23 Rs. 5 lakh grant released for each Kambalotsava: H.K. Patil

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

ಬೆಳಗಾವಿ ಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.

2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ.

2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ರೂ.5 ಲಕ್ಷದಂತೆ ಒಟ್ಟು ರೂ.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ ಅನುದಾನ ಬಿಡುಗಡೆ ಕ್ರಮ ಕೈಗೊಳ್ಳುವ ಆಶ್ವಾಸನೆಯನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಸಚಿವರ ನಿರ್ಧಾರವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡದ ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಲೈಟ್ ಹೌಸ್ ಬೀಚ್ ಅಭಿವೃದ್ಧಿ

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್ ಹೌಸ್ ಬೀಚ್ ಅಭಿವೃದ್ಧಿಗೆ ಸರ್ಕಾರ ಮಂಜೂರಾತಿ ನೀಡಿದೆ. ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಸರ್ಕಾರ ಇಂಬು ನೀಡುತ್ತಿದೆ. ಕಾಪು ವಿಧಾನಸಭಾ ಕ್ಷೇತ್ರ ಪಡುಬಿದ್ರಿ ನಡಿಘಟ್ಟ ಬೀಚ್ ರಸ್ತೆಯ ಎಂಡ್ ಪಾಯಿಂಟ್‌ನಲ್ಲಿ ಸಂಪರ್ಕ ಸೇತುವೆ ಹಾಗೂ ಕೂಡು ರಸ್ತೆ ನಿಮಾರ್ಣ ಕಾಮಗಾರಿಯನ್ನು ರೂ.75 ಲಕ್ಷದಲ್ಲಿ ಪೂರ್ಣಗೊಳಿಸಲಾಗಿದೆ. 2025-26ನೇ ಸಾಲಿಗೆ ಆಯವ್ಯಯದಲ್ಲಿ ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ.86 ಕೋಟಿಗಳನ್ನು ಒದಗಿಸಲಾಗಿದೆ. ಇದರಲ್ಲಿ ಪ್ರವಾಸಿ ತಾಣಗಳ ಆದ್ಯತೆಗೆ ಅನುಗುಣವಾಗಿ ಪರಿಶೀಲಿಸಿ ರೂ.14 ಕೋಟಿ ವೆಚ್ಚದ ನೂತನ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಲ್ಲಿ ಕಾಪು ತಾಲ್ಲೂಕಿನ ಕಾಪು ಬೀಚ್, ಲೈಟ್ ಹೌಸ್, ಪಡುಬಿದ್ರೆ ಎಂಡ್ ಪಾಯಿಂಟ್ ಬ್ಲೂ ಫ್ಲಾಗ್ ಬೀಚ್, ಕಾಪು ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷಿö್ಮÃ ದೇವಸ್ಥಾನ, ಉಡುಪಿ ಕುಂಜರುಗಿರಿಯ ಶ್ರೀ ದುರ್ಗಾ ದೇವಿ ದೇವಸ್ಥಾನ ಹಾಗೂ ಮುಟ್ಟು ರಾಕ್ ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಗೊಳಿಸಲು ಗುರುತಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ರೂ.5.75 ಕೋಟಿ ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟದ ಅಭಿವೃದ್ಧಿ

ಪುರಾಣ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟ ಕ್ಷೇತ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ವೀಕ್ಷಣಾ ಗೋಪುರಗಳು, ದಾಸೋಹ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರೂ.5.75 ಕೋಟಿ ವೆಚ್ಚದಲ್ಲಿ ವಿವರವಾದ ಪರಿಕಲ್ಪನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಕೊಳ್ಳೇಗಾಲದ ಶಾಸಕ ಕೃಷ್ಣಮೂರ್ತಿ.ಎ.ಆರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಬಿಳಿಗಿರಿ ರಂಗನಬೆಟ್ಟದ ದೇವಾಲಯದ ಸುತ್ತ ರೂ.1 ಕೋಟಿ ವೆಚ್ಚದಲ್ಲಿ ನೆಲಹಾಸು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ರೂ.1.74 ಕೋಟಿ ವೆಚ್ಚದಲ್ಲಿ ದೇವಾಲಯದ ಬಳಿ ಮೆಟ್ಟಿಲು ಹಾಗೂ ರೈಲಿಂಗ್ಸ್ ನಿರ್ಮಾಣ, ಕಲ್ಯಾಣಿ ರಸ್ತೆ ಮತ್ತು ರಥದ ಬೀದಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ.

ದೇವಸ್ತಾನದ ಪಾದುಕೆಯಿಂದ ರಾಜಗೋಪುರಕ್ಕೆ ಕಾಲಂಗಳೊಂದಿಗೆ ಮೆಟ್ಟಿಲುಗಳ ವಿನ್ಯಾಸ ಮಾಡುವಲ್ಲಿ ದೊಡ್ಡ ಬಂಡೆಗಳು ಕಂಡು ಬಂದ ಕಾರಣ ಕಾಮಗಾರಿ ಮರುವಿನ್ಯಾಸವನ್ನು ಲೋಕೋಪಯೋಗಿ ಇಲಾಖೆಯಿಂದ ಸಿದ್ಧಪಡಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಭರವಸೆ ನೀಡಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!