Legal fight against hate speech act: Nikhil Kumaraswamy

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ ನೀಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು; ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ” ಮಸೂದೆ ಮಂಡನೆಗೆ ನಮ್ಮ ಪಕ್ಷದಿಂದ ವಿರೋಧವಿದೆ ಎಂದು ಹೇಳಿದರು.

ಸಂವಿಧಾನ ನಮಗೆ ನೀಡಿರುವ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ವಿರೋಧ ಪಕ್ಷದ ಹಾಗೂ ಪತ್ರಿಕೋದ್ಯವನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದ ಪತನದ ದಿನ ದೂರವಿಲ್ಲ

ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ. ಈ ವಿಧೇಯಕದ ಮೂಲಕ ಕಾಂಗ್ರೆಸ್ ಸ ರ್ಕಾರವು 1975 ರ ತುರ್ತು ಪರಿಸ್ಥಿತಿಯನ್ನು ಮರುಕಳಿಸುವ ಕುತಂತ್ರ ಮಾಡುತ್ತಿದೆ, ಇದರಿಂದ ಕಾಂಗ್ರೆಸ್ ಸರ್ಕಾರದ ಪತನದ ದಿನ ದೂರವಿಲ್ಲ ಎಂದು ನಿಖಿಲ್ ಅವರು ವ್ಯಂಗ್ಯವಾಡಿದರು.

ಈ ವಿಧೇಯಕದವನ್ನ ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರ ಮಂಡಿಸಿದ್ದಾರೆ. ಅವರಿಗೆ ಏನು ಗೊತ್ತಿಲ್ಲ, ಈ ಬಿಲ್ನನ್ನು ಬೇರೆ ಯಾರೋ ತಯಾರಿಸಿ ಗೃಹ ಸಚಿವರ ಮೂಲಕ ಜಾರಿಗೆ ತರಲು ಯತ್ನಿಸುತ್ತಿದ್ದಾರೆ. ಆದರೆ ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ಕಾನೂನಿನ ಮೂಲಕ ಮಾಧ್ಯಮಗಳನ್ನು, ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹಾಗೂ ವಿರೋಧ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದು ಈ ಸರ್ಕಾರದಿಂದ ಸಾಧ್ಯವಿಲ್ಲ. ಈ ವಿಧೇಯಕದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಹೋರಾಟ ಮಾಡಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಉತ್ತರ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ, ಕಾಟಾಚಾರದ ಅಧಿವೇಶನ ನಡೀತಿದೆ

ಆರು ತಿಂಗಳಿಂದ ಉತ್ತರ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕಾಟಾಚಾರದ ಅಧಿವೇಶನ ನಡೀತಿದೆ. ರೈತರ ನೋವಿಗೆ ಸ್ಪಂದಿಸುವ ಅಧಿವೇಶನ ನಡಿಬೇಕು.ನಾಡಿನ ಸಮಗ್ರ ಬೆಳವಣಿಗೆಗೆ ಅಧಿವೇಶನ ಆಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ಆಟ ನಡೀತಿದೆ

ಕಾಂಗ್ರೆಸ್ ನಲ್ಲಿ ಈಗಾಗಲೇ ಬ್ರೇಕ್ ಫಾಸ್ಟ್, ಲಂಚ್ ಆಯ್ತು. ಈಗ ಬೆಳಗಾವಿಯಲ್ಲಿ ಡಿನ್ನರ್ ಮೀಟಿಂಗ್ ನಡೀತಿದೆ..ಜನತೆಯ ಸಮಸ್ಯೆ ಕೈ ಬಿಟ್ಟು ಯಾರು ಸಿಎಂ ಕುರ್ಚಿಯಲ್ಲಿ ಕೂರಬೇಕು ಎಂಬ ಚರ್ಚೆ ಆಗ್ತಿದೆ.ರಾಜ್ಯ ಸರಕಾರದಲ್ಲಿ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆ ಎಂದು ಕಿಡಿಕಾರಿದರು.

ಜನರ ಬಗ್ಗೆ ಕಾಳಜಿ ಇಲ್ಲ, ಕುರ್ಚಿ ಕಮಿಟ್ಮೆಂಟ್ ಅಷ್ಟೇ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ನಲ್ಲಿ ಹೋಡಾಡುವುದಕ್ಕೆ 47 ಕೋಟಿ ಬಿಲ್ ಆಗಿದೆ. ಸಿದ್ರಾಮಣ್ಣ ರಸ್ತೆಯಲ್ಲಿ ಓಡಾಡಿದ್ರೆ ಗುಂಡಿ ಎಷ್ಟು ಇದ್ದಾವೆ ಅನ್ನೋದು ಗೊತ್ತಾಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಅಸಹಾಯಕತೆ ನೋಡೋಕೆ ಆಗ್ತಿಲ್ಲ.ಅವರೇ ಹೈಕಮಾಂಡ್ ಜೊತೆ ಮಾತಾಡುತ್ತೇವೆ ಅಂತಾರೆ. ಯತೀಂದ್ರ ಯಾಕೆ ಆ ರೀತಿ ಹೇಳ್ತಿದ್ದಾರೆ ಅನ್ನೋದು ಗೊತ್ತಿಲ್ಲ. ರಾಜ್ಯದ ಅರ್ಥಿಕ ಪರಿಸ್ಥಿತಿ ಏನಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು

ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು, ಮಾಜಿ ವಿಧಾನಪರಿಷತ್ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರು, ವಕ್ತಾರರಾದ ಶ್ರೀ ಗಂಗಾಧರ್ ಮೂರ್ತಿಅವರು, ಶ್ರೀ ಪ್ರದೀಪ್ ಕುಮಾರ್ ಅವರು ಜತೆಯಲ್ಲಿದ್ದರು.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!