Vacancies in hospitals to be filled within a month: Health Minister Dinesh Gundu Rao

ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳನ್ನು ತಿಂಗಳೊಳಗೆ ಭರ್ತಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.

ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ.

ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ.

ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ.

ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ.

ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.

ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!