JDS suffers a setback..

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

19 ವಾರ್ಡ್ಗಳಿಗೆ ನಡೆಯುವ ಚುನಾವಣೆಗೆ ಸಲ್ಲಿಕೆಯಾಗಿದ್ದ ಒಟ್ಟು 82 ನಾಮಪತ್ರಗಳ ಪೈಕಿ 5 ನಾಮಪತ್ರಗಳು ತಿರಸ್ಕೃತವಾಗಿದ್ದವು. ಒಟ್ಟು 74 ಅಭ್ಯರ್ಥಿಗಳಿಂದ 77 ನಾಮಪತ್ರಗಳ ಸಲ್ಲಿಕೆಯಾಗಿ ಕ್ರಮಬದ್ಧವಾಗಿದ್ದವು.

ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನದಂದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದಾರೆ. ಚುನಾವಣೆಯ ಅಂತಿಮ ಕಣದಲ್ಲಿ ಕಾಂಗ್ರೆಸ್ನಿಂದ 19, ಬಿಜೆಪಿಯಿಂದ 18, ಜೆಡಿಎಸ್ನಿಂದ 10 ಹಾಗೂ ಪಕ್ಷೇತರರಾಗಿ 17 ಅಭ್ಯರ್ಥಿಗಳು ಸೇರಿ 64 ಅಭ್ಯರ್ಥಿಗಳಿದ್ದಾರೆ.

ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ಮೊಟ್ಟಮೊದಲ ಬಾರಿಗೆ ಬಾಶೆಟ್ಟಿಹಳ್ಳಿ ಮೊದಲ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಜ್ಜಾಗಿದೆ. ಚುನಾವಣಾ ಫಲಿತಾಂಶ ತಾಲ್ಲೂಕಿನ ರಾಜಕೀಯ ಪಕ್ಷಗಳಲ್ಲಿ ಹಲವು ಕಾರಣಗಳಿಂದ ಬಾರಿ ಕುತೂಹಲ ಮೂಡಿಸಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರನ್ನು ಹೊಂದಿರುವ 2ನೇ ಗ್ರಾಮ ಪಂಚಾಯಿತಿ ಎನ್ನುವ ಹೆಗ್ಗಳಿಕೆ ಹೊಂದಿದ್ದ ಬಾಶೆಟ್ಟಿಹಳ್ಳಿ ಪಂಚಾಯಿತಿಯಲ್ಲಿ 47 ಸದಸ್ಯರು ಇದ್ದರು. ಕೈಗಾರಿಕಾ ಪ್ರದೇಶ ಹೊಂದಿರುವ ಇಲ್ಲಿ ಸಹಜವಾಗಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹ, ಬಜೆಟ್ ಮಂಡನೆಯು ನಡೆಯುತಿತ್ತು.

ಇಲ್ಲಿನ ಗ್ರಾಮ ಪಂಚಾಯಿತಿ ಸರ್ಕಾರದ ಯಾವುದೇ ಅನುದಾನ ಇಲ್ಲದೆ ಸ್ವಂತ ತೆರಿಗೆ ಹಣದಲ್ಲಿ ಒಳಚರಂಡಿ ಸೌಲಭ್ಯ ಕಲ್ಪಿಸಿ-ಕೊಂಡಿತ್ತು. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿದ್ದರಿಂದ ರಾಜ್ಯ ಸರ್ಕಾರದಿಂದ ನೀಡಲಾಗುವ ಗಾಂಧಿ ಸ್ವಚ್ಛ ಗ್ರಾಮ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿದೆ. ಈಗ ಮೊದಲ ಪಟ್ಟಣ ಪಂಚಾಯಿತಿ ಚುನಾವಣೆ ಎದುರಿಸುತ್ತಿದೆ. 19 ವಾರ್ಡ್‌ಗಳಿಗೆ ಸ್ಪರ್ಧೆ ನಡೆಯಲಿದೆ.

ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ತೀವ್ರ ಕುತೂಹಲ ಕೆರಳಿಸಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಒಮ್ಮತ ಮೂಡದ ಕಾರಣ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿದುಬಿದ್ದಿದ್ದು, ಎರಡೂ ಪಕ್ಷಗಳು ಪ್ರತ್ಯೇಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಗ್ರಾಮಪಂಚಾಯಿತಿಯಿಂದ ಲೋಕಸಭೆವರೆವಿಗೂ ಮೈತ್ರಿ ಮುಂದುವರೆಸುತ್ತೇವೆ ಎಂದು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಹೇಳಿದ್ದರೂ. ಆದರೆ ಬಾಶೆಟ್ಟಿಹಳ್ಳಿಯಲ್ಲಿ ಚುನಾವಣೆಗೆ ಮುನ್ನವೇ ಜೆಡಿಎಸ್ ಮುಖಂಡರನ್ನು ಬಿಜೆಪಿ ಆಪರೇಷನ್ ಕಮಲ ಮಾಡಿರುವುದು ಜೆಡಿಎಸ್ ಮುಖಂಡರನ್ನು ಕೆರಳಿಸಿದೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ 14 ವಾರ್ಡ್‌ಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದಾಗ್ಯೂ ನಾಮಪತ್ರ ಹಿಂಡೆಯಲು ಕೊನೆಯ ದಿನವಾದ ಇಂದು ಸಮನ್ವಯ ಸಮಿತಿ ನಡೆಸಲು ಜೆಡಿಎಸ್ ಮುಖಂಡರು ಮುಂದಾಗಿದ್ದರು.

ಆದರೆ ಒಮ್ಮತ ಮೂಡದ ಕಾರಣ ಸಭೆ ನಡೆಯದೆ, ತನ್ನ ಪ್ರಭಾವ ಇರುವ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಉಳಿಸಿ ಕೊಂಡಿರುವ ಜೆಡಿಸ್ ಬಿಜೆಪಿಗೆ ಸೆಡ್ಡು ಹೊಡೆದಿದೆ ಎನ್ನಲಾಗುತ್ತಿದೆ.
.
ಇನ್ನೂ ಜೆಡಿಎಸ್‌ನ ಪ್ರಭಾವಿ ಮುಖಂಡರನ್ನೇ ಹೈಜಾಕ್ ಮಾಡಿರುವ ಬಿಜೆಪಿ ಯಾವ ರೀತಿ ತಿರುಗೇಟು ನೀಡಲಿದೆ..? ಈ ಎರಡು ಪಕ್ಷಗಳ ಮೈತ್ರಿ ಮುರಿದು ಬಿದ್ದಿರುವುದರಿಂದ ಕಾಂಗ್ರೆಸ್ಗೆ ಯಾವ ರೀತಿ ಅನುಕೂಲವಾಗಲಿದೆ ಕಾದು ನೋಡಬೇಕಿದೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!