ಚೆನ್ನೈ: ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ(Narendra Modi) ಅವರ ಉತ್ತರಾಧಿಕಾರಿಯನ್ನು ಸ್ವಯಂ ಮೋದಿ ಹಾಗೂ ಬಿ.ಜೆ.ಪಿ. ನಿರ್ಧರಿಸುತ್ತದೆ, ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ (Mohan Bhagwat) ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎದುರಾದ ಮೋದಿ ಉತ್ತರಾಧಿಕಾರಿ ಯಾರೆಂಬ ಪ್ರಶ್ನೆಗೆ ಉತ್ತರಿಸಲು ಭಾಗವತ್ ನಿರಾಕರಿಸಿದರು.
ಈ ವಿಷಯದ ಬಗ್ಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಸೇರಿ ಚರ್ಚಿಸಿ ನಿರ್ಧರಿಸಬೇಕು ಎಂದು ಹೇಳಿದ್ದಾರೆ.