World's Second Largest Khadi Tricolor Flag Unveiled: Cmsiddaramaiah

ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲ್ಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ರಾಷ್ಟ್ರಭಕ್ತಿ ಸಾರುವ ಸಂದೇಶ

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು.

ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು

ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.

ನಾವೆಲ್ಲರೂ ಜಾತ್ಯತೀತರಾಗಬೇಕು

ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಜಾ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಎಷ್ಟರಮಟ್ಟಿಗೆ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು

ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.

ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ರಾಜಕೀಯ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ

[ccc_my_favorite_select_button post_id="117285"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]