Working women to get one day of paid leave per month..!

ದೇವನಹಳ್ಳಿ ಬಳಿ ಶಾಶ್ವತ ವಿಶೇಷ ಕೃಷಿ ವಲಯ: ಅಪಪ್ರಚಾರ, ತಪ್ಪು ಕಲ್ಪನೆ ಬೇಡ – ಸರಕಾರದ ಸ್ಪಷ್ಟನೆ

ಬೆಂಗಳೂರು: ದೇವನಹಳ್ಳಿ (Devanahalli) ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು `ಶಾಶ್ವತ ವಿಶೇಷ ಕೃಷಿ ವಲಯ’ವೆಂದು ಸರಕಾರ ಘೋಷಿಸಿದೆ. ಇದರಲ್ಲಿ ರೈತರು ತಮ್ಮ ಜಮೀನನ್ನು ಮಾರಾಟ ಮಾಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಅದಕ್ಕೆ ಮುಕ್ತ ಅವಕಾಶವಿದೆ. ಈ ಕುರಿತು ರೈತರು ಅಪಪ್ರಚಾರ, ಗೊಂದಲ ಮತ್ತು ತಪ್ಪು ಕಲ್ಪನೆಗಳಿಗೆ ಕಿವಿಗೊಡಬಾರದು ಎಂದು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಹೇಳಿದ್ದಾರೆ.

ಈ ಸಂಬಂಧವಾಗಿ ಕೆಲವು ಕಡೆಗಳಲ್ಲಿ, ರೈತರ ಜಮೀನು ಮಾರಾಟದ ಹಕ್ಕನ್ನೇ ಕಿತ್ತುಕೊಳ್ಳಲಾಗಿದೆ ಎನ್ನುವಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, `ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು, ಕೃಷಿಯನ್ನು ಮುಂದುವರಿಸಿಕೊಂಡು ಹೋಗುವ ಅಪೇಕ್ಷೆ ವ್ಯಕ್ತಪಡಿಸಿದ್ದರು.

ಸರಕಾರವು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಹೀಗೆ ಮಾಡುವುದರಿಂದ ರೈತರಿಗೆ ತೊಂದರೆ ಆಗುತ್ತದೆ ಎಂಬುದು ಸುಳ್ಳು. ಸರ್ಕಾರದ ಉದ್ದೇಶ ಈ ಕೃಷಿ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಮಾಡುವುದನ್ನು ಹಾಗೂ ರೈತರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಮಾಡುವವರಿಗೆ ಕಡಿವಾಣ ಹಾಕುವುದೇ ಆಗಿದೆ. ತಮ್ಮ ಜಮೀನನ್ನು ಮಾರಾಟ ಮಾಡುವ ರೈತರ ಸ್ವಾತಂತ್ರ್ಯ ಮತ್ತು ಹಕ್ಕನ್ನು ಕಸಿದುಕೊಂಡಿಲ್ಲ’ ಎಂದು ಅವರು ವಿವರಿಸಿದ್ದಾರೆ.

ದೇವನಹಳ್ಳಿ ಸಮೀಪ ಏರೋಸ್ಪೇಸ್ ಪಾರ್ಕ್ ಸ್ಥಾಪಿಸಲು ಸರಕಾರಕ್ಕೆ ಈ ಭೂಮಿಯ ಅಗತ್ಯ ಹೆಚ್ಚು ಇತ್ತು. ಆದರೂ ರೈತರ ಬೇಡಿಕೆಯನ್ನು ಪರಿಗಣಿಸಿ, ಇಲ್ಲಿ ಕೃಷಿ ಅಭಿವೃದ್ಧಿಗೆ ತೀರ್ಮಾನಿಸಲಾಗಿದೆ.

ಇದನ್ನೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸ್ವಾಧೀನಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಇಷ್ಟಾದರೂ, ರೈತರು ತಾವಾಗಿಯೇ ಸರಕಾರಕ್ಕೆ ಜಮೀನು ಕೊಡಲು ಮುಂದೆ ಬಂದರೆ ಅದಕ್ಕೂ ಅವಕಾಶವಿದೆ.

ಇಂತಹ ಜಮೀನುಗಳಿಗೆ ಭೂದರ ನಿರ್ಧಾರ ಸಮಿತಿಯ ತೀರ್ಮಾನದಂತೆ ಪರಿಹಾರ ಕೊಡಲಾಗುವುದು. ಆದರೆ, ಸರಕಾರಕ್ಕೆ ಮಾತ್ರವೇ ಜಮೀನು ಮಾರಾಟ ಮಾಡಬೇಕು ಎಂಬ ಯಾವ ನಿರ್ಬಂಧವೂ ಇಲ್ಲ ಎಂದು ಅವರು ಹೇಳಿದ್ದಾರೆ.

