕಸದಿಂದ ಗ್ಯಾಸ್‌, ಬಯೋ ಗ್ಯಾಸ್‌ ಉತ್ಪಾದನೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇವೆ” ಎಂದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!