ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ (Women Development Corporation) ವಿವಿಧ ಯೋಜನೆಗಳಡಿ ಲಭ್ಯವಿರುವ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು 18-55 ವರ್ಷ ದೊಳಗಿನವರಾಗಿರಬೇಕು. ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ಮಾಡುವುದಕ್ಕೆ ಕುಟುಂಬದ ವಾರ್ಷಿಕ ಆದಾಯ ರೂ.1,50,000 ಸಾವಿರಕ್ಕಿಂತ ಕಡಿಮೆಯಿರಬೇಕು.
ಇದರಲ್ಲಿ ಪ.ಜಾತಿ ಮತ್ತು ಪ.ಪಂಗಡದ ಮಹಿಳೆಯರ ವಾರ್ಷಿಕ ಆದಾಯ ರೂ.2 ಲಕ್ಷ ಕ್ಕಿಂತ ಕಡಿಮೆ ಇರುವವರು ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಬ್ಯಾಂಕ್ ನಿಂದ 3 ಲಕ್ಷದವರೆಗೆ ಸಾಲ ಹಾಗೂ ನಿಗಮದಿಂದ ಸಾಮಾನ್ಯ ಮಹಿಳೆಯರಿಗೆ ಶೇ.30% ಹಾಗೂ ಪ.ಜಾತಿ ಮತ್ತು ಪ.ಪಂಗಡದ ಮಹಿಳೆಯರಿಗೆ ಶೇ.50 ರಷ್ಟು ಸಹಾಯಧನ ನೀಡಲಾಗುವುದು.
ಹಾಗೇ ಧನಶ್ರೀ, ಚೇತನಾ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ದಿ ನಿರೀಕ್ಷಕರು, ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2 ನೇ ಮಹಡಿ, ಕೊಠಡಿ ಸಂಖ್ಯೆ:206, ಜಿಲ್ಲಾಡಳಿತ ಭವನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.