Bashettihalli town panchayat election: Congress power show..!

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಶಕ್ತಿ ಪ್ರದರ್ಶನ..!

ದೊಡ್ಡಬಳ್ಳಾಪುರ: ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli town panchayat election) ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರದಂದು ಒಂದೇ ದಿನ 47 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 82 ನಾಮಪತ್ರಗಳು ಸಲ್ಲಿಕೆಯಾಗಿವೆ.

19 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಂತಿಮವಾಗಿ ಬಿಜೆಪಿಯಿಂದ 24, ಕಾಂಗ್ರೆಸ್‌ನಿಂದ19, ಜೆಡಿಎಸ್‌ನಿಂದ 14 ಹಾಗೂ ಪಕ್ಷೇತರರಾಗಿ 25ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಒಂದೇ ದಿನ 19 ವಾರ್ಡ್ಗಳಿಗೂ ನಾಮಪತ್ರಗಳನ್ನು ಸಲ್ಲಿಸಿದ್ದು ವಿಶೇಷವಾಗಿತ್ತು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ್ದರಿಂದ ಚುನಾವಣಾಧಿಕಾರಿಗಳ ಕಚೇರಿಯ ಮುಂದೆ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಬೆಂಬಲಿಗರ ದಂಡೇ ನೆರೆದಿತ್ತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡಿ.10 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿಸೆಂಬರ್ 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.

ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ: ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರ ಮೆರವಣಿಗೆ

ಬಾಶೆಟ್ಟಿಹಳ್ಳಿಯ ಬ್ಯಾಂಕ್ ವೃತ್ತದ ಬಳಿಯಿಂದ ಚುನಾವಣಾಧಿಕಾರಿಗಳ ಕಚೇರಿಯವರೆಗೆ ಕಾಂಗ್ರೆಸ್ ಪಕ್ಷದ 19 ಅಭ್ಯರ್ಥಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಮೆರವಣಿಗೆಯಲ್ಲಿ ತೆರಳಿ, ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರಗಳನ್ನು ಸಲ್ಲಿಸಿದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಶಕ್ತಿ ಪ್ರದರ್ಶನ..!

ಪಕ್ಷದ ಬಾವುಟಗಳನ್ನು ಹಿಡಿದ ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗಿ, ಮೆರವಣಿಗೆಯಲ್ಲಿ ತೆರಳಿದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಶಕ್ತಿ ಪ್ರದರ್ಶನ..!

ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ರಾಜ್ಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿದ್ದು,ನೂತನವಾಗಿ ಅಸ್ತಿತ್ವಕ್ಕೆ ಬಂದಿರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ, ಬಿ.ಜಿ.ಹೇಮಂತ ರಾಜು, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಟಿಎಪಿಎಂಸಿಎಸ್ ಸದಸ್ಯ ವಿಶ್ವಾಸ್ ಹನುಮಂತೇಗೌಡ, ಮುಖಂಡರಾದ ಕೆ.ಎಂ.ಕೃಷ್ಣಮೂರ್ತಿ, ಆದಿತ್ಯ ನಾಗೇಶ್, ವಿಶ್ವನಾಥ್, ಎಳ್ಳುಪುರ ರಾಮಾಂಜಿನಪ್ಪ, ಆಂಜಿನ ಮೂರ್ತಿ, ಜವಾಜಿ ರಾಜೇಶ್ ಮೊದಲಾದವರು ಹಾಜರಿದ್ದರು.

ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ: ನಾಲ್ವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ನ ಚುನಾವಣೆಗೆ ಈವರೆಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳವಾರ ಪಕ್ಷೇತರರಾಗಿ ರಘುನಂದನ್ ನಾಮಪತ್ರ ಸಲ್ಲಿಸಿದರು. ಈ ಮೊದಲು ಬಿಜೆಪಿಯಿಂದ ಜಿ.ಜೆ.ನವೀನ್, ಕಾಂಗ್ರೆಸ್ ನಿಂದ ಕೆ.ಜಿ.ದಿನೇಶ ಹಾಗೂ ಪಕ್ಷೇತರರಾಗಿ ಹೇಮಂತ್ ಕುಮಾರ್.ಜಿ.ಆರ್
ನಾಮಪತ್ರ ಸಲ್ಲಿಸಿದ್ದರು.

ಒಟ್ಟು ನಾಲ್ವರು ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!