ದೊಡ್ಡಬಳ್ಳಾಪುರ: ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಕಾಡನೂರು ನಿವಾಸಿ ಮಧುಸೂದನ್ (49 ವರ್ಷ) ಕಾರ್ತಿಕ್ (25 ವರ್ಷ) ಎಂದು ಗುರುತಿಸಲಾಗಿದೆ.
ಕಾರ್ತಿಕ್ ಅವರನ್ನು ಗುರಿಯಾಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದ್ದು, ಮಗನ ರಕ್ಷಸಿಲು ಮುಂದಾದ ತಂದೆ ಮಧುಸೂದನ್ ಅವರ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯರು ಗಾಯಗಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಕಾರ್ತಿಕ್‌ಗೆ ಗಂಭೀರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.