Student's body found hanging in college hostel..!: Family alleges murder

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಗದಗ: ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student’s body found hanging in college hostel) ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಬೀದರ ಜಿಲ್ಲೆ ಬಾಲ್ಕಿ ತಾಲೂಕಿನ ಧನ್ನೂರ ಎಸ್ ಗ್ರಾಮದ ಈಶ್ವರ ಗಾದಗೆ (21 ವರ್ಷ) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮುಂಡರಗಿ ಪಟ್ಟಣದ SBS ಆಯುರ್ವೇದಿಕ್ ಮಡಿಕಲ್‌ ಕಾಲೇಜ್‌ನಲ್ಲಿ BAMS ಅಂತಿಮ ವರ್ಷದಲ್ಲಿ ಓದುತ್ತಿದ್ದನು ಮತ್ತು ಎಲ್ಲಾ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದನು ಎನ್ನಲಾಗಿದೆ.

ಈ ಘಟನೆ ಸಂಬಂಧ ಕಾಲೇಜ್ ಆಡಳಿತ ಮಂಡಳಿ, ಸಿಬ್ಬಂಧಿ ವಿರುದ್ಧ ಪೋಷಕರು ಆರೋಪ ಮಾಡಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾರೆ ಅಂತ ಆರೋಪ ಮಾಡಿದ್ದಾರೆ ಎಂದಿದ್ದಾರೆ.

ಆರು ತಿಂಗಳ ಹಿಂದೆ ಕಾಲೇಜ್ ಉಪನ್ಯಾಸಕ ಕಿರುಕುಳ ತಾಳದೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದನು. ಇದೀಗ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ವಿದ್ಯಾರ್ಥಿ ಕಾಲಿನ ಬೆರಳಿನ ಉಗುರು ಕೂಡ ಕಿತ್ತು ಹಿಂಸೆ ಕೊಡಲಾಗಿದೆ.

ಅಷ್ಟೇ ಅಲ್ಲದೆ ಕತ್ತು, ದೇಹದ ಭಾಗದಲ್ಲಿ ರಕ್ತದ ಗಾಯಗಳಾಗಿವೆ. ಕಾಲೇಜ್‌ನವರೇ ಕೊಲೆ ಮಾಡಿ ಆತ್ಮಹತ್ಯೆಯ ಕಥೆ ಸೃಷ್ಟಿ ಮಾಡಿದ್ದಾರೆ. ಜೊತೆಗೆ ಪೊಲೀಸ್‌ ಇಲಾಖೆ, ಕುಟುಂಬಕ್ಕೆ ಮಾಹಿತಿ ನೀಡದೇ ಆಸ್ಪತ್ರೆಗೆ ಶವ ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಡೆತ್ ನೋಟ್ ಪತ್ತೆಯಾಗಿದ್ದು, “ನನ್ನ ಸಾವಿಗೆ ಯಾರೂ ಕಾರಣ ಅಲ್ಲ.. ನಾನೆ ಕಾರಣ. ಸಾರಿ ಮಮ್ಮಾ ಸಾರಿ ಪಪ್ಪಾ” ಎಂದು ಬರೆಯಲಾಗಿದೆ.

ಆದ್ರೆ ಕುಟುಂಬಸ್ಥರು ಇದು ನಮ್ಮಮಗ ಬರೆದ ಹ್ಯಾಂಡ್‌ರೈಟಿಂಗ್ ಅಲ್ವ, ಕಾಲೇಜ್ ನವರು ಸೃಷ್ಟಿ ಮಾಡಿರುವ ಡೆತ್ ನೋಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಕಾಲೇಜಿನಲ್ಲಿ ಈ ಹಿಂದೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದನ್ನು ಮುಚ್ಚಿ ಹಾಕಿದ್ದಾರೆ.

ನಮ್ಮ ಮಗನಿಗೂ ಕಿರಕುಳ ನೀಡಿದ್ದರು. ಇದು ಅಂತಿಮ ವರ್ಷ ಇರೋದ್ರಿಂದ ಈಶ್ವರ ಗಾದಗೆ ಸಮಾಧಾನ ಮಾಡಿದ್ದೇವು. ಆದ್ರೆ, ಕಾಲೇಜನವರು ಕೊಂದು ಬಿಟ್ರು ಅಂತ ತಂದೆ ಗೋಳಾಡಿದ್ದಾರೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಮುಂಡರಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!