Fight to save the voting rights of 140 crore people of the country: DCM D.K. Shivakumar

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ.

ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ.

ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜ್ಯದ ಸುಮಾರು 4 ಸಾವಿರ ಕಾರ್ಯಕರ್ತರು ಭಾಗಿ

ದೆಹಲಿಯ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸುವ 1500 ಕಾರ್ಯಕರ್ತರಿಗೆ ನಾವು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದೇವೆ. ಸುಮಾರು 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮ ವ್ಯವಸ್ಥೆ ತಾವೇ ಮಾಡಿಕೊಂಡಿದ್ದಾರೆ.

ಕೆಲವರು ವಿಮಾನ, ಮತ್ತೆ ಕೆಲವರು ರೈಲಲ್ಲಿ ಆಗಮಿಸಿದ್ದಾರೆ. ಸುಮಾರು 3500 ರಿಂದ 4000 ಜನ ಪ್ರತಿಭಟನೆಗೆ ಬಂದಿದ್ದಾರೆ. ಮತಕಳ್ಳತನ ವಿರುದ್ಧ ರಾಜ್ಯದಲ್ಲಿ ನಡೆದ ಸಹಿಸಂಗ್ರಹ ಅಭಿಯಾನದಲ್ಲಿ 1.42 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ.

ಇಲ್ಲಿ ಸೇರಿರುವ ನಾಯಕರು, ಕಾರ್ಯಕರ್ತರೇ ಈ ಹೋರಾಟದ ಉತ್ಸಾಹಕ್ಕೆ ಸಾಕ್ಷಿ. ಇಲ್ಲಿರುವ ಪ್ರತಿಯೊಬ್ಬರೂ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಬೇಕು, ಮತದಾನದ ಹಕ್ಕು ಕಾಪಾಡಬೇಕು ಎಂದು ಬಂದಿದ್ದಾರೆ ಎಂದು ತಿಳಿಸಿದರು.

ದೆಹಲಿಗೆ ಬರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆಯಂತೆ. ವಾಹನ ದೆಹಲಿಯೊಳಗೆ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾಕೆ ಗಾಬರಿಯಾಗುತ್ತಿದೆ ಗೊತ್ತಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಕಚೇರಿಗೆ ಬರುವಂತೆ ನಮಗೆ ಆಹ್ವಾನ ನೀಡಿದ್ದಾರೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಅಲ್ಲಿಂದ ನಾವು ಬಸ್ ಮೂಲಕ ರಾಮಲೀಲಾ ಮೈದಾನಕ್ಕೆ ತೆರಳುತ್ತೇವೆ. ಈ ಪ್ರತಿಭಟನೆಗಾಗಿ ನಾವು ನಮ್ಮ ಕಾರ್ಯಕರ್ತರಿಗೆ ವಿಶೇಷವಾಗಿ ಚಳಿ ವಾತಾವರಣಕ್ಕೆ ಅನುಕೂಲವಾಗುವಂತೆ ಟೀ ಶರ್ಟ್ ಮಾಡಿಸಲಾಗಿದೆ” ಎಂದು ತಿಳಿಸಿದರು.

ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ.

ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು.

ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!