New fair price shop approved: Minister K.H. Muniyappa

ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದರು.

ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ.

ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಸಚಿವ ಕೆ. ಹೆಚ್.ಮುನಿಯಪ್ಪ ವಿಧಾನಸಭೆಯಲ್ಲಿ ವಿವರಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!