Another BBMP waste plant thorn in Doddaballapura..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit) ಆರಂಭ ಮಾಡಲು ಸರ್ಕಾರ ಮುಂದಾಗಿದೆಯೇ ಎಂಬ ಆತಂಕ ಎದುರಾಗಿದೆ.

ಬೆಳಗಾವಿ ವಿಧಾನಸಭೆ ಕಲಾಪದ ಪ್ರಶ್ನೋತ್ತರ ಕಲಾಪದ ವೇಳೆ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು ಎನ್ನುವ ಶಾಸಕ ಧೀರಜ್‌ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು ಈ ಕುರಿತು ಉತ್ತರ ನೀಡಿದರು.

“ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂಡ್ಲಹಳ್ಳಿಯಲ್ಲಿ (ಟೆರಾಫಾರ್ಮ ಜಮೀನು, ಮತ್ತು ಖಾಸಗಿ ಜಮೀನು ಸೇರಿ) ಒಟ್ಟು 134.10 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ” ಎಂದು ಹೇಳಿದ್ದಾರೆ.

ಆ ಮೂಲಕ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ ದೊಡ್ಡಬಳ್ಳಾಪುರ ಜನತೆಗೆ ಎದುರಾಗಿದೆ.

ಜನರ ವಿರೋಧಕ್ಕೆ ಕಾರಣವಾಗುತ್ತದೆ

ಕಸ ವಿಲೇವಾರಿ ಘಟಕ ಮತ್ತೆ ತೆರೆದರೆ ಜನರ ವಿರೋಧಕ್ಕೆ ಕಾರಣವಾಗುತ್ತದೆ. ಈಗಾಗಲೇ ಸಂಘಟನೆಗಳು, ಸ್ಥಳೀಯರು ಹೋರಾಟ ಆರಂಭಿಸಲು ಮುಂದಾಗಿದ್ದಾರೆ. ಅಲ್ಲದೆ ಪರಿಸರ ಮಾಲಿನ್ಯದ ಕುರಿತು ಸರ್ಕಾರ ಪರಿಗಣಿಸಿಲ್ಲ ಎಂದು ಶಾಸಕ ಧೀರಜ್‌ ಮುನಿರಾಜು ಅವರು ಮನವಿ ಮಾಡಿದರು.

ಕಸ ವಿಲೇವಾರಿಯಿಂದ ತೊಂದರೆಯಿಲ್ಲ; ರೈತರ ಮನವೊಲಿಸಿ

ಈಗ ತಂತ್ರಜ್ಞಾನ ಮುಂದುವರೆದಿದೆ. ಜನರಿಗೆ ಮನವರಿಕೆ ಮಾಡಿ ನಾನು ಬರುತ್ತೇನೆ. ಈ ಘಟಕಗಳನ್ನು ನಗರದ ನಾಲ್ಕೈದು ಕಡೆ ಮಾಡುತ್ತೇವೆ.

ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಇದೇ ರೀತಿಯ ಘಟಕವನ್ನು ನಾನು ಕನಕಪುರದಲ್ಲಿಯೂ ತೆರೆಯಲು ಹೊರಟಿದ್ದೇನೆ. ಬಿಡದಿಯಲ್ಲಿಯೂ ಮಾಡುತ್ತಿದ್ದೇವೆ, ನಗರದ ಒಳಭಾಗದಲ್ಲಿ, ದಾಸರಹಳ್ಳಿ, ರಾಮಲಿಂಗಾರೆಡ್ಡಿ ಅವರ ಕ್ಷೇತ್ರದಲ್ಲಿಯೂ ಸಣ್ಣ ಪ್ರಮಾಣದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ

ಬೆಂಗಳೂರಿನ ಸುತ್ತಲಿನ ಪ್ರದೇಶದ ಕಸ ಸೇರಿ 2,500 ಟನ್‌ ಸೇರಿ ನಗರದಲ್ಲಿ 8 ಸಾವಿರ ಟನ್‌ ಕಸ ಉತ್ಪಾದನೆಯಾಗುತ್ತದೆ ಇದನ್ನು ಎಲ್ಲಿ ಹಾಕುವುದು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಮಂಗಳೂರಿನಲ್ಲಿ ರೇಷ್ಮೆ ಹುಳ ಮಾದರಿಯ ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿಕೊಂಡು ಕಸವನ್ನು ಗೊಬ್ಬರ ಮಾಡಲಾಗಿದೆ.

