
ದೊಡ್ಡಬಳ್ಳಾಪುರ: ಉದ್ಯಮಿಗಳು, ಮಾಜಿ ಸಚಿವರು, ಹಿರಿಯ ಮುಖಂಡರು, ವೀರಶೈವ ಮಹಾಸಭೆಯ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪರ (Shamanur Shivashankarappa) ಅವರ ನಿಧನ ನೋವಿನ ವಿಚಾರವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ (T. Venkataramaniah) ಹೇಳಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಮನೂರು ಶಿವಶಂಕರಪ್ಪ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಹಿರಿಯರ ಅಗಲಿಕೆಯಿಂದ ರಾಜ್ಯವು ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ.
ಅಗಲಿದ ಶಿವಶಂಕರಪ್ಪನವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ, ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟಿ.ವೆಂಕಟರಮಣಯ್ಯ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.