ದೇವನಹಳ್ಳಿ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆ ವೇಗವಾಗಿ ಬರ್ತಿದ್ದ KA 50 MA 0789 ಸಂಖ್ಯೆಯ ಕಿಯಾ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ.
ಚಾಲಕನ ನಿಯಂತ್ರಣ ತಪ್ಪಿದ ಡಿವೈಡರ್ ಹಾರಿ, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಬಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತ ದುರ್ದೈವಿಯನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಮೋಹನ್ ಕುಮಾರ್ (33 ವರ್ಷ), ಸುಮನ್ (28 ವರ್ಷ), ಸಾಗರ್ (23ವರ್ಷ) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ವತ್ರೆಗೆ ದಾಖಲಿಸಲಾಗಿದೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.