ಇದು ಕಸವನ್ನು ತಿಂದು ಗೊಬ್ಬರ ಮಾಡುತ್ತದೆ. ಈ ಪ್ರಯೋಗವನ್ನು ಬೆಂಗಳೂರಿನಲ್ಲೂ ಪ್ರಯೋಗಿಸಲಾಗಿವುದು. ಇದರ ಬಗ್ಗೆ ಪ್ರಧಾನಿ ಮೋದಿಯವರು ಸಹ ಎಕ್ಸ್‌ ಮಾಡಿದ್ದರು ಎಂದರು.

ಕಸದ ಮಾಫಿಯಾ ನಿಯಂತ್ರಣಕ್ಕೆ ಕಾನೂನಿನಲ್ಲಿರುವ ಅವಕಾಶಗಳನ್ನು ನೋಡಲಾಗುವುದು

ಕಸದ ಮಾಫಿಯಾವನ್ನು ಬಗ್ಗುಬಡಿಯಲು ಹೊಸ ಕಾಯ್ದೆ ತನ್ನಿ ವಿರೋಧ ಪಕ್ಷವು ಬೆಂಬಲ ನೀಡುತ್ತದೆ ಎಂದು ಅಶೋಕ್‌ ಅವರು ಹೇಳಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, ಕಸದ ಮಾಫಿಯಾ ಮಟ್ಟ ಹಾಕಲು ಕಾನೂನಿನಲ್ಲಿ ಏನೆಲ್ಲಾ ಅವಕಾಶವಿದೆ ಎಂಬುದನ್ನು ನೋಡುತ್ತೇನೆ. ಇದರ ಬಗ್ಗೆ ಕ್ರಮ ತಗೆದುಕೊಳ್ಳಲಾಗುವುದು.

ಬಿಜೆಪಿ ಸಮಯದಲ್ಲಿ 89 ಪ್ಯಾಕೇಜ್‌ ಗಳನ್ನು ಕಸ ವಿಲೇವಾರಿಗೆ ತರಲಾಗಿತ್ತು. ಇದನ್ನು ಜಾರಿಗೆ ತರಲು ಆಗಲೇ ಇಲ್ಲ. ನ್ಯಾಯಾಲಯಕ್ಕೆ ತೆರಳಿದ್ದರು. ಈಗ ಏನೇನೋ ಮಾಡಿ 33 ಪ್ಯಾಕೇಜ್‌ ಗಳನ್ನು ತರಲಾಗಿದೆ ಎಂದರು.

ಹೊಸ ಘಟಕ ಮಾಡಿ, ಹಳೆ ಘಟಕ ಬೇಡ

ಬಳಿಕ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ವಯಕ್ತಿಕವಾಗಿ ಭೇಟಿ ಮಾಡಿದಾಗ ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ ನನ್ನ ಮನವಿ ಒಂದೇ ಇದೇ ಸಿದ್ದರಾಮಯ್ಯ ಸರ್ಕಾರದ ಅವರ ಅವಧಿಯಲ್ಲಿ ಮಾಲಿನ್ಯದ ಕಾರಣ, ನಿಯಮ ಉಲ್ಲಂಘನೆ ಮಾಡಿದ ಕಾರಣ ಟೆರಾಫಾರ್ಮ ಮುಚ್ಚಿರುವ ಘಟಕ, ಇದನ್ನು ಮುಚ್ಚಿ 9 ವರ್ಷ ಆಗಿದೆ. ಆದಾಗ್ಯೂ ತ್ಯಾಜ್ಯ ತೆರವು ಮಾಡಿಲ್ಲ.

ಹೊಸ ಘಟಕ ಮಾಡಿ. ಆದರೆ ಟೆರಾಫಾರ್ಮ ಘಟಕ ಮತ್ತೆ ಆರಂಭಕ್ಕೆ ಸಾರ್ವಜನಿಕರ ವಿರೋಧವಿದೆ. ಘಟಕ ಆರಂಭ ಮಾಡಬೇಡಿ ಎಂದರು.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!