ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ 3 ಕಡೆ ಸ್ಥಳ ಗುರುತು..!

2nd international airport of the state is marked on these 3 sides..!

ಕೆ.ಎಂ. ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (2nd international airport) ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ.

2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ.

ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂಥ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು ಯೋಜನೆಗಳನ್ನಾದರೂ ನಿರ್ವಹಿಸಿರುವ/ಸಲಹಾ ವರದಿ ನೀಡಿರುವಂತಹ ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಬಹುದು.

ಟೆಂಡರ್ ನಲ್ಲಿ ಆಯ್ಕೆಯಾಗುವ ಸಂಸ್ಥೆಯು ನಾವು ಸೂಚಿಸುತ್ತಿರುವ ಮೂರೂ ಸ್ಥಳಗಳ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆಯಂಥ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆ, ಅಭಿವೃದ್ಧಿ, ಶಬ್ದ ಮತ್ತು ವಿಮಾನ ನಿಲ್ದಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾದಿಗಳತ್ತ ಗಮನ ಹರಿಸಲಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ ಉದ್ದೇಶಿತ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ.

ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ಅವರು ನುಡಿದಿದ್ದಾರೆ.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆಯೂ ಸಲಹಾ ಸಂಸ್ಥೆ ಅಧ್ಯಯನ ನಡೆಸಲಿದೆ.

ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿನಲ್ಲಿ ಮೂರೂ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ‌ ಎನ್ನುವ ಅಭಿಪ್ರಾಯ ಕೂಡ ಸಲಹಾ ಸಂಸ್ಥೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2033ರ ಹೊತ್ತಿಗೆ ನಾವು ಮತ್ತೊಂದು ವಿಮಾನ ನಿಲ್ದಾಣ ಹೊಂದಬೇಕಾಗಿದೆ.

ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ಹೊಸದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ಪಾಟೀಲ ವಿವರಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]