Doddaballapur; Open house program for MSV Public School students

ದೊಡ್ಡಬಳ್ಳಾಪುರ; ಎಂಎಸ್‌ವಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ದೊಡ್ಡಬಳ್ಳಾಪುರ: ನಗರದ ಮಹಿಳಾ ಆರಕ್ಷಕ ಠಾಣೆಯ ವತಿಯಿಂದ, ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಎಂ.ಎಸ್.ವಿ. ಪಬ್ಲಿಕ್ ಶಾಲೆಯ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ, ಪೊಲೀಸ್ ಠಾಣೆಯಲ್ಲಿ ಪೊಲೀಸರ ಕಾರ್ಯವೈಖರಿಗಳ ಪರಿಚಯ ಪಡೆದರು.

ಈ ವೇಳೆ ಮಾತನಾಡಿದ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ (M.B. Naveen Kumar) ಅವರು, ಆನ್ ಲೈನ್ ಗೇಮ್, ಪೊಕ್ಸೋ ಕಾಯ್ದೆ, ಸಾಮಾಜಿಕ ಜಾಲತಾಣಗಳ ಸಾಧಕ ಬಾಧಕಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ತೆರೆದ ಮನೆ ಕಾರ್ಯಕ್ರಮ ಅಡಿಯಲ್ಲಿ ಅರಿವು ಮೂಡಿಸಿದರು.

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಜೀತ ಪದ್ಧತಿ, ಶಾಲೆ ಬಿಟ್ಟ, ನಿರ್ಗತಿಕ, ಭಿಕ್ಷೆ, ಚಿಂದಿ ಆಯುವ ಮಕ್ಕಳ ರಕ್ಷಣೆ ಕುರಿತು ಮಾಹಿತಿ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ಯಾವುದೇ ಪರಿಸ್ಥಿತಿಯಲ್ಲಿ ಧೈರ್ಯಗೆಡದೆ ಆರಕ್ಷಕ ಠಾಣೆಯ ಸಹಾಯವನ್ನು ಪಡೆಯಬಹುದು, ಯಾವಾಗಲೂ ಮಕ್ಕಳ ಜೊತೆಯಲ್ಲಿ ನಾವಿರುತ್ತೇವೆ ಎಂಬ ಆಶ್ವಾಸನೆಯನ್ನು ಮೂಡಿಸಿದರು.

ಶಾಲಾ ಕಲಿಕೆಯ ಸಮಯದಲ್ಲಿ ಏಕಾಗ್ರತೆಯನ್ನು ಸಾಧಿಸುವ ಬಗ್ಗೆ ಹಾಗೂ ಸಮಯಪಾಲನೆಯ ಬಗ್ಗೆ ತಿಳಿಸಿಕೊಟ್ಟರು. ಆರೋಗ್ಯಕರ ಜೀವನಶೈಲಿಗೆ ಉತ್ತಮ ಆಹಾರ ಪದ್ಧತಿ ಹಾಗೂ ಕ್ರೀಡೆಯ ಮಹತ್ವದ ಬಗ್ಗೆಯೂ ಸಹ ತಿಳಿಸಿಕೊಟ್ಟರು.

ಮಕ್ಕಳ ಹಕ್ಕುಗಳ ರಕ್ಷಣೆ, ಲೈಂಗಿಕ ದೌರ್ಜನ್ಯ, ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ರಕ್ಷಣೆ, ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆ, ವೈಯರ್‌ಲೆಸ್ ವಾಕಿಟಾಕಿ, ಗನ್, ಬಂದೂಕು, ರೈಫಲ್ ಎಸ್‌ಎಲ್‌ಆರ್ ರೈಫಲ್, ಪರೇಡ್ ಸೇರಿದಂತೆ ಠಾಣೆಯ ಕಾರ್ಯ ವೈಖರಿಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಟೇಕ್ವಾಂಡೋ ದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಎಂಎಸ್‌ವಿ ಶಾಲೆಯ ವಿದ್ಯಾರ್ಥಿನಿ ಹರ್ಷಿತಾರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕೆಂದು ತಿಳಿಸಿ, ಆಕೆಯ ಸಾಧನೆಯನ್ನು ಕೊಂಡಾಡಿದರು.

ಸಬ್ ಇನ್ಸ್ ಪೆಕ್ಟರ್ ಶುಭಾ ಮಾತನಾಡಿ, ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ 1098 ಅಥವಾ 112 ಗೆ ಕರೆ ಮಾಡುವುದು ಹಾಗೂ ಮಹಿಳಾ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ರಾಜಕೀಯ

ಪ್ರಧಾನಿ ಸ್ಥಾನಕ್ಕೆ ಮೋದಿ ಉತ್ತರಾಧಿಕಾರಿ ಯಾರು..?: RSS ಮೋಹನ್ ಭಾಗವತ್ ಹೇಳಿದ್ದು ಇಷ್ಟು

ಪ್ರಧಾನಿ ಸ್ಥಾನಕ್ಕೆ ಮೋದಿ ಉತ್ತರಾಧಿಕಾರಿ ಯಾರು..?: RSS ಮೋಹನ್ ಭಾಗವತ್ ಹೇಳಿದ್ದು ಇಷ್ಟು

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ(Narendra Modi) ಅವರ ಉತ್ತರಾಧಿಕಾರಿಯನ್ನು ಸ್ವಯಂ ಮೋದಿ ಹಾಗೂ ಬಿ.ಜೆ.ಪಿ. ನಿರ್ಧರಿಸುತ್ತದೆ, ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್

[ccc_my_favorite_select_button post_id="117278"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]