ಈ 13 ಗ್ರಾಮಗಳ ಜಮೀನಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿನೋಟಿಫೈ ಮಾಡಿ, ಕೃಷಿ ವಲಯವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಇದನ್ನು ‘ಶಾಶ್ವತ ವಿಶೇಷ ಕೃಷಿ ವಲಯ’ವನ್ನಾಗಿ ಮಾಡಿ, ರೈತರಿಗೆ ಹೆಚ್ಚಿನ ಅನುಕೂಲ ಮಾಡಲಾಗಿದೆ. ಜೊತೆಗೆ, ಕೃಷಿ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಮೇಲ್ಕಂಡ ಗ್ರಾಮಗಳ ಜಮೀನುಗಳು ಈಗಾಗಲೇ ಹಸಿರು ವಲಯದಲ್ಲಿವೆ. ಇಲ್ಲಿ ಕೈಗಾರಿಕೆ ಬೆಳವಣಿಗೆಗೆ ಸಮಾನಾಂತರವಾಗಿ ಕೃಷಿ ಬೆಳವಣಿಗೆಯೂ ಆಗಬೇಕು ಎನ್ನುವುದು ಸರಕಾರದ ಬಯಕೆಯಾಗಿದೆ.

ಹೀಗಾಗಿಯೇ ಇದನ್ನು ಶಾಶ್ವತ ವಿಶೇಷ ಕೃಷಿ ವಲಯವನ್ನಾಗಿ ಮಾಡಲಾಗಿದೆ. ಇದರಿಂದಾಗಿ ಇಲ್ಲಿ ಕೃಷಿ ಕ್ಷೇತ್ರಕ್ಕೂ ಬಂಡವಾಳ ಹೂಡಿಕೆ ಹರಿದು ಬರಲಿದೆ ಎಂದು ವಿವರಿಸಿದ್ದಾರೆ.

ಶಾಶ್ವತ ವಿಶೇಷ ಕೃಷಿ ವಲಯದಲ್ಲಿ ಹೆಚ್ಚು ಇಳುವರಿ ಕೊಡುವ ಬೀಜಗಳು, ಶೀತಲಗೃಹಗಳು, ಸಾವಯವ ಕೃಷಿ, ಆಧುನಿಕ ಕೃಷಿ ತಂತ್ರಜ್ಞಾನ, ಹೈಡ್ರೋಪೋನಿಕ್ಸ್, ಮಣ್ಣು ಮತ್ತು ನೀರಿನ ಉತ್ತಮ ನಿರ್ವಹಣೆ, ನೇರ ಮಾರುಕಟ್ಟೆ ಸೌಲಭ್ಯ, ದಲ್ಲಾಳಿಗಳ ಕಾಟದಿಂದ ಮುಕ್ತಿ, ಕೃಷಿ ಉತ್ಪನ್ನಗಳಿಗೆ ಒಳ್ಳೆಯ ಬೆಲೆ, ಇ-ಟ್ರೇಡಿಂಗ್ ಮತ್ತು ಡಿಜಿಟಲ್ ಮಾರುಕಟ್ಟೆ, ರೈತರು ಮತ್ತು ಕೃಷಿ ನವೋದ್ಯಮಗಳಿಗೆ ವಿಶೇಷ ತೆರಿಗೆ ರಿಯಾಯಿತಿ/ವಿನಾಯಿತಿ, ಕೃಷಿ-ವಾಣಿಜ್ಯ ಯೋಜನೆಗಳಿಗೆ ತ್ವರಿತ ಅನುಮೋದನೆ, ಕೃಷಿ ಆಧರಿತ ಉದ್ಯಮಗಳ ಬೆಳವಣಿಗೆ, ಕೃಷಿ ಉತ್ಪನ್ನಗಳ ರಫ್ತು ವಹಿವಾಟು, ಉಗ್ರಾಣಗಳ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗ ಇವೆಲ್ಲವೂ ಸಾಧ್ಯವಾಗಲಿವೆ ಎಂದು ಅವರು ಮಾಹಿತಿ ಕೊಟ್ಟಿದ್ದಾರೆ.

ಇದಲ್ಲದೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಆಧುನಿಕ ಸ್ವರೂಪದ ತರಬೇತಿ, ಪ್ರಯೋಗಾಲಯಗಳು, ಗುಣಮಟ್ಟ ಪರೀಕ್ಷೆ ಸೌಲಭ್ಯ, ಆಹಾರ ಸಂಸ್ಕರಣಾ ಘಟಕಗಳು, ಕೃಷಿ ಸಾಲ ಮತ್ತು ಬ್ಯಾಂಕಿಂಗ್ ಸೇವೆಗಳು, ಸಂಶೋಧನೆ ಮತ್ತು ಸಹಭಾಗಿತ್ವ ಮುಂತಾದ ಅನುಕೂಲಗಳನ್ನು ಕೂಡ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ತಮಿಳುನಾಡು, ಛತ್ತೀಸಗಢ, ಉತ್ತರಾಖಂಡ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಈ ರೀತಿಯ ವಿಶೇಷ ಕೃಷಿ ವಲಯಗಳಿವೆ. ಹಾಗೆಯೇ ವಿದೇಶಗಳಲ್ಲಿಯೂ ಇರುವುದನ್ನು ಗಮನಿಸಿದ್ದೇವೆ.

ಅಂತಹ ಕಡೆ ರೈತರಿಗೆ ಏನೇನು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎನ್ನುವುದನ್ನು ಅಧ್ಯಯನ ಮಾಡಲು ಒಂದು ಸಮಿತಿಯನ್ನೂ ಸದ್ಯದಲ್ಲೇ ರಚಿಸಲಾಗುವುದು. ಅಂತಹ ಅನುಕೂಲಗಳನ್ನು ಇಲ್ಲೂ ಒದಗಿಸಲಾಗುವುದು ಎಂದು ಅವರು ಹೇಳಿದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!